LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

"4 ಎನ್ 6" ಫಸ್ಟ್ ಗ್ಲಿಂಪ್ಸ್ ಟೀಸರ್ ಬಿಡುಗಡೆ

ಪರ್ಪಲ್ ಪ್ಯಾಚ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಾಯಿಪ್ರೀತಿ ಎನ್. ಅವರು ನಿರ್ಮಿಸಿರುವ, ಮರ್ಡರ್ ಮಿಸ್ಟ್ರಿ ಜೊತೆಗೆ ಇನ್ ವೆಸ್ಟಿಗೇಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ 4 ಎನ್ 6. ಬಿಡುಗಡೆಗೆ ಸಿದ್ದವಾಗಿರುವ ಈ ಚಿತ್ರದ ಫಸ್ಟ್ ಗ್ಲಿಂಪ್ಸ್ ಟೀಸರ್ ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಲವ್ ಮಾಕ್ಟೇಲ್ ಹಾಗೂ ಲವ್ 360 ಖ್ಯಾತಿಯ ರಚನಾ ಇಂದರ್ ಭವಾನಿಪ್ರಕಾಶ್ ಹಾಗೂ ನವೀನ್ ಕುಮಾರ್, ಆದ್ಯಶೇಖರ್ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ "4 ಎನ್ 6" ಚಿತ್ರಕ್ಕೆ ದರ್ಶನ್ ಶ್ರೀನಿವಾಸ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕೊಲೆಯೊಂದರ ತನಿಖೆಯ ಸುತ್ತ ನಡೆಯುವ ಕಥೆ ಈ ಚಿತ್ರದಲ್ಲಿದ್ದು, ರಚನಾ ಇಂದರ್ ಇದೇ ಮೊದಲ ಬಾರಿಗೆ ಫಾರೆನ್ಸಿಕ್ ಡಿಟೆಕ್ಟಿವ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ವೇದಿಕೆಯಲ್ಲಿ ಮಾತನಾಡಿದ ನಿರ್ದೇಶಕ ದರ್ಶನ್ ಈ ಹಿಂದೆ 2 ಕಿರುಚಿತ್ರಗಳನ್ನು ನಿರ್ದೇಶಿಸಿದ್ದೆ. ನನ್ನ ಪ್ರಥಮ ನಿರ್ದೇಶನದ ಚಿತ್ರ ಇದಾಗಿದ್ದು ಕೊಲೆ ಪ್ರಕರಣ ಪತ್ತೆ ಹಚ್ಚುವಲ್ಲಿ ಪೋರೆನ್ಸಿಕ್ ರಿಪೋರ್ಟ್ ಇಂಪಾರ್ಟೆಂಟ್ ಆಗಿರುತ್ತದೆ. 4 ಪ್ರಮುಖ ಪಾತ್ರಗಳ ಸುತ್ತ ಕಥೆ ನಡೆಯುತ್ತದೆ. ಕಥೆ ಮಾಡುವಾಗ ಫೋರೆನ್ಸಿಕ್ ತಜ್ಞರ ಸಲಹೆ ತೆಗೆದುಕೊಂಡೆ. ಚಿತ್ರಕ್ಕೆ ಬೆಂಗಳೂರು ಸುತ್ತಮುತ್ತ 30 ದಿನ ಚಿತ್ರೀಕರಿಸಲಾಗಿದ್ದು ಈಗಾಗಲೇ ಸೆನ್ಸಾರ್ ನಿಂದ ಯು/ಎ ಸರ್ಟಿಫಿಕೇಟ್ ಸಿಕ್ಕಿದೆ ಎಂದು ಹೇಳಿದರು.

ನಂತರ ನಿರ್ಮಾಪಕಿ ಸಾಯಿಪ್ರೀತಿ ಮಾತನಾಡಿ ತುಂಬಾ ಟ್ಯಾಲೆಂಟ್ ಇರೋ ತಂಡವಿದು. ಸಿನಿಮಾ ತುಂಬಾ ಚೆನ್ನಾಗಿ ಬಂದಿದೆ. ಏಪ್ರಿಲ್ ಗೆ ರಿಲೀಸ್ ಮಾಡೋ ಪ್ಲಾನಿದೆ ಎಂದರು. ಕಾರ್ಯಕಾರಿ ನಿರ್ಮಾಪಕರಾದ ಕರಣ್ ಸಿಂಗ್ ಮಾತನಾಡಿ ದರ್ಶನ್ ಶಾರ್ಟ್ ಫಿಲಂ ಮಾಡುವಾಗ ನನಗೆ ಪರಿಚಯವಾದರು. ಅವರಲ್ಲಿ ಓಳ್ಳೊಳ್ಳೆ ಕಥೆಗಳಿದ್ದವು. ಕೋವಿಡ್ ನಂತರ ಜನ ಸಿನಿಮಾನೋಡುವ ದೃಷ್ಟಿಕೋನ ಬದಲಾಗಿದೆ. ಕ್ರೈಂ ಕಥೆಗಳನ್ನು ಹೆಚ್ಚು ಇಷ್ಟಪಡುತ್ತಿದ್ದಾರೆ ಅಂತ ಈ ಕಾನ್ಸೆಪ್ಟ್ ಕೈಗೆತ್ತಿಕೊಂಡೆವು ಎಂದರು.

ನಾಯಕಿ ರಚನಾ ಇಂದರ್ ಮಾತನಾಡಿ ಮೊದಲಬಾರಿಗೆ ಇಂಥ ಪಾತ್ರ ಮಾಡಿದ್ದೇನೆ. ಚಿತ್ರದಲ್ಲಿ ನನ್ನ ಪಾತ್ರಕ್ಕೆ ಹೆಚ್ಚು ಮಾತಿಲ್ಲ. ಮುಖದಲ್ಲೇ ಎಕ್ಸ್ ಪ್ರೆಶನ್ಸ್ ತೋರಿಸಬೇಕಿತ್ತು ಎಂದರು.ಭವಾನಿ ಪ್ರಕಾಶ್ ಮಾತನಾಡಿ ಬೇರೊಬ್ಬರು ಮಾಡಬೇಕಿದ್ದ ಪಾತ್ರ ನನಗೆ ಬಂತು. ಇದು ಬರೀ ಮರ್ಡರ್ ಇನ್ವೆಸ್ಟಿಗೇಶನ್ ಸುತ್ತ ನಡೆವ ಕಥೆಯಲ್ಲ, ಸೈಕಲಾಜಿಕಲ್ ಚಿತ್ರವೂ ಹೌದು, ಶೂಟಿಂಗ್ ಅನುಭವ ತುಂಬಾ ಚೆನ್ನಾಗಿತ್ತು. ಸ್ಲಂನಲ್ಲೂ ಓಡಾಡಿದ್ದೇವೆ ಎಂದರು.

ನಾಯಕ ನವೀನ್ ಕುಮಾರ್ ಮಾತನಾಡಿ ನಾನು ಚಿತ್ರರಂಗಕ್ಕೆ ಹೊಸಬ. ಈ ಸಿನಿಮಾದಿಂದ ಸಾಕಷ್ಟು ಕಲಿತಿದ್ದೇನೆ. ಎಲ್ಲಾ ಪಾತ್ರಗಳು ತುಂಬಾ ಪ್ರಾಮಿಸಿಂಗ್ ಆಗಿವೆ ಎಂದರು.ಇನ್ನು ಈ ಚಿತ್ರಕ್ಕೆ ನಿರ್ದೇಶಕರೇ ಎಡಿಟರ್ ಆಗಿದ್ದು ಮುತ್ತುರಾಜ್ ಸಾಥ್ ನೀಡಿದ್ದಾರೆ. ಚರಣ್ ತೇಜ್ ಅವರ ಛಾಯಾಗ್ರಹಣ, ಸತ್ಯಕಹಿ ಅವರ ಸಂಭಾಷಣೆ ಹಾಗೂ ಸಾಯಿ ಸೋಮೇಶ್ ಅವರ ಸಂಗೀತ ನಿರ್ದೇಶನವಿದೆ. ಅರ್ಜುನ್, ಆಶಿತಾ ಅಲ್ವಾ, ಮುಕ್ತಿ ಅಲ್ವಾ, ಆರ್ ನಿಕ್ಸಾನ್, ಪ್ರಶಾಂತ್, ಸಂಜಯ್ ನಾಯಕ್, ಸೌರವ್, ಸತ್ಯ ಕಹಿ, ಬೇಬಿ ವಂಶಿಕಾ, ಬೇಬಿ ರೇಯನ್ಸ್ ಇತರರು ಚಿತ್ರದಲ್ಲಿ ಅಭಿನಯಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು