ಬೆಂಗಳೂರು: ನಟ ದರ್ಶನ್ ಜೈಲು ಸೇರಿದ ಬಳಿಕ ಅವರ ಕುಟುಂಬದ ಬೆಂಬಲಕ್ಕೆ ನಿಂತಿದ್ದ ನಟ ಧನ್ವೀರ್ ಹಾಗೂ ದರ್ಶನ್ ಪತ್ನಿ ವಿಜಯಲಕ್ಷ್ಮೀ ನಡುವಿನ ಮನಸ್ತಾಪದ ವದಂತಿಗಳು ಇದೀಗ ಹೊಸ ತಿರುವು ಪಡೆದುಕೊಂಡಿವೆ. ಇಬ್ಬರ ನಡುವಿನ ಭಿನ್ನಾಭಿಪ್ರಾಯದ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಈ ವಿವಾದ ಪೊಲೀಸ್ ಠಾಣೆಯ ಮೆಟ್ಟಿಲೇರಿದೆ.