LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಡಿವೈಡರ್‍ಗೆ ಕಾರು ಡಿಕ್ಕಿ 6 ಮಂದಿ ದುರ್ಮರಣ

ಜೆಮ್‍ಶೆಡ್ ಪುರ: ಕಾರು ನಿಯಂತ್ರಣ ತಪ್ಪಿ ಡಿವೈಡರ್‍ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿರುವ ಘಟನೆ ಜಾರ್ಖಂಡ್‍ನ ಜೆಮ್‍ಶೆಡ್‍ಪುರದಲ್ಲಿ ನಡೆದಿದೆ. ಅಪಘಾತದ ವೇಳೆ ಕಾರಿನಲ್ಲಿ ಆದಿತ್ಯಪುರ ನಿವಾಸಿಗಳಾದ ಒಟ್ಟು 8 ಮಂದಿ ಇದ್ದರು. ಐವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಪೊಲೀಸರ ಪ್ರಕಾರ, ಗಾಯಗೊಂಡ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಜಮ್‍ಶೆಡ್‍ಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.ಮಾಹಿತಿ ಪ್ರಕಾರ ಎಲ್ಲಾ ಯುವಕರು ಆದಿತ್ಯಪುರದ ಬಾಬಾ ಕುಟಿ ಪ್ರದೇಶದವರಾಗಿದ್ದಾರೆ.
ಬಿಸ್ತುಪುರದಿಂದ ಮರೈನ್ ಡ್ರೈವ್ ಕಡೆಗೆ ಕಾರಿನಲ್ಲಿ ಪಿಕ್‍ನಿಕ್‍ಗೆ ಹೋಗುತ್ತಿದ್ದರು.

ಅವರ ಕಾರಿನ ವೇಗ ತುಂಬಾ ಹೆಚ್ಚಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದೇ ವೇಳೆ ಡಿಸಿ ನಿವಾಸದ ಬಳಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಬ್ಬಿಣದ ಕಂಬಕ್ಕೆ ಡಿಕ್ಕಿ ಹೊಡೆದು ನಂತರ ಮರಕ್ಕೆ ಡಿಕ್ಕಿ ಹೊಡೆದಿದೆ. ರಸ್ತೆ ಅಪಘಾತದ ಬಗ್ಗೆ ಮಾಹಿತಿ ಪಡೆದ ಬಿಸ್ತಪುರ್ ಮತ್ತು ಸೋನಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಈ ಕುರಿತು ತನಿಖೆ ಆರಂಭಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು