LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

3ನೇ ಟಿ20: ಇಂದು ನಿರ್ಣಾಯಕ ಪಂದ್ಯ

ಜೊಹಾನ್ಸ್‍ಬರ್ಗ್: ದಕ್ಷಿಣ ಆಫ್ರಿಕಾ ಎದುರಿನ ಮಳೆಪೀಡಿತ ದ್ವಿತೀಯ ಟಿ20 ಪಂದ್ಯವನ್ನು 5 ವಿಕೆಟ್‍ಗಳಿಂದ ಕಳೆದುಕೊಂಡ ಭಾರತಕ್ಕೀಗ ಸರಣಿ ಸಮಬಲದ ಒತ್ತಡ ಎದುರಾಗಿದೆ. ಗುರು ವಾರ ಜೊಹಾನ್ಸ್‍ಬರ್ಗ್‍ನ ನ್ಯೂ ವಾಂಡರರ್ ಸ್ಟೇಡಿಯಂನಲ್ಲಿ 3ನೇ ಹಾಗೂ ಅಂತಿಮ ಮು ಖಾಮುಖಿ ಏರ್ಪಡಲಿದ್ದು, ಸರಣಿ ಸಮಬಲ ಸಾಧಿಸಲು ಸೂರ್ಯಕುಮಾರ್ ಪಡೆ ಇದನ್ನು ಗೆಲ್ಲಲೇಬೇಕಿದೆ.

ಮೊದಲ ಮುಖಾಮುಖಿ ಮಳೆಯಿಂದಾಗಿ ಒಂದೂ ಎಸೆತ ಕಾಣದೆ ರದ್ದುಗೊಂಡ ಬಳಿಕ ಎರಡೇ ಪಂದ್ಯಗಳಲ್ಲಿ ಸರಣಿ ಇತ್ಯರ್ಥವಾಗ ಬೇಕಾದ ಸನ್ನಿವೇಶ ಎದುರಾಗಿತ್ತು. ಮಂಗಳವಾರದ ದ್ವಿತೀಯ ಪಂದ್ಯಕ್ಕೂ ಮಳೆಯ ಕಾಟ ಎದುರಾಯಿತು. ಭಾರತದ ಇನ್ನಿಂಗ್ಸ್ ಮುಕ್ತಾಯಕ್ಕೆ ಇನ್ನೇನು 3 ಎಸೆತಗಳಿವೆ ಎನ್ನುವಾಗ ಸುರಿದ ಮಳೆಯಿಂದ ಟಾರ್ಗೆಟ್ ಬದಲಿಸಬೇಕಾಗಿ ಬಂತು.

ಭಾರತ 7 ವಿಕೆಟಿಗೆ 180 ರನ್ನುಗಳ ಸವಾಲಿನ ಮೊತ್ತ ಪೇರಿಸಿತ್ತು. ದಕ್ಷಿಣ ಆಫ್ರಿಕಾ 15 ಓವರ್‍ಗಳಲ್ಲಿ 152 ರನ್ ಗುರಿ ಲಭಿಸಿತು. ಅಂದರೆ, ಓವರ್‍ಗೆ ಸರಾಸರಿ 10ರಷ್ಟು ರನ್ ತೆಗೆಯಬೇಕಾದ ಒತ್ತಡ. ಮಾರ್ಕ್‍ರಮ್ ಪಡೆ ಇದನ್ನು ಯಶಸ್ವಿಯಾಗಿ ನಿಭಾಯಿಸಿ ವಿನ್ನಿಂಗ್ ಮಾರ್ಕ್ ಗಳಿಸಿತು. 13.5 ಓವರ್‍ಗಳಲ್ಲಿ 5 ವಿಕೆಟಿಗೆ 154 ರನ್ ಬಾರಿಸಿ ವಿಜಯೋತ್ಸವ ಆಚರಿಸಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು