LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Davanagere

ಪ್ರಧಾನಮಂತ್ರಿ ಮತ್ಸ್ಯಸಂಪದ ಯೋಜನೆಗೆ ಆಯ್ಕೆ: ಪ್ರತಿ ಹೆಕ್ಟೇರ್‍ಗೆ ರೂ.7 ಲಕ್ಷ ಘಟಕ ವೆಚ್ಚ

ದಾವಣಗೆರೆ: ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮೀನುಮರಿ ಸಾಕಾಣಿಕೆಗೆ ಫಾರಂ ಪಾಂಡ್ ನಿರ್ಮಾಣಕ್ಕೆ ಅರ್ಜಿ ಸಲ್ಲಿಸಿದ ಜಿಲ್ಲೆಯ ರೈತರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ತಿಳಿಸಿದರು.

ಜನವರಿ 8 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಫಲಾನುಭವಿಗಳ ಆಯ್ಕೆ ಸಭೆಯಲ್ಲಿ ಮಾತನಾಡಿದ ಅವರು ಮತ್ಸ್ಯ ಸಂಪದ ಯೋಜನೆಯಡಿ ಪ್ರತಿ ಹೆಕ್ಟೇರ್‍ಗೆ ಮೀನು ಕೃಷಿಗಾಗಿ ರೂ.7 ಲಕ್ಷ ಘಟಕ ವೆಚ್ಚ ನಿಗದಿ ಮಾಡಲಾಗಿದೆ. ಈ ಯೋಜನೆಯಡಿ ಸೌಲಭ್ಯ ಪಡೆಯಲು ಕೆರೆ ಅಥವಾ ಅಚ್ಚುಕಟ್ಟು ಪ್ರದೇಶದಲ್ಲಿ ಜಮೀನು ಹೊಂದಿರಬೇಕು. ಸಾಮಾನ್ಯ ವರ್ಗದವರಿಗೆ ಘಟಕ ವೆಚ್ಚದಲ್ಲಿ ಶೇ 40 ರಷ್ಟು, ಪ.ಜಾ, ಪ.ಪಂ ಹಾಗೂ ಮಹಿಳಾ ಫಲಾನುಭವಿಗಳಿಗೆ ಶೇ 60 ರಷ್ಟು ಸಬ್ಸೀಡಿ ನೀಡಲಾಗುತ್ತದೆ.

ದಾವಣಗೆರೆ ಜಿಲ್ಲೆಗೆ ಒಟ್ಟು 25 ಎಕರೆಯವರೆಗೆ ಮತ್ಸ್ಯ ಸಂಪದ ಯೋಜನೆಯಡಿ ಮೀನು ಕೃಷಿಗೆ ಅವಕಾಶ ಇದ್ದು ಈಗ 10 ಜನರು ಮಾತ್ರ ಅರ್ಜಿ ಸಲ್ಲಿಸಿದ್ದು 4.2 ಹೆಕ್ಟೇರ್‍ಗೆ ಅನುಮತಿ ನೀಡಲಾಗಿದೆ.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಶಾರದಮ್ಮ, ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಾಘವೇಂದ್ರ ಪ್ರಸಾದ್, ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಡಿ.ಅಣ್ಣಪ್ಪಸ್ವಾಮಿ ಉಪಸ್ಥಿತರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು