LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ 4 ಚೀತಾಗಳ ಆಗಮನ

ಆನೇಕಲ್: ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಹೊಸ ಅತಿಥಿಗಳ ಆಗಮನವಾಗಿದೆ. ಎರಡು ಗಂಡು ಮತ್ತು ಎರಡು ಹೆಣ್ಣು ಚೀತಾಗಳು ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ.ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಚೀತಾಗಳನ್ನು ವಿಮಾನ ನಿಲ್ದಾಣಕ್ಕೆ ತೆರಳಿ ಅರಣ್ಯ ಸಚಿವ ಈಶ್ವರ ಖಂಡ್ರೆ ಬರಮಾಡಿಕೊಂಡಿದ್ದಾರೆ. ಈ ಚೀತಾಗಳಿಗೆ ವಾತಾವರಣ, ಹವಾಮಾನ ಬದಲಾವಣೆಯಾಗುವ ಕಾರಣ, ಅವುಗಳಿಗೆ ಯಾವುದೇ ತೊಂದರೆ ಆಗದಂತೆ ಮತ್ತು ಆರೋಗ್ಯ ಸಮಸ್ಯೆ ಎದುರಾಗದ ರೀತಿಯಲ್ಲಿ ಸೂಕ್ತ ನಿಗಾ ಇಡಲು ಸೂಚನೆ ನೀಡಲಾಗಿದೆ. ವನ್ಯಜೀವಿಗಳನ್ನು ಕ್ವಾರಂಟೈನಲ್ಲಿಡಬೇಕು, 30 ದಿನಗಳ ಕಾಲ ಗೊತ್ತುಪಡಿಸಿದ ಆಹಾರ ನೀಡಬೇಕು, ಈ ವಿದೇಶಿ ವನ್ಯಜೀವಿಗಳಿಗೆ ಸೋಂಕು ಏನಾದರೂ ಇದೆಯೇ ಎಂದು ಪರಿಶೀಲಿಸಬೇಕು. ಪ್ರಾಣಿಗಳನ್ನು ಸುರಕ್ಷಿತವಾಗಿ ಬನ್ನೇರುಘಟ್ಟಕ್ಕೆ ಸಾಗಿಸಬೇಕು ಎಂದು ಅಧಿಕಾರಿಗಳಿಗೆ ಮತ್ತು ಪಶುವೈದ್ಯಾಧಿಕಾರಿಗೆ ಸಚಿವರು ತಿಳಿಸಿದ್ದಾರೆ.ಒಂದು ಕಾಲದಲ್ಲಿ ಕರ್ನಾಟಕದ ಕಾಡುಗಳಲ್ಲಿಯೇ ಸಿವಂಗಿ ಎಂದು ಕರೆಸಿಕೊಳ್ಳುವ ಚೀತಾಗಳಿದ್ದವು. ಆದರೆ, ರಾಜ್ಯದ ಕಾಡಿನಲ್ಲಿ ಇವು ಈಗ ನಾಮಾವಶೇಷ. ಹೀಗಾಗಿ, ಮೃಗಾಲಯಗಳಲ್ಲಾದರೂ ಇವುಗಳನ್ನು ನೋಡಲು ಅವಕಾಶ ಆಗಬೇಕೆಂದು ಅರಣ್ಯ ಇಲಾಖೆ ಚೀತಾಗಳನ್ನು ತರಿಸಿದೆ. ಚೀತಾಗಳ ಸುರಕ್ಷತೆಗೆ ಆದ್ಯ ಗಮನ ನೀಡುವಂತೆ ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುನೀಲ್ ಪನ್ವಾರ್ ಅವರಿಗೆ ಸೂಚನೆ ನೀಡಲಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು