LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ವಿಲಾಸಿ ಜೀವನಕ್ಕಾಗಿ ಬೈಕ್ ಕಳವು, ಆರೋಪಿಯಿಂದ 41 ಬೈಕ್ ವಶ

ಹೊಸಕೋಟೆ: ಮನೆಯ ಮುಂದೆ ಹಾಗೂ ಪಾಕಿರ್ಂಗ್‍ಗಳಲ್ಲಿ ನಿಲ್ಲಿಸಲಾಗಿದ್ದ ಬೈಕ್‍ಗಳನ್ನು ಕಳವು ಮಾಡುತ್ತಿದ್ದ ಕುಖ್ಯಾತ ಬೈಕ್ ಕಳ್ಳರನ್ನು ಬಂಧಿಸಿ ಸುಮಾರು 35 ಲಕ್ಷ ಬೆಲೆಬಾಳುವ ಒಟ್ಟು 41 ಬೈಕ್ ಗಳನ್ನು ವಶಪಡಿಸಿಕೊಳ್ಳುವಲ್ಲಿ ಹೊಸಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಕೋಲಾರ ಜಿಲ್ಲೆಯ ಮಾಲೂರು ಮೂಲದ ಕಲೀಮ್ ಪಾಷಾ ಬಂಧಿತ ಆರೋಪಿ. ಆರೋಪಿಯಿಂದ 17 ಡಿಯೋ ಸ್ಕೂಟರ್, 4 ಜಾಜ್ ಡಿಸ್ಕವರಿ, 6 ಪಲ್ಸರ್ ಬೈಕ್, 5 ಸ್ಪ್ಲೆಂಡರ್ ಮೋಟಾರ್ ಸೈಕಲ್, 6 ಆಕ್ಟಿವ ಹೋಂಡಾ, 1 ರಾಯಲ್ ಎನ್ಫೀಲ್ಡ್, 1 ಯಮಹಾ ಮೋಟಾರ್ ಸೈಕಲ್ ವಶಪಡಿಸಿಕೊಳ್ಳಲಾಗಿದೆ. ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಒಟ್ಟು 41 ಪ್ರಕರಣಗಳನ್ನು ಬೇಧಿಸುವಲ್ಲಿ ಹೊಸಕೋಟೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಆರೋಪಿ ಕಲೀಮ್ ಪಾಷ ಮಾಲೂರು ಟೌನ್ ನಲ್ಲಿ ಒಂದು ಪಂಚರ್ ಅಂಗಡಿಯಲ್ಲಿ 2 ವರ್ಷಗಳ ಕಾಲ ಕೆಲಸ ಮಾಡಿಕೊಂಡಿದ್ದ. ಆ ಸಮಯದಲ್ಲಿ ಸುತ್ತಮುತ್ತಲ ಜನರನ್ನು ಪರಿಚಯ ಮಾಡಿಕೊಂಡಿದ್ದು, ನಂತರ ಬೆಂಗಳೂರು ನಗರಕ್ಕೆ ಬಂದು ನೆಲೆಸಿದ್ದ. ಬೆಂಗಳೂರಿನಲ್ಲಿ ಆತನ ಸ್ನೇಹಿತ ಜಮೀಲ್ ಜೊತೆಗೆ ಸೇರಿಕೊಂಡು ಹೊಸಕೋಟೆ ಟೌನ್, ಮಾಲೂರು ಮತ್ತು ಬೆಂಗಳೂರು ನಗರ ಸ್ಭೆರಿದಂತೆ ಪಾಕಿರ್ಂಗ್ ಸ್ಥಳಗಳಲ್ಲಿ, ಮನೆಗಳ ಮುಂದೆ ಬೈಕ್ ನಿಲ್ಲಿಸಿ ಕೆಲಸ ಕಾರ್ಯಗಳಿಗೆ ಹೋಗುವ ಸಾರ್ವಜನಿಕರನ್ನ ಗುರಿಯಾಗಿಸಿಕೊಂಡು ಚಾಣಾಕ್ಷತನದಿಂದ ಹ್ಯಾಂಡಲ್ ಲಾಕ್ ಮುರಿದು ಇಗ್ನಿಷಿಯನ್‍ನ್ನು ಡೈರೆಕ್ಟ್ ಮಾಡಿಕೊಂಡು ಬೈಕ್‍ಗಳನ್ನು ಕಳುವು ಮಾಡುತ್ತಿದ್ದ.

ಕಳವು ಮಾಡಿದ ಬೈಕ್‍ಗಳನ್ನು ಈ ಹಿಂದೆ ಕೆಲಸ ಮಾಡುತ್ತಿದ್ದ ಮಾಲೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ ಪರಿಚಯಸ್ಥರಿಗೆ ಕಡಿಮೆ ಮಾರಾಟ ಮಾಡಿ ದಾಖಲಾತಿಗಳನ್ನ ನಂತರ ನೀಡುವುದಾಗಿ ಹೇಳುತ್ತಿದ್ದ.ಬೈಕ್‍ಗಳನ್ನು ಕದ್ದು ಮಾರಾಟ ಮಾಡುತ್ತಿ ದ್ದಂತಹ ಆರೋಪಿ ಕಲೀಮ್ ಗೋವಾ ಹಾಗೂಮುಂಬೈನ ಲೈವ್ ಬ್ಯಾಂಡ್ ಹಾಗೂ ಕ್ಯಾಸಿನೋಗಳಿಗೆ ತೆರಳಿ ಆನ್‍ಲೈನ್ ಗೇಮಿಂಗ್ ಆಟ ಆಡಿ ಮೋಜು ಮಸ್ತಿ ಮಾಡುತ್ತಿದ್ದ.

ಮೋಜು ಹಾಗು ಮಸ್ತಿ ಮಾಡಲು ಹಣ ಸಂಪಾದನೆಗಾಗಿ ಬೈಕ್‍ಗಳನ್ನು ಕಳವು ಮಾಡಿ ಮಾರಾಟ ಮಾಡುತ್ತಿದ್ದೆ ಎಂದು ಆರೋಪಿ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡೆ ತಿಳಿಸಿದ್ದಾರೆ.
ಹೆಚ್ಚುವರಿ ಪೊಲೀಸ್ ಸೂಪರಿಂಟೆಂಡೆಂಟ್ ಪುರುಷೋತ್ತಮ್ ಅವರ ಮಾರ್ಗದರ್ಶನದಂತೆ ಕಾರ್ಯಾಚರಣೆ ನಡೆಸಿದ ಡಿವೈಎಸ್ಪಿ ಶಂಕರ್ ಗೌಡಅಣ್ಣಾಸಾಹೇಬ್ ಪಾಟೀಲ್, ಪೊಲೀಸ್ ಇನ್‍ಸ್ಪೆಕ್ಟರ್ ಅಶೋಕ್, ಸಬ್ ಇನ್‍ಸ್ಪೆಕ್ಟರ್ ಸಂಪತ್ ಸೇರಿದಂತೆ ಅಪರಾಧ ವಿಭಾಗದ ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅಭಿನಂದಿಸಿದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು