LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Chamarajanagara

5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು, ಸದಸ್ಯರ ಭೇಟಿ: ಸಭೆ

ಚಾಮರಾಜನಗರ: ಐದನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಡಾ. ಸಿ. ನಾರಾಯ ಣಸ್ವಾಮಿ ಹಾಗೂ ಆಯೋಗದ ಸದಸ್ಯರು ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯ ಪಂಚಾಯತ್ ರಾಜ್ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಚುನಾಯಿತ ಪ್ರತಿನಿಧಿಗಳು, ಅಧಿಕಾರಿಗಳ ಜೊತೆ ಸಭೆ ನಡೆಸಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿ 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ಸಿ. ನಾರಾಯಣಸ್ವಾಮಿ, ಸದಸ್ಯರಾದ ಮೊಹಮದ್ ಸನಾವುಲ್ಲಾ, ಆರ್.ಎಸ್. ಪೋಂಡೆ, ಸಮಾಲೋಚಕರಾದ ಎಂ.ಕೆ. ಕೆಂಪೇಗೌಡ, ಸಿ.ಜಿ. ಸುಪ್ರಸನ್ನ, ಅಧ್ಯಕ್ಷರ ಆಪ್ತ ಕಾರ್ಯದರ್ಶಿಗಳಾದ ಕೆ. ಯಾಲಕ್ಕಿಗೌಡ, ವಿಶೇಷ ಕರ್ತವ್ಯ ಅಧಿಕಾರಿ ವಹಬ್ ಖಾನ್ ಅವರು ಸಭೆ ನಡೆಸಿದರು.

ಪಂಚಾಯತ್ ರಾಜ್ ಸಂಸ್ಥೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಹಣಕಾಸು ಆಯೋಗ ಕಳುಹಿಸಿರುವ ಪ್ರಶ್ನಾವಳಿ ಕುರಿತ ಮಾಹಿತಿಯನ್ನು ಸಭೆಯಲ್ಲಿ ಪರಿಶೀಲಿಸಲಾಯಿತು. ಪಂಚಾಯಿತಿ ಸಂಸ್ಥೆಗಳ ಸಾಂಸ್ಥಿಕ ರಚನೆ, ಕಾರ್ಯಾಚರಣೆ, ಹುದ್ದೆಗಳು, ಆಯವ್ಯಯ, ವೆಚ್ಚಗಳ ವಿವರ ರಾಜ್ಯ ಮತ್ತು ಕೇಂದ್ರ ಹಣಕಾಸು ಆಯೋಗದ ಅನುದಾನ, ಹಂಚಿಕೆ, ಬಿಡುಗಡೆ, ಮಾಡಲಾದ ವೆಚ್ಚ ಕುರಿತ ವಿವರವನ್ನು ಪಡೆಯಲಾಯಿತು.

ಆಡಳಿತ ಸುಧಾರಣೆ, ಮಾಹಿತಿ ತಂತ್ರಜ್ಞಾನ, ರಾಜ್ಯ ಹಣಕಾಸು ಆಯೋಗದ ಪರಿಶೀಲನಾ ಅಂಶಗಳಿಗೆ ಪೂರಕವಾದ ಸಲಹೆಗಳನ್ನು ಪಡೆಯಲಾಯಿತು.ನಗರ ಸ್ಥಳೀಯ ಸಂಸ್ಥೆಗಳಿಗೆ ಸಂಬಂಧಿಸಿದಂತೆ ತೆರಿಗೆ ಪಾವತಿ ಖಾತಾ ಪ್ರತಿ ದಾಖಲೆಗಳನ್ನು ತ್ವರಿತವಾಗಿ ನೀಡುವಿಕೆ, ನೀರು ಸರಬರಾಜು, ಒಳಚರಂಡಿ, ಬೀದಿ ದೀಪಗಳು, ಘನತ್ಯಾಜ್ಯ ನಿರ್ವಹಣೆ, ಇನ್ನಿತರ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಿ ಮಾಹಿತಿ ಮತ್ತು ಅಭಿಪ್ರಾಯಗಳನ್ನು ಪಡೆಯಲಾಯಿತು.

ಸಭೆಯಲ್ಲಿ ಮಾತನಾಡಿದ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ಸಿ. ನಾರಾಯಣಸ್ವಾಮಿ ಹಾಗೂ ಇತರೆ ಸದಸ್ಯರು ಆಸ್ತಿತೆರಿಗೆ, ಉದ್ದಿಮೆ ಪರವಾನಗಿ, ಬಾಡಿಗೆ ಆದಾಯ, ಬಳಕೆದಾರರ ಶುಲ್ಕ, ಇನ್ನಿತರ ಸಂಗ್ರಹ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿ ಸ್ವಂತ ಸಂಪನ್ಮೂಲ ಕ್ರೊಢೀಕರಣಕ್ಕೆ ನಗರ ಸ್ಥಳೀಯ ಸಂಸ್ಥೆಗಳು, ಪಂಚಾಯತ್ ರಾಜ್ ಸಂಸ್ಥೆಗಳು ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಸಭೆಯಲ್ಲಿ ಭಾಗವಹಿಸಿದ್ದ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಗ್ರಾಮ ಪಂಚಾಯಿತಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಮೂಲ ಸೌಕರ್ಯ ಒದಗಿಸಲು ಹೆಚ್ಚು ಅನುದಾನ ನೀಡುವುದು ಸೇರಿದಂತೆ ಇತರೆ ಅಭಿಪ್ರಾಯಗಳನ್ನು ಆಯೋಗದ ಮುಂದೆ ಮಂಡಿಸಿದರು. ಅಧಿಕಾರಿಗಳೂ ಸಹ ಸಂಸ್ಥೆಗಳಿಗೆ ಅಗತ್ಯವಿರುವ ಹೆಚ್ಚಿನ ಅನುದಾನ ಹಾಗೂ ನೆರವಿನ ಬಗ್ಗೆ ಪ್ರಸ್ತಾಪಿಸಿ ಆಯೋಗದ ಮುಂದೆ ಅಭಿಪ್ರಾಯಗಳನ್ನು ಮಂಡಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಪಿ. ಲಕ್ಷ್ಮೀ, ಮುಖ್ಯ ಯೋಜನಾಧಿಕಾರಿ ದೀಪ, ಚಾಮರಾಜನಗರ ನಗರಸಭೆ ಅಧ್ಯಕ್ಷರಾದ ಎಸ್. ಸುರೇಶ್, ಉಪಾಧ್ಯಕ್ಷರಾದ ಮಮತ, ಕೊಳ್ಳೇಗಾಲ ನಗರಸಭೆ ಅಧ್ಯಕ್ಷ ಸಿ.ಎನ್. ರೇಖಾ, ಉಪಾಧ್ಯಕ್ಷ ಎ.ಪಿ. ಶಂಕರ್, ಯಳಂದೂರು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಎಸ್. ಲಕ್ಷ್ಮೀ, ಉಪಾಧ್ಯಕ್ಷರಾದ ಶಾಂತಮ್ಮ, ಹನೂರು ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಮುಮ್ತಾಜ್ ಭಾನು, ಉಪಾಧ್ಯಕ್ಷ ಆನಂದ್ ಕುಮಾರ್. ಆರ್, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ವಿವಿಧ ಇಲಾಖೆಗಳ ಅಧಿಕಾರಿಗಳು, ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು, ಸಭೆಯಲ್ಲಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು