LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

14 ವರ್ಷಗಳ ಬಳಿಕ ಲಂಕಾದಲ್ಲಿ ಟೆಸ್ಟ್ ಸರಣಿ ಗೆದ್ದ ಕಾಂಗರೂಗಳು

ಗಾಲೆ: ಆಲ್‍ರೌಂಡ್ ಪ್ರದರ್ಶನದ ಮೂಲಕ ಮಿಂಚಿದ ಆಸ್ಪ್ರೇಲಿಯಾ ತಂಡ ಇಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಒಂಬತ್ತು ವಿಕೆಟ್‍ಗಳಿಂದ ಶ್ರೀಲಂಕಾ ತಂಡವನ್ನು ಮಣಿಸಿತು. ಇದರೊಂದಿಗೆ ಎರಡು ಪಂದ್ಯಗಳ ಸರಣಿಯನ್ನು 2-0 ಅಂತರದಲ್ಲಿ ಗೆದ್ದುಕೊಂಡ ಆಸ್ಪ್ರೇಲಿಯಾ ತಂಡ, 14 ವರ್ಷಗಳ ತರುವಾಯ ಶ್ರೀಲಂಕಾದಲ್ಲಿ ಮೊದಲ ಟೆಸ್ಟ್ ಸರಣಿ ಗೆದ್ದ ಸಾಧನೆ ಮಾಡಿದೆ. 2011ರಲ್ಲಿ ಕೊನೆಯದಾಗಿ ಲಂಕಾದಲ್ಲಿ ಟೆಸ್ಟ್ ಸರಣಿ ಜಯಿಸಿತ್ತು.

ಪ್ರಥಮ ಇನ್ನಿಂಗ್ಲ್ ನಲ್ಲಿ 156 ರನ್ ಗಳಿಸಿದ್ದ ವಿಕೆಟ್ ಕೀಪರ್ ಬ್ಯಾಟರ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ಇನ್ನು ಪ್ರಥಮ ಟೆಸ್ಟ್ ನಲ್ಲಿ ಶತಕದೊಂದಿಗೆ 10 ಸಾವಿರ ರನ್ ಪೂರೈಸಿದ್ದ, ಇಡೀ ಟೂರ್ನಿಯಲ್ಲಿ ಒಟ್ಟು 272 ರನ್ ಗಳಿಸಿದ್ದ ನಾಯಕ ಸ್ಟೀವ್ ಸ್ಮಿತ್ ಅವರು ಅರ್ಹವಾಗಿ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಈಗಾಗಾಲೇ ಐಸಿಸಿ ಟೆಸ್ಟ್ ಚಾಂಪಿಯನ್‍ಷಿಪ್ ಫೈನಲ್‍ಗೆ ಅರ್ಹತೆ ಗಳಿಸಿದ್ದ ಆಸ್ಪ್ರೇಲಿಯಾ, ಅಂಕಪಟ್ಟಿಯಲ್ಲಿ ಶೇ. 67.54 ಅಂಕಗಳೊಂದಿಗೆ ದ್ವಿತೀಯ ಸ್ಥಾನಕ್ಕೆ ತೃಪ್ತಿಪಟ್ಟಿತು. ಮೊದಲ ಸಲ ಫೈನಲ್ ಪ್ರವೇಶಿಸಿರುವ ದಕ್ಷಿಣ ಆಫ್ರಿಕಾ ತಂಡ ಶೇ. 69.44 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು