LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಕನಕದಾಸರ 536ನೇ ಜಯಂತ್ಯೋತ್ಸವ

ದೇವನಹಳ್ಳಿ: 12 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದ ಕ್ರಾಂತಿಯೋಗಿ ಬಸವಣ್ಣನವರಂತೆ, 15 ನೇ ಶತಮಾನದಲ್ಲಿ ಸಮಾಜ ಸುಧಾರಣೆಗೆ ಶ್ರಮಿಸಿದವರಲ್ಲಿ ಮಹಾನ್ ಸಂತ, ದಾಸ ಶ್ರೇಷ್ಠರಾದ ಕನಕದಾಸರು ಪ್ರಮುಖರು ಎಂದು ಆಹಾರ,ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಹೇಳಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದೇವನಹಳ್ಳಿ ಟೌನ್ ನ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ `ಸಂತಕವಿ ಕನಕದಾಸರ 536 ನೇ ಜಯಂತ್ಯುತ್ಸವ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕನಕದಾಸರು ಸಮಾಜದ ಸುಧಾರಣೆಗಾಗಿ ರಚಿಸಿದ ಕೀರ್ತನೆಗಳು ಇಂದಿಗೂ ಪ್ರಸ್ತುತ ವಾಗಿವೆ. ಸಮಾಜ ಸುಧಾರಣೆಗೆ ಶ್ರಮಿಸಿದ ಮಹಾನ್ ದಾರ್ಶನಿಕರು ಕನಕದಾಸರು. ಮಾನವಕುಲವೊಂದೇ ಎಂದು ಸಮಾಜದ ಸಮಾನತೆಗಾಗಿ ಶ್ರಮಿಸಿದರು.

ರಾಜ್ಯದ 5ನೇ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಅವರು ಮಾತನಾಡಿ ಮನುಕುಲದ ಶ್ರೇಷ್ಠ ರು, ಮಹಾನ್ ಕವಿಗಳು, ಜಾತಿ ಎಲ್ಲೆ ಮೀರಿ, ಕುಲ-ಕುಲವೆಂದು ಹೊಡೆದಾಡದಿರಿ ಎಂದು ಹೇಳಿದವರು ಕನಕದಾಸರು. ಅವರ ಮಾರ್ಗದರ್ಶನಗಳು ನಮ್ಮೆಲ್ಲರಿಗೂ ಸ್ಪೂರ್ತಿ, 15-16ನೇ ಶತಮಾನದಲ್ಲಿ ಸಮಾನತೆಯ ದಾರಿ ತೋರಿದವರು, ಸಮಾನತೆ, ಭ್ರಾತೃತ್ವವನ್ನು ಮೈಗೂಡಿಸಿಕೊಂಡು ಜೀವನ ನಡೆಸಬೇಕು ಎಂದು ಹೇಳಿದವರು ಕನಕದಾಸರು,ಅವರ ಕೀರ್ತನೆಗಳು ಇಂದಿಗೂ ಪ್ರಸ್ತುತ ಎಂದು ಅವರು ಹೇಳಿದರು.

ವೇದಿಕೆ ಕಾರ್ಯಕ್ರಮ ಆರಂಭಕ್ಕೂ ಮುನ್ನ ದೇವನಹಳ್ಳಿ ಟೌನ್ ನ ಬೈಪಾಸ್‍ನಲ್ಲಿರುವ ಕನಕದಾಸರ ವೃತ್ತದಿಂದ ಡಾ.ಬಿ.ಆರ್.ಅಂಬೇಡ್ಕರ್ ಭವನದವರೆಗೆ ವಿವಿಧ ಕಲಾತಂಡಗಳೊಂದಿಗೆ ದಾಸ ಶ್ರೇಷ್ಠ ಕನಕದಾಸರ ಉತ್ಸವ,ಪಲ್ಲಕ್ಕಿಗಳ ಮೆರವಣಿಗೆ ನಡೆಸಲಾಯಿತು. ಜಿಪಂ ಮುಖ್ಯ ಕಾರ್ಯನಿರ್ವಾ ಹಕಧಿಕಾರಿಗಳಾದ ಡಾ. ಕೆ ಎನ್ ಅನುರಾಧ ಅವರು ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಶಿವಶಂಕರಎನ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಅನುರಾಧ ಕೆ.ಎನ್, ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಅಪರ ಪೋಲಿಸ್ ವರಿಷ್ಠಾಧಿಕಾರಿ ಪುರುಷೋತ್ತಮ್, ಜಿಪಂ ಉಪಕಾರ್ಯದರ್ಶಿ ಟಿ.ಕೆ ರಮೇಶ್, ಕನ್ನಡ ಮತ್ತು ಸಂಸ್ಕೃತಿಇಲಾಖೆ ಸಹಾಯಕ ನಿರ್ದೇಶಕಿ ನೀಲಮ್ಮ ಬಿ, ದೇವನಹಳ್ಳಿ ತಹಶೀಲ್ದಾರ್ ಶಿವರಾಜ್,ಕಾರ್ಯನಿರ್ವಾಹಕ ಅಧಿಕಾರಿ ಶ್ರೀನಾಥ್ ಗೌಡ ಇತರ ಗಣ್ಯರು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು