LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Business News

ನ.2ರಿಂದ ಬೆಂಗಳೂರಿನಲ್ಲಿ 6ನೇ ಇಂಡಿಯ ಮ್ಯಾನುಫ್ಯಾಕ್ಚರಿಂಗ್ ಶೋ 2023

ಬೆಂಗಳೂರು: ನಗರದ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನ ಕೇಂದ್ರ (BIEC ) ಯಲ್ಲಿ ನವೆಂಬರ್ 02 ರಿಂದ ಮೂರುದಿನಗಳ ಕಾಲ ಆರನೇ ಇಂಡಿಯಾ ಮ್ಯಾನುಪ್ಯಾಕ್ಚರಿಂಗ್ ಶೋ IMS-2023 ಆಯೋಜನೆಗೊಂಡಿದ್ದು ಇದರಲ್ಲಿ ಏರೋಸ್ಪೇಸ್ ಮತ್ತು ಡಿಫೆನ್ಸ್ ಇಂಜಿನಿಯರಿಂಗ್ ಸಂಬಂಧಿತ ವಸ್ತುಗಳ ಪ್ರದರ್ಶನ ಏರ್ಪಡಿಸಲಾಗಿದೆ.

Also read

ಕೇಂದ್ರ ರಕ್ಷಣಾ ಸಚಿವಾಲಯ ಮತ್ತು ಡಿಫೆನ್ಸ್  ಪ್ರೊಡಕ್ಷನ್ ಇಲಾಖೆ ಪ್ರೋತ್ಸಾಹದಡಿಯಲ್ಲಿ ಲಘು ಉದ್ಯೋಗ ಭಾರತಿ,ಕರ್ನಾಟಕ ಮತ್ತು ಐಎಂಎಸ್ ಫೌಂಡೇಷನ್ ಸಹಭಾಗಿತ್ವದಲ್ಲಿ ನಗರದ BIEC ಯಲ್ಲಿ ಆಯೋಜನೆಗೊಂಡಿರುವ IMS-2023 ಬೃಹತ್ ಪ್ರದರ್ಶನವನ್ನು ನವೆಂಬರ್ 2 ರಂದು ಮಧ್ಯಾಹ್ನ 1ಗಂಟೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉದ್ಘಾಟಿಸಲಿದ್ದಾರೆ ಎಂದು ಐಎಂಎಸ್ ಫೌಂಡೇಷನ್ ಛೇರ್ಮನ್ ಹೆಚ್ ವಿ ಎಸ್ ಕೃಷ್ಣ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

ಕೇಂದ್ರ ಸಂಸದೀಯ ವ್ಯವಹಾರ ಮತ್ತು ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ ಜೋಶಿ,ವಿದೇಶಾಂಗ ರಾಜ್ಯ ಸಚಿವ ವಿ ಮುರಳೀ  ಧರನ್,ರಾಜ್ಯಸಭಾ ಸದಸ್ಯ ಸುಧಾಂಶು ತ್ರಿವೇದಿ,ಐಎಂಎಸ್-2023 ಸಲಹಾ ಸಮಿತಿ ಅಧ್ಯಕ್ಷ ಬಾಬಾ ಕಲ್ಯಾಣಿ,ಐ&ಖಿ ಡಿಫೆನ್ಸ್ ಮುಖ್ಯಸ್ಥ ಅರುಣ್ ಟಿ.ರಾಮಚಂದಾನಿ ಅವರುಗಳು ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಐಎಂಎಸ್ ಛೇರ್ಮನ್ ಕೃಷ್ಣ ಹೇಳಿದ್ದಾರೆ.

ನವೆಂಬರ್ 2,3 ಮತ್ತು 4 ರಂದು ನಡೆಯಲಿರುವ 6ನೇ ಭಾರತ ಮ್ಯಾನುಫ್ಯಾಕ್ಚರಿಂಗ್ ಶೋ IMS-2023 ಪ್ರದರ್ಶನದಲ್ಲಿ ಬಾಹ್ಯಾಕಾಶ ಮತ್ತು ಡಿಫೆನ್ಸ್ ಗೆ ಸಂಬಂಧಿಸಿದಂತೆ ಇತ್ತೀಚಿನ ತಂತ್ರಜ್ಞಾನಗಳು, ಯಂತ್ರೋಪಕರಣಗಳು, ಲಾಜಿಸ್ಟಿಕ್ಸ್, ಏರೋಸ್ಪೇಸ್ , ಡಿಫೆನ್ಸ್ ಇಂಜಿನಿಯರಿಂಗ್, ಆಟೊಮೇಷನ್ ಮತ್ತು ರೊಬೊಟಿಕ್ಸ್, ಎನರ್ಜಿ & ಪರಿಸರ ಎಲೆಕ್ಟ್ರಾನಿಕ್ಸ್ ಮತ್ತು ಎಲೆಕ್ಟ್ರಿಕಲ್ಸ್ ಮತ್ತು ಜನರಲ್ ಇಂಜಿನಿಯರಿಂಗ್ ಕುರಿತಂತೆ ಪ್ರದರ್ಶನಗಳಿಗೆ ಇದು ವೇದಿಕೆಯಾಗಲಿದೆ. ದೇಶ,ವಿದೇಶಿ ಪ್ರತಿನಿಧಿಗಳು,ಕೇಂದ್ರ ಸರ್ಕಾರದ ಸಂಸ್ಥೆಗಳು, ರಾಜ್ಯ ಸರ್ಕಾರಗಳು ಮತ್ತು ಅದರ ಇಲಾಖೆಗಳು, ಮತ್ತು ಎಂಎಸ್‍ಎಂಇಗಳು ಭಾಗವಹಿಸಲಿವೆ.ಪ್ರದರ್ಶನದ ಜೊತೆಗೆ, ವಿಚಾರ ಸಂಕಿರಣಗಳನ್ನು ಆಯೋಜಿಸಲಾಗಿದೆ.

Also read
Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು