LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

63 ವರ್ಷದ ಡ್ರಗ್ ಪೆಡ್ಲರ್ ಬಂಧನ, 40 ಕೆಜಿ ಗಾಂಜಾ, ರೂ. 33 ಲಕ್ಷ ನಗದು ವಶ

ಬೆಂಗಳೂರು: ಹಲವು ವರ್ಷಗಳಿಂದ ಡ್ರಗ್ಸ್ ದಂಧೆ ಮಾಡುತ್ತಿದ್ದ 63 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಸಹ ಆಕೆಯೊಂದಿಗೆ ಕೈಜೋಡಿಸಿದ್ದಾರೆ ಶಂಕೆ ವ್ಯಕ್ತಪಡಿಸಿರುವ ಪೊಲೀಸರು, ಈ ಕುರಿತು ತನಿಖೆ ನಡೆಸುತ್ತಿದ್ದಾರೆ.

ಬಂಧನದ ವೇಳೆ 40 ಕೆಜಿ ಗಾಂಜಾ, 33 ಲಕ್ಷ ರೂ. ನಗದು, ಮಚ್ಚು ಸೇರಿದಂತೆ ಸುಮಾರು ಎಂಟು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ದೊರೆತ ಮಾಹಿತಿ ಆಧಾರದ ಮೇರೆಗೆ ಬ್ಯಾಟರಾಯನಪುರ ಪೊಲೀಸರು ಮಾದಕ ವಸ್ತು ಮಾರಾಟಗಾರ್ತಿ ಕಾಲಿ ಮೆಹರುನಿಸಾ ಅವರ ಒಡೆತನದ ಹಲವು ಮನೆಗಳ ಪೈಕಿ ಒಂದರ ಮೇಲೆ ದಾಳಿ ನಡೆಸಿದ್ದಾರೆ.

ಅಲ್ಲಿ 40 ಕೆಜಿ ಗಾಂಜಾ ಪತ್ತೆಯಾಗಿದೆ. ಮೆಹ್ರುನಿಸಾ ಅವರ ಸಂಬಂಧಿ ಮತ್ತು ಇನ್ನೊಬ್ಬ ಬಾಡಿಗೆದಾರರಿಗೆ ಮನೆಯನ್ನು ಬಾಡಿಗೆಗೆ ನೀಡಲಾಗಿತ್ತು, ಅವರನ್ನು ಬಂಧಿಸಿದ ನಂತರ ಪೊಲೀಸರಿಗೆ ಆಕೆಯ ಬಗ್ಗೆ ಮಾಹಿತಿ ಬಾಯ್ಬಿಟ್ಟಿದ್ದಾರೆ.

ಪೊಲೀಸರು ತನ್ನನ್ನು ಹುಡುಕುತ್ತಿದ್ದಾರೆ ಎಂದು ತಿಳಿದ ನಂತರ, ಮೆಹರುನಿಸಾ ಬೆಂಗಳೂರಿನಿಂದ ಓಡಿಹೋಗಿದ್ದರು. ಮೊದಲು ಗುಜರಾತ್‌ಗೆ ಹೋಗಿ, ನಂತರ ಉತ್ತರ ಪ್ರದೇಶ, ಮಹಾರಾಷ್ಟ್ರದ ನಾಗ್ಪುರಕ್ಕೆ ತೆರಳಿದಳು. ಅಲ್ಲಿಯೇ ಆಕೆಯನ್ನು ಬಂಧಿಸಲಾಗಿದೆ. ಗುರುವಾರ ಸಂಜೆ ಪೊಲೀಸರು ಆಕೆಯನ್ನು ಬಂಧಿಸಿದ್ದು, ನಂತರ ಬೆಂಗಳೂರಿಗೆ ಕರೆತಂದು ಬ್ಯಾಟರಾಯನಪುರದಲ್ಲಿರುವ ಆಕೆಯ ಮನೆಯನ್ನು ಶೋಧಿಸಲು ನ್ಯಾಯಾಲಯದ ಅನುಮತಿ ಕೋರಿದ್ದರು. ಅಲ್ಲಿ ಪೊಲೀಸರು ತಪಾಸಣೆ ನಡೆಸಿದಾಗ 33 ಲಕ್ಷ ರೂ. ನಗದು ಮತ್ತು ಎಂಟು ಶಸ್ತ್ರಾಸ್ತ್ರಗಳು ಪತ್ತೆಯಾಗಿವೆ.

ಮಹಿಳೆ ಹಲವಾರು ವರ್ಷಗಳಿಂದ ಮಾದಕ ದ್ರವ್ಯ ದಂಧೆ ನಡೆಸುತ್ತಿದ್ದಾಳೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದ್ದು, ಆಕೆ ಪೊಲೀಸ್ ದಾಳಿ ನಡೆಯದಂತೆ ನೋಡಿಕೊಳ್ಳುತ್ತಿದ್ದು, ಹಿರಿಯ ಅಧಿಕಾರಿಗಳ ಪಾತ್ರದ ಬಗ್ಗೆ ಅನುಮಾನ ವ್ಯಕ್ತವಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪತಿ ಮತ್ತು ಮಕ್ಕಳೊಂದಿಗೆ ವಾಸಿಸುತ್ತಿದ್ದ ಮೆಹರುನಿಸಾ ಸಿಕ್ಕಾಪಟ್ಟೆ ಆಸ್ತಿ ಮಾಡಿದ್ದರು. ಇತ್ತೀಚೆಗಷ್ಟೇ 35 ಲಕ್ಷ ರೂ.ಗೆ ಐಷಾರಾಮಿ ಕಾರು ಖರೀದಿಸಿದ್ದು, ಬ್ಯಾಟರಾಯನಪುರದಲ್ಲಿ ಜಮೀನು ಖರೀದಿಸಿದ್ದರು. ಭೂಮಿ ಖರೀದಿಯ ಸತ್ಯಾಸತ್ಯತೆ ಬಗ್ಗೆಯೂ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿರುವ ಬ್ಯಾಟರಾಯನಪುರ ಪೊಲೀಸರಿಗೆ ಈಕೆ ಎಲ್ಲಿಂದ ಮಾದಕ ದ್ರವ್ಯಗಳನ್ನು ತರುತ್ತಿದ್ದಳು ಎಂಬುದು ಇನ್ನೂ ಪತ್ತೆಯಾಗಿಲ್ಲ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು