LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

2025ರ ಅಕ್ಟೋಬರ್ 2ರಂದು ಗ್ರ್ಯಾಂಡ್ ರಿಲೀಸ್ ಆಗಲಿದೆ ಕಾಂತಾರ ಚಾಪ್ಟರ್ 1

ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ಮೂಡಿಬರುತ್ತಿರುವ ಕಾಂತಾರ ಚಾಪ್ಟರ್ 1 ಸಿನಿಮಾ ಈಗ ಬಿಗ್ ಬ್ರೇಕಿಂಗ್ ಸುದ್ದಿಯ ಜತೆಗೆ ಆಗಮಿಸಿದೆ. ಈಗಾಗಲೇ ಶೂಟಿಂಗ್ ಹಂತದಲ್ಲಿರುವ ಈ ಸಿನಿಮಾದ ಬಿಡುಗಡೆಯ ದಿನಾಂಕ ರಿವೀಲ್ ಆಗಿದೆ. 2025ರ ಅಕ್ಟೋಬರ್ 2ರ ಗಾಂಧಿ ಜಯಂತಿ ದಿನದಂದು ಕಾಂತಾರ ಚಾಪ್ಟರ್ 1 ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ.

ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಸೇರಿ ಇನ್ನೂ ಹಲವು ಭಾಷೆಗಳಲ್ಲಿ ಈ ಸಿನಿಮಾ ಗ್ರ್ಯಾಂಡ್ ಆಗಿ ರಿಲೀಸ್ ಆಗಲಿದೆ. ಇತ್ತೀಚಿನ ದಿನಗಳಲ್ಲಿ ಬಹು ನಿರೀಕ್ಷಿತ ಕನ್ನಡ ಸಿನಿಮಾಗಳಲ್ಲಿ ಒಂದಾದ ಕಾಂತಾರ ಚಾಪ್ಟರ್ 1 ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ಈ ಸಿನಿಮಾ 2025ರ ಅಕ್ಟೋಬರ್ 2ರ ಗಾಂಧಿ ಜಯಂತಿ ಪ್ರಯುಕ್ತ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಆಗಲಿದೆ.

ರಾತ್ರಿ ಬೆಚ್ಚಗಿನ ನೀರಿನಲ್ಲಿ 1 ಚಮಚ ಅಜವಾನ್ ತಿನ್ನುವುದರಿಂದ ಈ ಕಾಯಿಲೆ ಗುಣಮುಖವಾಗುತ್ತದೆ..! ಹೊಂಬಾಳೆ ಫಿಲಂಸ್ ಈ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದು, ಕೈ ಬಿಚ್ಚಿ ಈ ಸಿನಿಮಾಕ್ಕೆ ಬಂಡವಾಳ ಹೂಡುತ್ತಿದೆ. ಅದರಂತೆ ಈಗಾಗಲೇ ಸಿನಿಮಾ ರಿಚ್ ಆಗಿಯೇ ಮೂಡಿಬರುತ್ತಿದೆ. ಕುಂದಾಪುರದಲ್ಲಿ ಐತಿಹಾಸಿಕ ಕದಂಬ ಸಾಮ್ರಾಜ್ಯವನ್ನು ಚಿತ್ರತಂಡ ಮರುಸೃಷ್ಟಿಸಿ, ಶೂಟಿಂಗ್ ಮುಂದುವರಿಸಿದೆ. ಈ ಮೂಲಕ ಪ್ರೇಕ್ಷಕನಿಗೆ ಶೌರ್ಯ, ಸಂಸ್ಕೃತಿ ಮತ್ತು ಅತೀಂದ್ರಿಯ ಯುಗಕ್ಕೆ ಕರೆದೊಯ್ಯಲಿದೆ.

ಈ ಸಿನಿಮಾ ಮತ್ತು ತಮ್ಮ ಪಾತ್ರದ ಸಲುವಾಗಿ ನಟ ಮತ್ತು ನಿರ್ದೇಶಕ ರಿಷಬ್ ಶೆಟ್ಟಿ, ವಿಶೇಷ ತಯಾರಿಯನ್ನೇ ಮಾಡಿಕೊಂಡಿದ್ದಾರೆ. ಕೇರಳದ ಅತ್ಯಂತ ಹಳೆಯ ಸಮರ ಕಲೆಯ ಪ್ರಕಾರಗಳಲ್ಲಿ ಒಂದಾದ ಕಲರಿಪಯಟ್ಟು ತರಬೇತಿ ಪಡೆದಿದ್ದಾರೆ. ಕಲೆಯನ್ನು ಕರಗತ ಮಾಡಿಕೊಳ್ಳಲು ಸಾಕಷ್ಟು ಶ್ರಮಿಸಿದ್ದಾರೆ. ಅದರಂತೆ ಅಚ್ಚುಕಟ್ಟಾಗಿ ಸಿನಿಮಾ ಮೂಡಿಬಂದಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು