LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಇಂದು 2ನೇ ಏಕದಿನ ಪಂದ್ಯ: ಮಹಿಳಾ ತಂಡಕ್ಕೆ ಸವಾಲು

ಮುಂಬೈ: ಹರ್ಮನ್‍ಪ್ರೀತ್ ನೇತೃತ್ವದ ಭಾರತ ಮಹಿಳಾ ಕ್ರಿಕೆಟ್ ತಂಡ, ಆಸ್ಟ್ರೇಲಿಯಾ ವಿರುದ್ಧದ ಮೂರು ಏಕದಿನ ಪಂದ್ಯಗಳ ಸರಣಿಯ ಎರಡನೇ ಪಂದ್ಯವನ್ನು ಶನಿವಾರ ಆಡಲಿದೆ. ಸರಣಿ ಉಳಿಸಿಕೊಳ್ಳಬೇಕಾದರೆ ಭಾರತಕ್ಕೆ ಈ ಪಂದ್ಯದಲ್ಲಿ ಗೆಲುವು ಅನಿವಾರ್ಯ.ವಾಂಖೆಡೆ ಕ್ರೀಡಾಂಗಣದಲ್ಲೇ ನಡೆದ ಮೊದಲ ಪಂದ್ಯದಲ್ಲಿ ಭಾರತ ತಂಡ ಮೂರು ಓವರುಗಳಿಗೂ ಹೆಚ್ಚು ಎಸೆತಗಳಿರುವಂತೆ ಆರು ವಿಕೆಟ್‍ಗಳಿಂದ ಸೋಲನುಭವಿಸಿತ್ತು.

ಭಾರತ 282 (8 ವಿಕೆಟ್‍ಗೆ) ರನ್ ಗಳಿಸಿದ್ದರೂ, ಆಸ್ಟ್ರೇಲಿಯಾ ಅದನ್ನು ಬೆನ್ನಟ್ಟಿತ್ತು. ಇದು ಭಾರತಕ್ಕೆ, ತವರಿನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸತತ ಎಂಟನೇ ಸೋಲು ಆಗಿತ್ತು.ಜೆಮಿಮಾ ರಾಡ್ರಿಗಸ್ (82) ಮತ್ತು ಪೂಜಾ ವಸ್ತ್ರಾಕರ್ (62) ಮಾತ್ರ ಉತ್ತಮ ಬ್ಯಾಟಿಂಗ್ ಮಾಡಿದ್ದರು. ವೇಗ ಮತ್ತ ಸ್ಪಿನ್ ಬೌಲಿಂಗ್ ಪರಿಣಾಮಕಾರಿ ಆಗಿರಲಿಲ್ಲ. ಫೀಲ್ಡಿಂಗ್ ಕೂಡ ದುರ್ಬಲವಾಗಿತ್ತು.

ಸತತವಾಗಿ ಆಡುತ್ತಿರುವುದೂ ತಂಡದ ಮೇಲೆ ಪರಿಣಾಮ ಬೀರುವಂತೆ ಕಾಣುತ್ತಿದೆ. ಬರೇ 35 ದಿನಗಳ ಅಂತರದಲ್ಲಿ ಭಾರತ ಮೂರೂ ಮಾದರಿಗಳಲ್ಲಿ ಒಟ್ಟು 11 ಪಂದ್ಯಗಳನ್ನು ಆಡಿದೆ.ಅನಾರೋಗ್ಯದಿಂದ ಮೊದಲ ಪಂದ್ಯ ಕಳೆದುಕೊಂಡಿದ್ದ ಸ್ಮೃತಿ ಮಂದಾನಾ ಎರಡನೇ ಪಂದ್ಯಕ್ಕೆ ಲಭ್ಯರಾಗಿದ್ದಾರೆ. ಮೊದಲ ಪಂದ್ಯದಲ್ಲಿ ರಾಡ್ರಿಗಸ್ ಸಹ ಇನಿಂಗ್ಸ್ ವೇಳೆ ದಣಿದಿದ್ದರು.ಇನ್ನೊಂದೆಡೆ ಆಲಿಸಾ ಹೀಲಿ ನಾಯಕತ್ವದ ಆಸ್ಟ್ರೇಲಿಯಾ ತಂಡ ಮೊದಲ ಪಂದ್ಯದ ಸುಲಭ ಗೆಲುವಿನಿಂದ ಉತ್ತಮ ಆತ್ಮವಿಶ್ವಾಸದಿಂದ ಇದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು