LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

33 ಎಸೆತಗಳಲ್ಲಿ ಸಿಕಂದರ್ ರಾಜಾ ಶತಕ, ವಿಶ್ವ ದಾಖಲೆ ನಿರ್ಮಿಸಿದ ಜಿಂಬಾಬ್ವೆ!

ಭಾರತ ಮತ್ತು ಶ್ರೀಲಂಕಾದ ಜಂಟಿ ಆತಿಥ್ಯದಲ್ಲಿ ನಡೆಯಲಿರುವ 2026ರ ಸಾಲಿನ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿ ಸಲುವಾಗಿ ನಡೆಯುತ್ತಿರುವ ಆಫ್ರಿಕಾ ಭಾಗದ ಪ್ರಾಂತೀಯ ಅರ್ಹತಾ ಸುತ್ತಿನ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಜಿಂಬಾಬ್ವೆ ತಂಡ ನೂತನ ವಿಶ್ವ ದಾಖಲೆ ನಿರ್ಮಿಸಿದೆ.

ಗಾಂಬಿಯಾ ವಿರುದ್ಧ ನಡೆದ 'ಬಿ' ಗುಂಪಿನ ಪಂದ್ಯದಲ್ಲಿ ಕ್ಯಾಪ್ಟನ್ ಸಿಕಂದರ್ ರಾಜಾ, ಕೇವಲ 33 ಎಸೆತಗಳಲ್ಲಿ ಬಾರಿಸಿದ ಮನಮೋಹಕ ಶತಕದ ಬಲದಿಂದ ಜಿಂಬಾಬ್ವೆ ತಂಡ 20 ಓವರ್‍ಗಳಲ್ಲಿ 344/4 ರನ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದೆ.ನೈರೋಬಿಯಲ್ಲಿನ ರೌರಾಕ ಸ್ಪೋರ್ಟ್ಸ್ ಕ್ಲಬ್ ಗ್ರೌಂಡ್‍ನಲ್ಲಿ ಬುಧವಾರ (ಅಕ್ಟೋಬರ್ 23) ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಜಿಂಬಾಬ್ವೆ ತಂಡ 20 ಓವರ್‍ಗಳಲ್ಲಿ 4 ವಿಕೆಟ್‍ಗಳ ನಷ್ಟಕ್ಕೆ 344 ರನ್‍ಗಳ ಬೃಹತ್ ಮೊತ್ತ ದಾಖಲಿಸಿತು. ಇದು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‍ನಲ್ಲಿ ವಿಶ್ವ ದಾಖಲೆಯ ಬೃಹತ್ ಮೊತ್ತವಾಗಿದೆ.

ಇದಕ್ಕೂ ಮುನ್ನ 2023ರಲ್ಲಿ ನಡೆದ ಏಷ್ಯನ್ ಗೇಮ್ಸ್ ಪಂದ್ಯದಲ್ಲಿ ನೇಪಾಳ ತಂಡ ಮಂಗೋಲಿಯಾ ಎದುರು ಬಾರಿಸಿದ್ದ 314/3 ರನ್ ವಿಶ್ವ ದಾಖಲೆಯ ಸ್ಕೋರ್ ಆಗಿತ್ತು. ಈ ದಾಖಲೆಯನ್ನು ಜಿಂಬಾಬ್ವೆ ಈಗ ಅಳಿಸಿಹಾಕಿದೆ. ಅಷ್ಟೇ ಅಲ್ಲದೆ ಟೆಸ್ಟ್ ಕ್ರಿಕೆಟ್ ಆಡುವ ತಂಡಗಳ ಪೈಕಿಯೂ 300ಕ್ಕೂ ಹೆಚ್ಚು ಸ್ಕೋರ್ ಮಾಡಿದ ಮೊದಲ ತಂಡ ಎನಿಸಿಕೊಂಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು