LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

"೭.೧೧ ಕೋಟಿರೂ. ಹಗಲು ದರೋಡೆ ಪ್ರಕರಣ ೨೦ಕ್ಕೂ ಹೆಚ್ಚು ಮಂದಿ ವಶಕ್ಕೆ, ಪೊಲೀಸರಿಂದ ವಿಚಾರಣೆ"

ಬೆಂಗಳೂರು :ಎಟಿಎಂ ಕೇಂದ್ರಗಳಿಗೆ ಹಣ ತುಂಬ ಹೊರಟಿದ್ದ ಸಿಎಂಎಸ್ ಏಜೆನ್ಸಿ ವಾಹನವನ್ನು ಆರ್‌ಬಿಐ ಅಧಿಕಾರಿಗಳ ಸೋಗಿನಲ್ಲಿ ಅಡ್ಡಗಟ್ಟಿ ೭.೧೧ಕೋಟಿ ದರೋಡೆ ಪ್ರಕರಣದ ೨೦ ಕ್ಕೂ ಹೆಚ್ಚು ಮಂದಿಯನ್ನು ನಗರ ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆಕೈಗೊಂಡಿದ್ದಾರೆ. ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಹೆಚ್‌ಡಿಎಫ್ ಸಿ ಬ್ಯಾಂಕ್ ಸಿಬ್ಬಂದಿ, ಸಿಎಂಎಸ್ ಸಿಬ್ಬಂದಿಯನ್ನು ತೀವ್ರ ವಿಚಾರಣೆ ಮಾಡಲಾಗಿದ್ದು, ಘಟನೆಯ ಸಮಯವನ್ನು ಆಧರಿಸಿ ಪ್ರಶ್ನೆ ಕೇಳಲಾಗುತ್ತಿದೆ.

ಇನ್ನು ಪ್ರಕರಣದ ಪತ್ತೆಗೆ ರಚಿಸಲಾಗಿರುವ ವಿಶೇಷ ತಂಡಗಳು ಆರೋಪಿಗಳಿಗಾಗಿ ಹುಡುಕಾಟ ನಡೆಸಿದ್ದು, ರಾಜ್ಯದ ಗಡಿಭಾಗಗಳಾದ ಆಂಧ್ರಪ್ರದೇಶ, ತಮಿಳುನಾಡಲ್ಲಿ ಆರೋಪಿಗಳಿಗಾಗಿ ತಲಾಶ್ ಮುಂದುವರಿದಿದೆ. ೧೦೦,ಕ್ಕೂ ಹೆಚ್ಚು ಪೊಲೀಸರುದರೋಡೆಕೋರ ಪತ್ತೆಗೆ ಹಗಲಿರುಳು ಶ್ರಮಿಸುತ್ತಿದ್ದಾರೆ.ಪರಪ್ಪನಅಗ್ರಹಾರಜೈಲಿಗೂ ವಿಶೇಷ ತಂಡವೊಂದು ಭೇಟಿಜೈಲಿನಿಂದಕೃತ್ಯಕ್ಕೆ ಸಂಚು ರೂಪಿಸಿರುವ ಅನುಮಾನದ ಮಾಹಿತಿಕಲೆಹಾಕಲಾಗಿದೆ.

ರಾಬರಿಗ್ಯಾಂಗ್ ಹಾಗೂ ಜೈಲಿನ ಒಳಗಿರುವ ಯಾರಿಗಾದರೂ ಲಿಂಕ್‌ ಇದೆಯಾ ಎಂಬ ಆಯಾಮದಲ್ಲಿ ವಿಚಾರಣೆ ನಡೆಸಲಾಗಿದೆ, ಪ್ರಕರಣವನ್ನುತಾಂತ್ರಿಕ ಅಂಶಗಳು,ಸ್ಥಳದಲ್ಲಿ ದೊರೆತ ಅಂಶಗಳು, ಸಿಎಂಎಸ್ ಏಜೆನ್ಸಿ ವಾಹನದ ಸಿಬ್ಬಂದಿ ನೀಡಿರುವ ಮಾಹಿತಿಯನಯ ಆಧರಿಸಿ ಶೋಧ ಕೈಗೊಳ್ಳಲಾಗಿದೆ.

ವೆಬ್ ಸೀರೀಸ್ ಪ್ರೇರಿತ: ಕೃತ್ಯವು ವೆಬ್ ಸೀರೀಸ್ ಪ್ರೇರಿತವಾ ಎನ್ನುವ ಅನುಮಾನ ವ್ಯಕ್ತವಾಗಿದೆ. ಆರೋಪಿಗಳು ದರೋಡೆಗೆ ಹಲವು ದಿನಗಳಿಂದ ಸಂಚು ರೂಪಿಸಲಾಗಿತ್ತು,
ಮೂರು ಠಾಣೆಗೆ ಸೇರುವ ಸ್ಥಳದಲ್ಲಿ ವಾಹನ ಬಿಡುವುದು ಕೂಡ ಯೋಜನೆ ಆಗಿತ್ತು ಎಂಬ ಅನುಮಾನ ವ್ಯಕ್ತವಾಗಿದೆ. ಸಿಎಂಎಸ್ ವಾಹನ ಸಿಕ್ಕಿದ್ದ ಫ್ಲೈ ಓವರ್ ಮೂರು ಪೊಲೀಸ್ ಠಾಣೆಗಳಿಗೆ ಗಡಿಯಾಗಿದೆ.ನಿಮಾನ್ಸ್  ನಿಂದ ಮೇಲ್ಭಾಗಕ್ಕೆ ಬಂದರೆಆಡುಗೋಡಿಠಾಣೆ ಸರಹದ್ದು, ವಾಹನದಎಡಬದಿಯಲ್ಲಿ ಸುದ್ದುಗುಂಟೆಪಾಳ್ಯ ಠಾಣಾ ವ್ಯಾಪ್ತಿ ಮತ್ತುಕೃತ್ಯ ನಡೆದಿರುವುದು ಸಿದ್ದಾಪುರ ಠಾಣಾ ವ್ಯಾಪ್ತಿಯಲ್ಲಿ.ಆ ಪೈಕಿ ಸಿದ್ದಾಪುರ ಠಾಣೆದಕ್ಷಿಣ ವಿಭಾಗಕ್ಕೆ ಸೇರಿದರೆ ವಾಹನ ಸಿಕ್ಕಿದ್ದು ಸುದ್ದುಗುಂಟೆಪಾಳ್ಯ ಪೊಲೀಸ್‌ಠಾಣಾ ವ್ಯಾಪ್ತಿಯಲ್ಲಿ.ಈ ಠಾಣೆ ಸೌತ್ - ಈಸ್ಟ್ -  ವಿಭಾಗಕ್ಕೆ ಸೇರಿದ್ದು. ಹೀಗಾಗಿ ವಾಹನ ಸಿಕ್ಕ ಬಳಿಕ ಮೊದಲುಯಾವಠಾಣಾ ವ್ಯಾಪ್ತಿಗೆಘಟನೆ ಬರಲಿದೆ ಎಂಬ ಗೊಂದಲ ಉಂಟಾಗಿದೆ.

ಠಾಣಾ ವ್ಯಾಪ್ತಿಗೊಂದಲ: ಪೊಲೀಸರು ಸಾಮಾನ್ಯವಾಗಿ ತಮ್ಮ ಠಾಣೆ ಸಹರದ್ದಿನ ಆಧಾರದ ಮೇಲೆ ಕೆಲಸ ಮಾಡಲಿರುವ ಕಾರಣ,ದರೋಡೆಕೋರರ ಯೋಜನೆಯು ಸೇರಿತ್ತಾ  ಎನ್ನುವ ಅಂಶವೂ ಇತ್ತಾ ಎಂಬ ಪ್ರಶ್ನೆ ಉದ್ಭವಿಸಿದೆ. ಹೀಗಾಗಿ, ಅನೇಕ ದ ಗಳಲ್ಲಿ ಇರುವಂತೆ ಪೊಲೀಸರನ್ನೇ ಗೊಂದಲಕ್ಕೆ ದೂಡಿ ಗ್ರೇಟ್ ಎಸ್ಕೇಪ್  ಆಗುವ ಸಂಚು  ಆರೋಪಿಗಳದ್ದಾಗಿತ್ತಾ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು