LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

2027 ಡಿಸೆಂಬರ್‍ಗೆ ರೈಲ್ವೆ ಕಾಮಗಾರಿ ಪೂರ್ಣ: ವಿ.ಸೋಮಣ್ಣ

ಮಧುಗಿರಿ: ತುಮಕೂರು-ರಾಯದುರ್ಗ ಕಾಮ ಗಾರಿ 2027 ಡಿಸೆಂಬರ್ ಗೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.
ತಾಲ್ಲೂಕಿನ ದೊಡ್ಡೇರಿ ಮತ್ತು ಮಿಡಿಗೇಶಿ ಹೋಬಳಿಗಳಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ ಮಾತನಾಡಿದ ಅವರು ತುಮಕೂರು ರಾಯಮರ್ಗ ರೈಲ್ವೆ ಕಾಮಗಾರಿ ಯನ್ನು 2027 ಅಂತ್ಯಕ್ಕೆ ಪೂರ್ಣ ಗೊಳಿಸುವ ಜೊತೆಗೆ ಕ್ಷೇತ್ರದ ಶ್ರೀಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡುತ್ತೇನೆ ಎಂದು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಬಾಕಿ ಇರುವ ಹತ್ತಾರು ಕಾಮಗಾರಿಗಳನ್ನು ನನ್ನ ಅವಧಿಯೊಳಗೆ ಮಾಡಿ ಮುಗಿಸುವ ಜೊತೆಗೆ ಮಧುಗಿರಿ ಮತ್ತು ಕೊರಟಗೆರೆ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ ಎಂದರು.ಕೇಂದ್ರ ಸರ್ಕಾರದ ವಿಶೇಷ ಯೋಜನೆ ಅಡಿ ಉಚಿತ ಸಲಕರಣಾ ವಿತರಣೆ ಮಾಡಿದ ಅವರು ದಿವ್ಯಾಂಗ ರಿಗೆ ಯಾವುದೇ ಕುಂದು ಕೊರತೆ ಬಾರದಂತೆ ನೋಡಿಕೊಳ್ಳುವ ಪ್ರಧಾನಿ ಯವರ ಕಾರ್ಯಕ್ರಮ ಇದಾಗಿದೆ ಎಂದರು.

ವಿಶೇಷ ಚೇತನರಿಗೆ ಸರ್ಕಾರಿ ಉದ್ಯೋಗದಲ್ಲಿ ಶೇ.6 ಮೀಸಲಾತಿ ಕಲ್ಪಿಸಿದೆ.563 .85 ಕೋಟಿ ರೂಪಾಯಿಗಳನ್ನು ನಿಗದಿಪಡಿಸಿ 1341 ಕಟ್ಟಡಗಳನ್ನು ಕಟ್ಟಿದ್ದು, ದೇಶದಾದ್ಯಂತ 5 ಲಕ್ಷ ಶಾಲೆಗಳಲ್ಲಿ ದಿವ್ಯಾಂಗರಿಗೆ ಅನುಕೂಲ ಮಾಡಿ ಕೊಡಲಾಗಿದೆ ಎಂದರು.ಅಧಿಕಾರಿಗಳು ತಮ್ಮ ಜವಾಬ್ದಾರಿ ಅರಿತು ಶ್ರೀಸಾಮಾನ್ಯರ ಆಶೋತ್ತರಗಳಿಗೆ ಸ್ಪಂದಿಸಿ ಕೆಲಸ ಮಾಡಿ. ರಾಜಕೀಯ ಬಿಡಿ ಕೋಪ. ದ್ವೇಶ ಆಸೂಯೆ ಯಾರಿಗೂ ಒಳ್ಳೆಯದಲ್ಲ. ನಾವು ಚುನಾವಣೆ ವೇಳೆ ರಾಜಕೀಯ ಮಾಡೋಣ. ನಂತರ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸೋಣ ಎಂದು ಅಧಿಕಾರಿ ಮತ್ತು ಪಿಡಿಒಗಳಿಗೂ ಸಚಿವ ಸೋಮಣ್ಣ ಕೈ ಮುಗಿದು ಮನವಿ ಮಾಡಿದರು.

ಮಿಡಿಗೇಶಿ ಗ್ರಾಮದಲ್ಲಿ ರೈಲ್ವೆ ಉಪ ನಿಲ್ದಾಣ ನಿರ್ಮಿಸಿ ಎಂದು ಗ್ರಾಮಸ್ಥರು ಸೋಮಣ್ಣನವರಲ್ಲಿ ಮನವಿ ಮಾಡಿದಾಗ ಸ್ಥಳದಲ್ಲೇ ಇದ್ದರೈಲ್ವೆ ಅಧಿಕಾರಿಗಳಿಗೆ ಯಾವುದೇ ಕುಂಟು ನೆಪ ಹೇಳದೇ ಇದರ ಬಗ್ಗೆ ಗಮನ ಹರಿಸಿ ಎಂದು ಸೂಚಿಸಿದರು.ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಎಂ.ವಿ.ವೀರಭದ್ರಯ್ಯ, ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ತಾ.ಪಂ ಯೋಜನಾಧಿಕಾರಿ ಮಧುಸೂದನ್ ಹನುಮಂತರಾಯಪ್ಪ ವಲಯ ಅರಣ್ಯಾಧಿಕಾರಿ ಸುರೇಶ್, ಸಿಡಿಪಿಒ ಕಮಲ ಕೃಷಿ ಅಧಿಕಾರಿ ಹನುಮಂತರಾಯಪ್ಪ, ಸಿಂಧು, ಸಿದ್ದನಗೌಡ, ಜಿಲ್ಲಾ ಜೆಡಿಎಸ್ ಅಧ್ಯಕ್ಷ ಆಂಜನಪ್ಪ, ತುಮುಲ್ ಮಾಜಿ ಅಧ್ಯಕ್ಷ ಕೊಂಡವಾಡಿ ಚಂದ್ರಶೇಖರ್, ತಾ.ಜೆಡಿಎಸ್ ಅಧ್ಯಕ್ಷಬಡವನಹಳ್ಳಿ ಬಸವರಾಜು, ಬಿಜೆಪಿ ಮುಖಂಡ ಎಲ್.ಸಿ ನಾಗರಾಜು,ತಾ.ಬಿಜೆಪಿ ಅಧ್ಯಕ್ಷ ನಾಗೇಂದ್ರ ಬಡವನಹಳ್ಳಿ ಗ್ರಾಪಂ ಅಧ್ಯಕ್ಷೆ ಭಾನುಪ್ರಿಯಾ oಉಪಾಧ್ಯಕ್ಷ ಜಯಮ್ಮ,ರಂಗಾಪುರ ಗ್ರಾಪಂ ಅಧ್ಯಕ್ಷ ನಾಗೇಶ್, ಮಿಡಿಗೇಶಿ ಗ್ರಾಪಂ ಅಧ್ಯಕ್ಷೆ ಲಕ್ಷ್ಮಿ ದೇವಮ್ಮ,ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು