LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

550 ಹಜ್ ಯಾತ್ರಿಗಳ ದುರ್ಮರಣ ಮೆಕ್ಕಾದಲ್ಲಿ ಗರಿಷ್ಠ ತಾಪಮಾನದಿಂದ ಸಂಭವಿಸಿದ ದುರಂತ

ಮೆಕ್ಕಾ: ಮೆಕ್ಕಾದಲ್ಲಿ ಗರಿಷ್ಠ ತಾಪಮಾನವು 50 ಡಿಗ್ರಿ ಸೆಲ್ಸಿಯಸ್ ತಲುಪಿದ್ದು, ಹಜ್ ಯಾತ್ರೆಗೆ ತೆರಳಿದ್ದ 550 ಮಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಮುಸ್ಲಿಮರ ಪವಿತ್ರ ಯಾತ್ರೆ ಎಂದೇ ಕರೆಸಿಕೊಳ್ಳುವ ಹಜ್ ಯಾತ್ರೆ ಜೂನ್ 14ರಿಂದ ಪ್ರಾರಂಭವಾಗಿತ್ತು. ಮುಸ್ಲಿಮರ ಪವಿತ್ರ ಯಾತ್ರಾ ಸ್ಥಳ ಎಂದರೆ ಅದು ಮೆಕ್ಕಾ, ಸೌದಿ ಅರೇಬಿಯಾದ ಈ ನಗರ ಮೆಕ್ಕಾಗೆ ಹಜ್ ಯಾತ್ರೆ ಭಾಗವಾಗಿ ಸುಮಾರು 20 ಲಕ್ಷಕ್ಕೂ ಹೆಚ್ಚು ಮುಸ್ಲಿಮರು ಪ್ರತಿ ವರ್ಷ ಭೇಟಿ ನೀಡುತ್ತಾರೆ.

ವಿಶ್ವದ ಅತಿದೊಡ್ಡ ಧಾರ್ಮಿಕ ಕ್ಷೇತ್ರಗಳಲ್ಲಿ ಮೆಕ್ಕಾವೂ ಒಂದು. ಎಲ್ಲ ಮುಸ್ಲಿಮರು ಜೀವನದಲ್ಲಿ ಒಮ್ಮೆಯಾದರೂ ಮೆಕ್ಕಾ ಯಾತ್ರೆ ಕೈಗೊಳ್ಳಬೇಕು ಎಂಬ ಮಹದಾಸೆ ಹೊಂದಿರುತ್ತಾರೆ. ಮೃತಪಟ್ಟವರಲ್ಲಿ ಸಾಕಷ್ಟು ಮಂದಿ ಈಜಿಪ್ಟ್ ನಾಗರಿಕರು ಎನ್ನಲಾಗಿದೆ, ಜೋರ್ಡಾನ್‍ನಕನಿಷ್ಠ 60 ಯಾತ್ರಿಕರು ಬಿಸಿಲಿನ ತಾಪದಿಂದ ಸಾವನ್ನಪ್ಪಿದ್ದಾರೆ. ಪ್ರತಿ ವರ್ಷವೂ ಹಜ್ ಯಾತ್ರೆಯ ಸಮಯದಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯೆಸ್‍ನಷ್ಟಿರುತ್ತಿತ್ತು ಈ ಬಾರಿ ಭಾರಿ ಏರಿಕೆ ಕಂಡಿದೆ.

ಹವಾಮಾನ ಬದಲಾವಣೆಯು ಹಜ್ ಯಾತ್ರೆಯ ಮೇಲೆ ಪರಿಣಾಮ ಬೀರುತ್ತಿದೆ ಎಂದು ಕಳೆದ ತಿಂಗಳು ಪ್ರಕಟವಾದ ಸೌದಿ ಅಧ್ಯಯನದ ಪ್ರಕಾರ, ಧಾರ್ಮಿಕ ಆಚರಣೆಗಳನ್ನು ನಡೆಸುವ ಪ್ರದೇಶದಲ್ಲಿ ತಾಪಮಾನವು ಪ್ರತಿ ದಶಕದಲ್ಲಿ 0.4 ಅ (0.72 ಈ) ಏರುತ್ತಿದೆ.ಸೌದಿ ರಾಷ್ಟ್ರೀಯ ಹವಾಮಾನ ಕೇಂದ್ರವು ಸೋಮವಾರ ಮೆಕ್ಕಾದ ಗ್ರ್ಯಾಂಡ್ ಮಸೀದಿಯಲ್ಲಿ ತಾಪಮಾನವು 51.8 ಡಿಗ್ರಿ ಸೆಲ್ಸಿಯಸ್ (125 ಫ್ಯಾರನ್‍ಹೀಟ್) ತಲುಪಿದೆ ಎಂದು ಹೇಳಿದೆ. 1920 ರ ದಶಕದಲ್ಲಿ ಮೆಕ್ಕಾವನ್ನು ಸೌದಿ ರಾಜಮನೆತನ ತಮ್ಮ ವಶಕ್ಕೆ ತೆಗೆದುಕೊಂಡಿತು.

ಆ ಬಳಿಕ ತೀರ್ಥಯಾತ್ರೆ ಆಯೋಜಿಸುವುದು ಹೆಮ್ಮೆ ಎಂದು ಅದು ಪರಿಗಣಿಸಿದೆ. ಇಲ್ಲಿನ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಶತಕೋಟಿ ಡಾಲರ್‍ಗಳನ್ನು ಹೂಡಿಕೆ ಮಾಡಲಾಗಿದೆ. ಯಾತ್ರಾರ್ಥಿಗಳ ಯೋಗಕ್ಷೇಮಕ್ಕಾಗಿ ಸೌದಿ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದೆ. ಆದರೂ 2015 ರಲ್ಲಿ ಇಲ್ಲಿ ಉಂಟಾದ ಕಾಲ್ತುಳಿತಕ್ಕೆ ಸುಮಾರು 2,400 ಕ್ಕೂ ಹೆಚ್ಚು ಯಾತ್ರಾರ್ಥಿಗಳು ಸಾವನ್ನಪ್ಪಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು