LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಮೈಸೂರಿನ ಪ್ಯಾರಾ ಅಥ್ಲೀಟ್ ಶಿಲ್ಪಾಗೆ 15 ಲಕ್ಷ ನಗದು ಬಹುಮಾನ, ಗ್ರೂಪ್-ಬಿ ಹುದ್ದೆ


ಬೆಂಗಳೂರು: ಪ್ಯಾರಾ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ  ಭಾಗವಹಿಸಿ ಕಂಚಿನ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿರುವ ಕೆ.ಎಸ್ ಶಿಲ್ಪಾ  ಅವರಿಗೆ ಅವರಿಗೆ 15 ಲಕ್ಷ ರೂ. ನಗದು ಬಹುಮಾನ ಹಾಗೂ ಸರ್ಕಾರದ ಗ್ರೂಪ್-ಬಿ ಹುದ್ದೆ ನೀಡಿ ಗೌರವಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಎಂ.ಎನ್.ಅನುಚೇತ್ ತಿಳಿಸಿದರು.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆವತಿಯಿಂದ ಇಂದು ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ಯಾರಾ ಕಾಮನ್‌ವೆಲ್ತ್ ಕ್ರೀಡಾಕೂಟದ ಕಂಚಿನ ಪದಕ ವಿಜೇತೆ ಕೆ.ಎಸ್ ಶಿಲ್ಪಾ ಅವರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ಇದನ್ನೂ ಓದಿ: ಕಾಮನ್‌ವೆಲ್ತ್ ಗೇಮ್ಸ್; ಮೈಸೂರಿನ ಪ್ಯಾರಾ ಅಥ್ಲೀಟ್ ಶಿಲ್ಪಾರನ್ನು ಗೌರವಿಸಿದ ಹೆಚ್‌ಡಿಕೆ ಇಂದು ಈ ಚಿಕ್ಕ ಕಾರ್ಯಕ್ರಮ ಕ್ರೀಡಾಪಟುಗಳಿಗೆ ನವ ಚೈತನ್ಯ ತುಂಬಲಿದೆ. ಶಿಲ್ಪ ಕೆ.ಎಸ್. ಅವರ ಈ ಸಾಧನೆ ಎಲ್ಲರಿಗೂ ಮಾದರಿಯಾಗಿದೆ. ಈಗಾಗಲೇ ಗ್ಲಾಸ್ಗೋನಲ್ಲಿ ನಡೆದ 2026 ರ ಪ್ಯಾರಾ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿದ 8 ಜನರಿಗೆ ಸರ್ಕಾರದವತಿಯಿಂದ ತಲಾ 5 ಲಕ್ಷ ರೂ. ನೀಡಲಾಗಿದೆ. ಪ್ಯಾರಾ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಕಂಚಿನ ಪದಕ ಪಡೆದು ರಾಜ್ಯಕ್ಕೆ ಕೀರ್ತಿ ತಂದಿರುವ ಕೆ.ಎಸ್ ಶಿಲ್ಪಾ ಅವರಿಗೆ ಅವರಿಗೆ 15 ಲಕ್ಷ ರೂ. ನಗದು ಬಹುಮಾನ ಹಾಗೂ ಸರ್ಕಾರದ ಗ್ರೂಪ್-ಬಿ ಹುದ್ದೆ ನೀಡಿ ಗೌರವಿಸಲಾಗುವುದು. ಇನ್ನುಳಿದಂತೆ ಸರ್ಕಾರದ ಎಲ್ಲಾ ಸವಲತ್ತುಗಳನ್ನ ಒದಗಿಸಲಾಗುವುದು. ಶೀಘ್ರದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಂದ ಶಿಲ್ಪ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಕಾಮನ್‌ವೆಲ್ತ್ ಕ್ರೀಡಾಕೂಟಕ್ಕೆ ತೆರೆ: ಭಾರತಕ್ಕೆ ಧ್ವಜ ಹಸ್ತಾಂತರ
ಇದಕ್ಕೂ ಮುನ್ನ ಶಿಲ್ಪಾರನ್ನ ಸನ್ಮಾನಿಸಿದ ವಿಧಾನ ಪರಿಷತ್ ಸದಸ್ಯ ಹಾಗೂ ಕರ್ನಾಟಕ ಒಲಂಪಿಕ್ಸ್ ಅಸೋಸಿಯೇಷನ್ ಅಧ್ಯಕ್ಷ ಗೋವಿಂದರಾಜು ಮಾತನಾಡಿ, ಗ್ಲಾಸ್ಗೋನಲ್ಲಿ ನಡೆದ 2026 ರ ಪ್ಯಾರಾ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸಿ ಶಾರ್ಟ್ ಪುಟ್ ಕ್ರೀಡೆಯಲ್ಲಿ ಕಂಚಿನ ಪದಕ ಪಡೆಯುವ ಮೂಲಕ ದೇಶಕ್ಕೆ ಹಾಗೂ ನಮ್ಮ ಕರ್ನಾಟಕಕ್ಕೆ ಕೀರ್ತಿ ತಂದಿರುವ ಕೆ.ಎಸ್ ಶಿಲ್ಪಾ ಅವರು ಈ ನಾಡಿನ ಸಾವಿರಾರು ಗ್ರಾಮೀಣ ಭಾಗದ ಕ್ರೀಡಾಪಟುಗಳಿಗೆ ಸ್ಪೂರ್ತಿಯಾಗಿದ್ದಾರೆ ಎಂದು ಹರ್ಷ ವ್ಯಕ್ತಪಡಿಸಿದರು. ವಿಜೇತರು ತಾಯಿ ನಾಡಿಗೆ ಆಗಮಿಸಿದಾಗ ಈ ರೀತಿಯ ಗೌರವ ಸಲ್ಲಿಸುವ ಮೂಲಕ ಕರ್ನಾಟಕ ಕ್ರೀಡಾ ಇಲಾಖೆ ಕ್ರೀಡಾ ಪಟುಗಳಲ್ಲಿ ಸ್ಪೂರ್ತಿ ತುಂಬಿದೆ. ಈಗಾಗಲೇ ಕ್ರೀಡಾ ಇಲಾಖೆ ಒಲಿಂಪಿಕ್ಸ್ ಪದಕ ಗೆದ್ದವರಿಗೆ ಮೊದಲ ನಗದು ಬಹುಮಾನ 6 ಕೋಟಿ ರೂ., 2ನೇ ಸ್ಥಾನ ಪಡೆದವರಿಗೆ 5 ಕೋಟಿ ರೂ. ಹಾಗೂ ತೃತೀಯ ಸ್ಥಾನಕ್ಕೆ 3 ಕೋಟಿ ರೂ. ಬಹುಮಾನ ಘೋಷಿಸಿದೆ. ಜೊತೆಗೆ ಸರ್ಕಾರಿ ಹುದ್ದೆಯನ್ನು ಸಹ ನೀಡಲಾಗುತ್ತಿದೆ. ಇದೇ ಮಾದರಿಯಲ್ಲಿ ಇತರೆ ಅಂತಾರಾಷ್ಟಿçÃಯ ಹಾಗೂ ರಾಷ್ಟಿçÃಯ ಕ್ರೀಡಾಕೂಟಗಳಲ್ಲಿ ಪ್ರಶಸ್ತಿ ವಿಜೇತರಿಗೆ ಅನೇಕ ಆಕರ್ಷಕ ಕೊಡುಗೆಗಳನ್ನ ಕರ್ನಾಟಕ ರಾಜ್ಯ ಘೋಷಿಸಿದೆ.ಕ್ರೀಡಾ ಪಟುಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಗಳಲ್ಲಿ ಮೀಸಲಾತಿ ತಂದ ಮೊದಲ ರಾಜ್ಯ ಕರ್ನಾಟಕವಾಗಿದೆ. ಹೆಚ್ಚಿನ ಯುವಕ ಯುವತಿಯರು ಕ್ರೀಡೆಯಲ್ಲಿ ಹೆಚ್ಚಿನ ಶ್ರಮ ಪಟ್ಟು ಗೆಲ್ಲುವ ಮೂಲಕ ದೇಶಕ್ಕೆ ಹಾಗೂ ರಾಜ್ಯಕ್ಕೆ ಕೀರ್ತಿ ತರಬೇಕೆಂದು ಕರೆ ನೀಡಿದರು. ಇನ್ನೂ ಕ್ರೀಡಾಪಟು ಕೆ.ಎಸ್ ಶಿಲ್ಪಾ ಮಾತನಾಡಿ, ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಬಂದಿರುವುದು ತುಂಬಾ ಖುಷಿಯಾಗಿದೆ. ಈ ರೀತಿಯ ಸ್ವಾಗತ ನೀಡಿ ಸನ್ಮಾನಿಸಿದ್ದಕ್ಕೆ ಸರ್ಕಾರಕ್ಕೆ ಧನ್ಯವಾದಗಳು. ಈ ನನ್ನ ಸಾಧನೆಗೆ ನನ್ನ ಕೋಚ್‌ಗಳು ಮುಖ್ಯ ಕಾರಣ, ಅವರೆಲ್ಲರಿಗೂ ಧನ್ಯವಾದ ತಿಳಿಸಲು ಬಯಸುತ್ತೇನೆ. ಪ್ರತಿಯೊಬ್ಬರು ಶ್ರಮಿಸಿದ್ರೆ ಸಾಧನೆ ಖಚಿತ, ನಮ್ಮಂತ ಕ್ರೀಡಾಪಟುಗಳಿಗಾಗಿ ಸರ್ಕಾರ ಸಹ ಅನೇಕ ಪ್ರೋತ್ಸಾಹಕ ಕ್ರಮಗಳನ್ನ ಕೈಗೊಂಡಿದೆ. ಇದರಿಂದ ಅನೇಕರು ಸಾಧನೆಗೆ ಧುಮುಕುವಂತೆ ಹುರಿದುಂಬಿಸುತ್ತದೆ. ಕಷ್ಟ ಪಟ್ಟರೆ ಪ್ರತಿಫಲ ಗ್ಯಾರಂಟಿ ಎಂದು ಹೇಳಿದರು.ಇದೇ ಸಂದರ್ಭದಲ್ಲಿ ಮುಖ್ಯ ತರುಬೇತುದಾರ ರಾಘವೇಂದ್ರ ಸೇರಿದಂತೆ ಸಹಾಯಕ ತರುಬೇತುದಾರ ಸತ್ಯ ನಾರಾಯಣ ಹಾಗೂ ಪುಷ್ಪ ನಿರಂಜನ ಪ್ರಸಾದ್ ಅವರನ್ನು ಸಹ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಅಂತರರಾಷ್ಟಿçÃಯ ಕೋಚ್ ಎಸ್.ಡಿ ಈಶನ್, ಕ್ರೀಡಾಪಟುಗಳಾದ ಎಮ್ ಮಹಾದೇವ್, ಅರ್ಜುನ್ ಹಾಲಪ್ಪ ಸೇರಿದಂತೆ ಅನೇಕ ಕ್ರೀಡಾಪಟುಗಳು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.ವಿಶೇಷ ಚೇತನರ ಇಲಾಖೆಯಿಂದ ಹಾಗೂ ಮೈಸೂರು ಕ್ರೀಡಾ ವಿಭಾಗದ ವತಿಯಿಂದಲೂ ಕೆ.ಎಸ್ ಶಿಲ್ಪಾ ಅವರನ್ನ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅನೇಕ ಜನಪದ ಕಲಾತಂಡಗಳು ಕೆ.ಎಸ್ ಶಿಲ್ಪಾ ಅವರಿಗೆ ಸ್ವಾಗತ ಕೋರಿದ್ದು ವಿಶೇಷವಾಗಿತ್ತು. ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ: ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ಗೆದ್ದು ಕರ್ನಾಟಕದ ಕೀರ್ತಿಯನ್ನು ಹೆಚ್ಚಿಸಿದ ಪ್ಯಾರಾ ಅಥ್ಲೀಟ್ ಶಿಲ್ಪಾ ಅವರಿಗೆ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟಿçÃಯ ವಿಮಾನ ನಿಲ್ದಾಣ, ಟರ್ಮಿನಲ್1 ರಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಸ್ವಾಗತ ಕೋರಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST