LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

5 ಭಾಷೆಗಳಲ್ಲಿ ಮ್ಯಾಕ್ಸ್ ಬಿಡುಗಡೆ

ಕಲೈಪುಲಿ ಎಸ್ ತನು ವಿ ಕ್ರಿಯೇಷನ್ಸ್ ಹಾಗೂ ಕಿಚ್ಚ ಕ್ರಿಯೇಷನ್ಸ್ ನಿರ್ಮಾಣದ, ವಿಜಯ್ ಕಾರ್ತಿಕೇಯ ನಿರ್ದೇಶನದ ಹಾಗೂ ಕಿಚ್ಚ ಸುದೀಪ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಮ್ಯಾಕ್ಸ್" ಚಿತ್ರ ಇದೇ ಡಿಸೆಂಬರ್ 25 ರಂದು ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ.

ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡಲು ಆಯ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ನಾಯಕ ಸುದೀಪ್, ನಿರ್ದೇಶಕ ವಿಜಯ್ ಕಾರ್ತಿಕೇಯ, ನಿರ್ಮಾಪಕ ಕಲೈಪುಲಿ ಎಸ್.ಧಾನು, ಸುಧಾ ಬೆಳವಾಡಿ, ಕರಿಸುಬ್ಬು, ಸಂಯುಕ್ತಾ ಹೊರನಾಡು, ಸುಕೃತಾ ವಾಗ್ಲೇ, ವಿಜಯ್ ಚೆಂಡೂರು, ನಾಗರಾಜ್, ಅನಿರುದ್ದ್, ಪ್ರವೀಣ್, ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್, ಛಾಯಾಗ್ರಾಹಕ ಶೇಖರ್ ಚಂದ್ರ, ಸಾಹಸ ನಿರ್ದೇಶಕ ಚೇತನ್ ಡಿಸೋಜ, ಕಲಾ ನಿರ್ದೇಶಕ ಶಿವಕುಮಾರ್, ಸಂಕಲನಕಾರ ಗಣೇಶ್ ಬಾಬು, ಕಾರ್ಯಕಾರಿ ನಿರ್ಮಾಪಕ ಶ್ರೀರಾಮ್ ಮುಂತಾದವರು ಹಾಜರಿದ್ದರು.

ನಾನು ಈ ಚಿತ್ರ ಒಪ್ಪುವುದಕ್ಕೆ ಮೂಲ ಕಾರಣ ನಿರ್ದೇಶಕ ವಿಜಯ್ ಕಾರ್ತಿಕೇಯ ಎಂದು ಮಾತು ಆರಂಭಿಸಿದ ಸುದೀಪ್, ವಿಜಯ್ ಅವರು ಬಂದು ಹೇಳಿದ ಕಥೆ ಚೆನ್ನಾಗಿರಲಿಲ್ಲ ಎಂದರೆ ಯಾವುದೂ ಇಲ್ಲಿಯವರೆಗೂ ಬರುತ್ತಿರಲಿಲ್ಲ. ಧಾನು ಅವರು ಹಿರಿಯ ನಿರ್ಮಾಪಕರು. ಅವರು ಕಳಿಸಿಕೊಟ್ಟರು. ಕಥೆ ಚೆನ್ನಾಗಿರಲಿಲ್ಲ ಎಂದರೆ, ಬೇರೆ ಕಥೆ ಹುಡುಕುತ್ತಿದ್ದವೇನೋ. ಆದರೆ, ವಿಜಯ್ ಹೇಳಿದ ಕಥೆ ಬಹಳ ಇಷ್ಟವಾಯಿತು. ಚೆನ್ನೈನಿಂದ ಬಂದ ಅವರನ್ನು ಇಲ್ಲೇ ಉಳಿಸಿಕೊಂಡು, ಅವರ ಜೊತೆಗೆ ಕೂತು ಸಾಕಷ್ಟು ಚರ್ಚೆ ಮಾಡಿ, ಈ ಕಥೆಯನ್ನು ಇನ್ನಷ್ಟು ಗಟ್ಟಿಯಾಗಿ ರೂಪಿಸಲಾಯಿತು.

ತಮಿಳು, ಹಿಂದಿ, ಮಲಯಾಳಂ ಸೇರಿದಂತೆ ಅನೇಕ ಭಾಷೆಗಳಲ್ಲಿ ರಜನಿಕಾಂತ್ ಸೇರಿದಂತೆ ಅನೇಕ ಹೆಸರಾಂತ ಕಲಾವಿದರ ಚಿತ್ರಗಳನ್ನು ನಿರ್ಮಾಣ ಮಾಡಿದ್ದೇನೆ. ಕನ್ನಡದಲ್ಲಿ "ಮ್ಯಾಕ್ಸ್" ನನ್ನ ನಿರ್ಮಾಣದ ಮೊದಲ ಚಿತ್ರ. ಈ ಚಿತ್ರದ ಕುರಿತು ಸುದೀಪ್ ಅವರಿಗೆ ಫೋನ್ ಮಾಡಿ, ಒಂದೊಳ್ಳೆಯ ಕಥೆ ಇದೆ. ಅದನ್ನು ನೀವು ಕೇಳಿ. ನಿಮಗೆ ಇಷ್ಟವಾದರೆ ಸಿನಿಮಾ ಮಾಡೋಣ ಎಂದು ಹೇಳಿದೆ. ಅವರಿಗೆ ಕಥೆ ಇಷ್ಟವಾಯಿತು. ಚಿತ್ರ ಆರಂಭವಾಯಿತು. ಕನ್ನಡದಲ್ಲಿ ಚಿತ್ರ ನಿರ್ಮಾಣ ಮಾಡಲು ಅವಕಾಶ ಮಾಡಿಕೊಟ್ಟ ಸುದೀಪ್ ಅವರಿಗೆ ಧನ್ಯವಾದ. ಇದೇ ಡಿಸೆಂಬರ್ 25 ರಂದು ನಮ್ಮ ಚಿತ್ರ ಬಿಡುಗಡೆಯಾಗುತ್ತಿದೆ. ನಿಮ್ಮ       ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಕಲೈಪುಲಿ ಎಸ್.ಧಾನು. ನಿರ್ದೇಶಕ ವಿಜಯ್ ಕಾರ್ತಿಕೇಯ ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು