LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ 68ನೇ ಕನ್ನಡ ರಾಜ್ಯೋತ್ಸವ

ದೊಡ್ಡಬಳ್ಳಾಪುರ: ಹೊರರಾಜ್ಯಗಳಿಂದ ಬಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರಾಗಿ ಕರ್ತವ್ಯ ನಿರ್ವಹಿಸುತ್ತಾ ಕನ್ನಡ ಕಲಿತು ಸುಲಲಿತವಾಗಿ ಮಾತನಾಡುತ್ತಾ, ಓದುವುದನ್ನು ಕಲಿತವರಿಗೆ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸನ್ಮಾನಿಸುವ ಮೂಲಕ 68ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರಾಗಿರುವ ಬಿಹಾರ ರಾಜ್ಯದ ಮಣೀಶ್ ಶರ್ಮ ಮತ್ತು ಅನಿಲ್ ಗುಪ್ತ ಅವರನ್ನು ಕನ್ನಡಪರ ಸಂಘಟನೆಗಳ ಮುಖಂಡರು ಸನ್ಮಾನಿಸಿದರು.ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಮಾತನಾಡಿದ ಕನ್ನಡಪರ ಹಿರಿಯ ಹೋರಾಟಗಾರ ಸಂಜೀವನಾಯಕ್, ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು ಸುವರ್ಣ ಸಂಭ್ರಮ ಆಚರಿಸುತ್ತಿರುವುದು ಕನ್ನಡಿಗರ ಹೆಮ್ಮೆಯ ಸಂಗತಿಯಾಗಿದೆ.

ಕನ್ನಡಿಗರು ಪ್ರಾದೇಶಿಕ ಹಿನ್ನೆಲೆಯಲ್ಲಿ ಸ್ವಾಭಿಮಾನಗಳಾಗಬೇಕು. ಕನ್ನಡ ಅಸ್ಮಿತೆಗೆ ಉಂಟಾಗುವ ಆತಂಕಗಳನ್ನು ಕನ್ನಡಿಗರು ಎಂದಿಗೂ ಸಹಿಸಿಕೊಳ್ಳಬಾರದು. ಕನ್ನಡ, ಕನ್ನಡಿಗರು ಮತ್ತು ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಎಲ್ಲಾ ಕನ್ನಡಿಗರು ಚಿಂತನೆ ನಡೆಸಬೇಕಾಗಿದೆ. ಸೌಹಾರ್ದತೆಗೆ ಹೆಸರಾಗಿರುವ ಕರ್ನಾಟಕದಲ್ಲಿ ಎಂದಿಗೂ ಮತೀಯ ಶಕ್ತಿಗಳ ಬೆಳವಣಿಗೆ ಅವಕಾಶ ನೀಡಬಾರದು. ಕರ್ನಾಟಕದಲ್ಲಿ ಹಲವಾರು ಸಮಸ್ಯೆಗಳು ಬಗ್ಗೆ ಹರಿಸಲು ಜನಪ್ರತಿನಿಧಿಗಳು ಇಚ್ಛಾಶಕ್ತಿಯನ್ನು ತೋರಿಸುತ್ತಿಲ್ಲ.

ಪ್ರಾದೇಶಿಕ ಪಕ್ಷಗಳ ಅಗತ್ಯವನ್ನು ಕರ್ನಾಟಕ ಜನರು ಬಯಸುತ್ತಾ ಬಂದಿದ್ದರೂ ಇನ್ನು ಈಡೇರಿಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ ಎಂದರು.ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾ ಗೌರವ ಕಾರ್ಯದರ್ಶಿ ಪ್ರೊ .ಕೆ.ಆರ್.ರವಿಕಿರಣ್ , ಮಾಜಿ ಕೋಶಾಧ್ಯಕ್ಷ ನ.ಮಹಾದೇವ್, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಪಿ.ಗೋವಿಂದರಾಜು, ನಿಕಟಪೂರ್ವ ಅಧ್ಯಕ್ಷೆ ಪ್ರಮೀಳಾ ಮಹಾದೇವ್, ಮಾಜಿಅಧ್ಯಕ್ಷ ಡಿ.ಶ್ರೀಕಾಂತ್, ಗೌರವ ಕಾರ್ಯದರ್ಶಿಎ.ಜಯರಾಮ, ಕೋಶಾಧ್ಯಕ್ಷ ಸಾ.ಲ.ಕಮಲನಾಥ್, ಕಸಬಾ ಹೋಬಳಿ ಅಧ್ಯಕ್ಷ ದಾದಾಪೀರ್,ಗೌರವ ಕಾರ್ಯದರ್ಶಿ ಜಿ.ಸುರೇಶ್, ಸಾಸಲು ಹೋಬಳಿ ಅಧ್ಯಕ್ಷ ಜಿ.ಎಂ.ನಾಗರಾಜು, ಪ್ರತಿನಿಧಿಗಳಾದ ಚಿಕ್ಜ ತುಮಕೂರು ಮುನಿರಾಜು,ನಾಗರತ್ನಮ್ಮ, ಗೆಜ್ಜಗದಹಳ್ಳಿ ಮುನಿರಾಜು,ಪತ್ರಕರ್ತರ ಸಂಘದ ಅಧ್ಯಕ್ಷ ಗಂಗರಾಜ ಶಿರವಾರ, ಕಾರ್ಮಿಕ ಸಂಘಟನೆಯ ಅಧ್ಯಕ್ಷ ಪಿ.ಎ.ವೆಂಕಟೇಶ್, ಕನ್ನಡ ಜಾಗೃತ ಪರಿಷತ್ತಿನ ಕಾರ್ಯದರ್ಶಿ ಡಿ.ಪಿ.ಆಂಜನೇಯ, ಕನ್ನಡ ಪಕ್ಷದ ಅಧ್ಯಕ್ಷ ಡಿ.ವೆಂಕಟೇಶ್, ಕಾರ್ಯದರ್ಶಿ ಮುನಿಪಾಪಣ್ಣ, ಕನ್ನಡಪರ ಸಂಘಟನೆಯ ನಾಗರಾಜ್, ಸೂರ್ಯ ಕಾಲೇಜಿನ ಪ್ರಾಂಶುಪಾಲ ಎಂ.ಸಿ.ಮಂಜುನಾಥ್, ಪತ್ರಕರ್ತ ರಹೀಮ್, ಎಂಎಬಿಎಲ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು