LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
National News

5 ವರ್ಷಗಳವರೆಗೆ 'ಉಲ್ಫಾ' ಮೇಲಿನ ನಿಷೇಧ ವಿಸ್ತರಿಸಿದ ಕೇಂದ್ರ ಸರ್ಕಾರ

ಗುವಾಹಟಿ: ಭಾರತದಿಂದ ಅಸ್ಸಾಂ ಪ್ರತ್ಯೇಕಗೊಳಿಸುವ ಉದ್ದೇಶದ ಕೆಲಸ ಮುಂದುವರಿಕೆ ಮತ್ತು ಸುಲಿಗೆ, ಹಿಂಸಾಚಾರಕ್ಕಾಗಿ ಇತರ ದಂಗೆಕೋರ ಗುಂಪುಗಳೊಂದಿಗೆ ಸಂಪರ್ಕದಲ್ಲಿರುವುದಕ್ಕಾಗಿ ಬಂಡುಕೋರ ಸಂಘಟನೆ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸೋಮ್ 'ಉಲ್ಫಾ' (ULFA ) ಮೇಲಿನ ನಿಷೇಧವನ್ನು ಕೇಂದ್ರ ಸರ್ಕಾರ ಮತ್ತೆ ಐದು ವರ್ಷಗಳವರೆಗೆ ವಿಸ್ತರಿಸಿದೆ.

ಉಲ್ಫಾವನ್ನು 1990 ರಲ್ಲಿ ಮೊದಲ ಬಾರಿಗೆ ನಿಷೇಧಿತ ಸಂಘಟನೆ ಎಂದು ಘೋಷಿಸಲಾಗಿತ್ತು. ಅಂದಿನಿಂದ ನಿಷೇಧವನ್ನು ನಿಯತಕಾಲಿಕವಾಗಿ ವಿಸ್ತರಿಸಲಾಗಿದೆ. ಉಲ್ಫಾ ತನ್ನ ಎಲ್ಲಾ ಬಣಗಳು ಮತ್ತು ಮುಂಚೂಣಿ ಸಂಘಟನೆಗಳೊಂದಿಗೆ ಭಾರತದ ಸಾರ್ವಭೌಮತೆ ಮತ್ತು ಸಮಗ್ರತೆಗೆ ಹಾನಿಯಾಗುವಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದೆ ಎಂದು ಕೇಂದ್ರ ಗೃಹ ಸಚಿವಾಲಯ ಅಧಿಸೂಚನೆಯಲ್ಲಿ ಹೇಳಿದೆ.

ಅಸ್ಸಾಂ ಅನ್ನು ಭಾರತದಿಂದ ಪ್ರತ್ಯೇಕಿಸುವುದು ತನ್ನ ಉದ್ದೇಶವೆಂದು ಉಲ್ಫಾ ಘೋಷಿಸಿದೆ. ತಮ್ಮ ಸಂಘಟನೆಗೆ ಹಣಕ್ಕಾಗಿ ಸುಲಿಗೆ ಮತ್ತು ಬೆದರಿಕೆಯನ್ನು ಮುಂದುವರೆಸಿದೆ. ಹಿಂಸಾಚಾರ ನಡೆಸಲು ಇತರ ಬಂಡಾಯ ಗುಂಪುಗಳೊಂದಿಗೆ ಸಂಪರ್ಕವನ್ನು ಹೊಂದಿದೆ ಎಂದು ಹೇಳಿದೆ.

ಅಸ್ಸಾಂನಲ್ಲಿ ನವೆಂಬರ್ 27, 2019 ರಿಂದ ಜುಲೈ 1, 2024 ರ ಅವಧಿಯಲ್ಲಿ ಹಲವಾರು ಸ್ಫೋಟಗಳು ಅಥವಾ ಸ್ಫೋಟಕ ಅಳವಡಿಕೆಯ ಹಲವಾರು ಪ್ರಕರಣಗಳು ಸೇರಿದಂತೆ 16 ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಈ ಸಂಘಟನೆಯು ಅಕ್ರಮ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಹೊಂದಿದೆ ಮತ್ತು ಅಸ್ಸಾಂನಾದ್ಯಂತ 2024ರ ಸ್ವಾತಂತ್ರ್ಯ ದಿನದವರೆಗೂ ಹಲವು ಸ್ಫೋಟಗಳನ್ನು ನಡೆಸಿದೆ ಎಂದು ಅಧಿ ಸೂಚನೆ ಹೇಳಿದೆ.

ಕಳೆದ ಐದು ವರ್ಷಗಳಲ್ಲಿ ಮೂರು ಉಲ್ಫಾ ಕಾರ್ಯಕರ್ತರು ಪೊಲೀಸ್ ಅಥವಾ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಹತ್ಯೆಯಾಗಿದ್ದಾರೆ. ಅದರ ಕಾರ್ಯಕರ್ತರ ವಿರುದ್ಧ 15 ಪ್ರಕರಣಗಳನ್ನು ದಾಖಲಿಸಲಾಗಿದ್ದು, ಮೂರು ಆರೋಪಪಟ್ಟಿಗಳನ್ನು ದಾಖಲಿಸಲಾಗಿದೆ ಮತ್ತು ಮೂರು ಕೇಡರ್‌ಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಗೃಹ ಸಚಿವಾಲಯ ತಿಳಿಸಿದೆ.

ಉಲ್ಫಾ ಇತರ 27 ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ಅದರ 56 ಕಾರ್ಯಕರ್ತರನ್ನು ಬಂಧಿಸಲಾಗಿದೆ ಮತ್ತು 63 ಕಾರ್ಯಕರ್ತರು ಶರಣಾಗಿದ್ದಾರೆ. ಉಲ್ಫಾ ಸದಸ್ಯರಿಂದ 27 ಶಸ್ತ್ರಾಸ್ತ್ರಗಳು, 550 ಗುಂಡಿನ ಸುತ್ತುಗಳು, ಒಂಬತ್ತು ಗ್ರೆನೇಡ್‌ಗಳು ಮತ್ತು ಎರಡು ಸುಧಾರಿತ ಸ್ಫೋಟಕ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯಿದೆ, 1967 (1967 ರ 37) ನಿಬಂಧನೆಗಳ ಅಡಿಯಲ್ಲಿ ಉಲ್ಫಾವನ್ನು ಕಾನೂನುಬಾಹಿರ ಸಂಘಟನೆ ಎಂದು ಘೋಷಿಸಲು ಅಸ್ಸಾಂ ಸರ್ಕಾರವು ಶಿಫಾರಸು ಮಾಡಿದೆ ಎಂದು ಸಚಿವಾಲಯ ತಿಳಿಸಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು