LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Davanagere

ದೌರ್ಜನ್ಯ ತಡೆ ಕಾಯ್ದೆಯಡಿ 54 ಪ್ರಕರಣ ದಾಖಲು-ಡಿಸಿ 


ದಾವಣಗೆರೆ: 2026 ರ ಜನವರಿ 01 ರಿಂದ ಸೆಪ್ಟೆಂಬರ್ 28 ರವರೆಗಿನ ಅವಧಿಯಲ್ಲಿ ಜಿಲ್ಲೆಯಲ್ಲಿ ಪರಿಶಿಷ್ಟ  ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಒಟ್ಟು 143 ಸಂತ್ರಸ್ತರಿಗೆ 114.98 ಲಕ್ಷಪರಿಹಾರ ಧನವನ್ನುವಿತರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ತಿಳಿಸಿದರು.ಅವರು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿಯ ಮೂರನೇ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದೌರ್ಜನ್ಯ ತಡೆ ಕಾಯ್ದೆಯಡಿ 8 ಪೋಕ್ಸೋ ಹಾಗೂ 47 ಇತರೆ ದೌರ್ಜನ್ಯ ಪ್ರಕರಣಗಳು ಸೇರಿದಂತೆ ಒಟ್ಟು 55 ಪ್ರಕರಣಗಳಲ್ಲಿ ಪರಿಹಾರ ಧನ ಬಿಡುಗಡೆ ಮಾಡಲಾಗಿದ್ದು (ಕೊಲೆ ಪ್ರಕರಣಗಳು -0), 27 ಪ್ರಕರಣಗಳಲ್ಲಿ ಚಾರ್ಜ್ಶೀಟ್ ಸಲ್ಲಿಸಲಾಗಿದೆ. ಮಂಜೂರಾದ ಒಟ್ಟು ಪರಿಹಾರ ಮೊತ್ತದಲ್ಲಿ ಎಫ್‌ಐಆರ್ ಹಂತದಲ್ಲಿ 57.98 ಲಕ್ಷಹಾಗೂ ಚಾರ್ಜ್ಶೀಟ್‌ಹಂತದಲ್ಲಿ 57.00 ಲಕ್ಷ ಬಿಡುಗq ಆಗಿದ್ದು, ಒಟ್ಟು 101 ಪರಿಶಿಷ್ಟು ಜಾತಿ ಹಾಗೂ 42 ಪರಿಶಿಷ್ಟು ಪಂಗಡದ ಫಲಾನುಭವಿ ಸಂತ್ರಸ್ತರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ 2026 ರ ಜನವರಿ 01 ರಿಂದ ಸೆಪ್ಟೆಂಬರ್ 25 ರವರೆಗಿನ ಅವಧಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಒಟ್ಟು 54 ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಜೂನ್ ಅಂತ್ಯದವರೆಗೆ 41, ಜುಲೈನಲ್ಲಿ 4, ಆಗಸ್ಟ್ನಲ್ಲಿ 6 ಹಾಗೂ ಸೆಪ್ಟೆಂಬರ್‌ನಲ್ಲಿ 3 ಪ್ರಕರಣಗಳು ದಾಖಲಾಗಿದ್ದು, ನಿಯಮಾವಳಿಯಂತೆ ನಿಗದಿತ 60 ದಿನಗಳ ಕಾಲಮಿತಿಯೊಳಗೆ ಒಟ್ಟು 31 ಪ್ರಕರಣಗಳಲ್ಲಿ ಚಾರ್ಜ್ಶೀಟ್ (ದೋಷಾರೋಪಣೆ ಪಟ್ಟಿ) ಸಲ್ಲಿಸಲಾಗಿದೆ. ಪ್ರಸ್ತುತ 13 ಪ್ರಕರಣಗಳು ತನಿಖಾ ಹಂತದಲ್ಲಿದ್ದು , 9 ಪ್ರಕರಣಗಳಲ್ಲಿ ‘ಬಿ’ ವರದಿ ಸಲ್ಲಿಸಲಾಗಿದೆ. ಇನ್ನು 31 ಪ್ರಕರಣಗಳು ನ್ಯಾಯಾಲಯದ ವಿಚಾರಣಾ 
ಹಂತದಲ್ಲಿದ್ದು, 1 ಪ್ರಕರಣವನ್ನು ಇತರೆ ರೀತಿಯಲ್ಲಿ ವಿಲೇವಾರಿ ಮಾಡಲಾಗಿದೆ.ನ್ಯಾಯಾಲಯದಲ್ಲಿ 2026 ರ ಜೂನ್‌ನಿಂದ ಆಗಸ್ಟ್ ಅಂತ್ಯದವರೆಗಿನ ಅವಧಿಯಲ್ಲಿ ಒಟ್ಟು 7 ಮೊಕದ್ದಮೆಗಳನ್ನು ವಿಲೇವಾರಿ ಮಾಡಲಾಗಿದ್ದು, ಆಗಸ್ಟ್ ಅಂತ್ಯದ ವೇಳೆಗೆ 161 ಪ್ರಕರಣಗಳು ಬಾಕಿ ಉಳಿದಿವೆ ಎಂದು ಸರ್ಕಾರಿ ಅಭಿಯೋಜಕರಾದ ಕೆ. ಜಯಮ್ಮ ಅವರು ತಿಳಿಸಿದ್ದಾರೆ. ಆಗಸ್ಟ್ ತಿಂಗಳಿನಲ್ಲಿ ಪ್ರಾರಂಭದಲ್ಲಿದ್ದ 151 ಪ್ರಕರಣಗಳ ಜೊತೆಗೆ 13 ಹೊಸ ಮೊಕದ್ದಮೆಗಳು ಸ್ವೀಕೃತಗೊಂಡು ಒಟ್ಟು 164 ಪ್ರಕರಣಗಳು ವಿಲೇವಾರಿಗೆ ಲಭ್ಯವಿದ್ದವು. ಇವುಗಳಲ್ಲಿ 3 ಪ್ರಕರಣಗಳು (ಆರೋಪಿಗಳ ಬಿಡುಗಡೆ) ವಿಲೇವಾರಿಯಾಗಿದ್ದು, ಆಗಸ್ಟ್ ಅಂತ್ಯದ ವೇಳೆಗೆ ಒಟ್ಟು 161 ಪ್ರಕರಣಗಳು ಬಾಕಿ ಉಳಿದಿವೆ ಎಂದು ತಿಳಿಸಿದರು.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಸಿದ್ದಲಿಂಗೇಶ್, ಮಹಾನಗರ ಪಾಲಿಕೆ ಆಯುಕ್ತ ಮಹಾಂತೇಶ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್, ಡಿಹೆಚ್‌ಒ ಡಾ.ಕೃಷ್ಣ್ಣಾ, ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ಯೋಗೇಂದ್ರ ಹಾಗೂ ಸಮಿತಿಯ ಸದಸ್ಯರುಗಳು ಉಪಸ್ಥಿತರಿದ್ದರು. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST