LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"45" ಚಿತ್ರ ಶಿವಣ್ಣ ಉಡುಗೊರೆ

"ಈ ಸಲದ ಹುಟ್ಟುಹಬ್ಬಕ್ಕೆ ನಾನು ನಿಮಗೊಂದು ಸ್ಪೆಷಲ್ ಗಿಫ್ಟ್ ಕೊಡಲಿದ್ದೇನೆ. ನಿರೀಕ್ಷಿತ "45" ಚಿತ್ರದ ನನ್ನ ಫಸ್ಟ್ ಲುಕ್ ರಿಲೀಸ್ ಆಗಲಿದೆ. ರಮೇಶ್ ರೆಡ್ಡಿ ಅವರ ನಿರ್ಮಾಣದಲ್ಲಿ, ಅರ್ಜುನ್ ಜನ್ಯ ಮೊದಲ ನಿರ್ದೇಶನದಲ್ಲಿ ಅದ್ದೂರಿಯಾಗಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ನಾನು, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಒಟ್ಟಿಗೆ ನಟಿಸಿದ್ದೇವೆ. ಈ ಚಿತ್ರ ಇಂಡಿಯನ್ ಸ್ಕ್ರೀನ್ ನಲ್ಲೇ ಉತ್ತಮ ಚಿತ್ರವಾಗಲಿದೆ ಎಂದು ನನ್ನ ನಂಬಿಕೆ.

ಅದಕ್ಕೆ ದೇವರಆಶೀರ್ವಾದ ಬೇಕು.. ಹಾಗೂ ಅಭಿಮಾನಿಗಳು ಚಿತ್ರವನ್ನು ನೋಡಿ ಹಾರೈಸಿ" ಎಂದಿದ್ದಾರೆ. ಶಿವಣ್ಣ.ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನೀಡಿರುವ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಮೊದಲ ಚಿತ್ರ ಶಿವಣ್ಣ, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅವರು ಅಭಿನಯಿಸುತ್ತಿರುವ ಮಲ್ಟಿಸ್ಟಾರರ್ ಸಿನಿಮಾ "45".

ಕನ್ನಡ ಚಿತ್ರರಂಗದ ಮೂವರು ಹೆಸರಾಂತ ನಾಯಕನಟರ ಸಮಾಗಮದಲ್ಲಿ ಮೂಡಿ ಬರುತ್ತಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿದೆ. ಬಹು ನಿರೀಕ್ಷಿತ ಈ ಚಿತ್ರಕ್ಕೆ ಸದ್ಯದಲ್ಲೇ ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶ ಮೂವತ್ತು ದಿನಗಳ ಕಾಲ ಬೆಂಗಳೂರಿನಲ್ಲಿ ನಡೆಯಲಿದೆ.

ಇಷ್ಟು ದಿನಗಳ ಕಾಲ ಅಪಾರವೆಚ್ಚದಲ್ಲಿ, ಅದ್ದೂರಿಯಾಗಿ ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ನಡೆಯುತ್ತಿರುವುದು ಕನ್ನಡದಲ್ಲಿ ಇದೇ ಮೊದಲಿರಬಹುದು. ಸೆಪ್ಟೆಂಬರ್ ನಲ್ಲಿ "45" ಚಿತ್ರದ ಮೊದಲ ಟೀಸರ್ ಬಿಡುಗಡೆಯಾಗಲಿದೆ. ಇನ್ನು ಈ ಚಿತ್ರದ ನಿರ್ದೇಶಕ ಅರ್ಜುನ್ ಜನ್ಯ ಅವರು ಜನಪ್ರಿಯ ಸಂಗೀತ ನಿರ್ದೇಶಕರೇ ಆಗಿರುವುದರಿಂದ ಚಿತ್ರದ ಹಾಡುಗಳ ಬಗ್ಗೆ ಕೂಡ ಸಾಕಷ್ಟು ನಿರೀಕ್ಷೆಯಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು