LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

2050ಕ್ಕೆ ಭಾರತದಲ್ಲಿ ವಿಶ್ವದಲ್ಲೇ ಅತಿಹೆಚ್ಚು ಮುಸ್ಲಿಮರು, ಹಿಂದೂಗಳ ಸಂಖ್ಯೆ ಗಣನೀಯ ಇಳಿಕೆ

ವದೆಹಲಿ: 2050 ರ ವೇಳೆಗೆ ಭಾರತವು ವಿಶ್ವದ ಅತಿದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶವಾಗಲಿದ್ದು, ಭಾರತವನ್ನು ಹೊರತುಪಡಿಸಿ ಉಳಿದೆಲ್ಲ ದೇಶಗಳಲ್ಲಿ ಹಿಂದೂ ಜನಸಂಖ್ಯೆ ಕಡಿಮೆಯಾಗಲಿದೆ ಎಂದು ವರದಿಯೊಂದು ಹೇಳಿದೆ.

ಅಮೇರಿಕನ್ ಚಿಂತಕರ ಚಾವಡಿ ಪ್ಯೂ ಸಂಶೋಧನಾ ಕೇಂದ್ರ ಈ ವರದಿ ನೀಡಿದ್ದು, 'ಎಲ್ಲಾ ಧಾರ್ಮಿಕ ಗುಂಪುಗಳಲ್ಲಿ ಮುಸ್ಲಿಮರು ಅತ್ಯಂತ ಕಿರಿಯ ಸರಾಸರಿ ವಯಸ್ಸು (30) ಹೊಂದಿರುವುದರಿಂದ, ಅದು ವಿಶ್ವದಲ್ಲೇ ವೇಗವಾಗಿ ಬೆಳೆಯುತ್ತಿರುವ ಗುಂಪಾಗಿದೆ.

2050 ರ ವೇಳೆಗೆ ಭಾರತವು ವಿಶ್ವದ ಅತಿದೊಡ್ಡ ಮುಸ್ಲಿಂ ಜನಸಂಖ್ಯೆಯನ್ನು ಹೊಂದಿರುವ ದೇಶವಾಗಲಿದೆ. ಅಂತೆಯೇ ಭಾರತವನ್ನು ಹೊರತುಪಡಿಸಿ ಉಳಿದೆಲ್ಲ ದೇಶಗಳಲ್ಲಿ ಹಿಂದೂ ಜನಸಂಖ್ಯೆ ಕಡಿಮೆಯಾಗಲಿದೆ ಎಂದು ವರದಿಯಲ್ಲಿ ಹೇಳಿದೆ.

ಮುಂಬರುವ ದಶಕಗಳಲ್ಲಿ ವಿಶ್ವದ ಜನಸಂಖ್ಯೆಯು ಶೇಕಡಾ 35 ರಷ್ಟು ಬೆಳೆಯುವ ನಿರೀಕ್ಷೆಯಿದ್ದರೂ, ಮುಸ್ಲಿಮರ ಸಂಖ್ಯೆ ಶೇಕಡಾ 73 ರಷ್ಟು ಹೆಚ್ಚಾಗುವ ನಿರೀಕ್ಷೆಯಿದೆ. ಪ್ರಮುಖವಾಗಿ 2050 ರ ಹೊತ್ತಿಗೆ ಮುಸ್ಲಿಮರ ಸಂಖ್ಯೆ 2.8 ಬಿಲಿಯನ್‌ಗೆ ತಲುಪುತ್ತದೆ. ವಾಸ್ತವವಾಗಿ, ಮುಸ್ಲಿಮರು ಇಡೀ ವಿಶ್ವದ ಜನಸಂಖ್ಯೆಗಿಂತ ವೇಗವಾಗಿ ಬೆಳೆಯುವ ಏಕೈಕ ಪ್ರಮುಖ ಧಾರ್ಮಿಕ ಗುಂಪಾಗಿದೆ.

2050ರ ವೇಳೆಗೆ ಭಾರತವು 31 ಕೋಟಿ ಮುಸ್ಲಿಮರನ್ನು ಹೊಂದಲಿದ್ದು, ಜಾಗತಿಕ ಮುಸ್ಲಿಂ ಜನಸಂಖ್ಯೆಯ 11% ರಷ್ಟಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಫಲವತ್ತತೆಯ ಪ್ರಮಾಣದಿಂದಾಗಿ, ಭಾರತದಲ್ಲಿ ಮುಸ್ಲಿಂ ಜನಸಂಖ್ಯೆಯು ವೇಗವಾಗಿ ಬೆಳೆಯುವ ನಿರೀಕ್ಷೆಯಿದೆ. 2010 ರಲ್ಲಿ, ಮುಸ್ಲಿಮರ ಒಟ್ಟು ಜನಸಂಖ್ಯೆಯ 14.4% ರಷ್ಟಿತ್ತು. ಆದರೆ 2050ರ ವೇಳೆಗೆ ಇದು 18.4% ಕ್ಕೆ ಏರಿಕೆಯಾಗುವ ನಿರೀಕ್ಷೆಯಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು