LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಎನ್‍ಕೌಂಟರ್‍ನಲ್ಲಿ 7 ನಕ್ಸಲೀಯರ ಸಾವು

ನಾರಾಯಣಪುರ: ಛತ್ತೀಸ್‍ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಡೆದ ಎನ್‍ಕೌಂಟರ್‍ನಲ್ಲಿ ಏಳು ನಕ್ಸಲೀಯರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಓರ್ಚಾ ಪ್ರದೇಶದ ಗೋಬೆಲ್ ಮತ್ತು ತುಲ್ತುಲಿ ಗ್ರಾಮಗಳ ಸಮೀಪದ ಕಾಡಿನಲ್ಲಿ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಸಿಬ್ಬಂದಿಯ ಜಂಟಿ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಾರಾಯಣಪುರ, ಕೊಂಡಗಾಂವ್, ದಾಂತೇವಾಡ ಮತ್ತು ಬಸ್ತಾರ್ ಜಿಲ್ಲೆಗಳ ಪೊಲೀಸ್ ಜಿಲ್ಲಾ ಮೀಸಲು ಗಾರ್ಡ್‍ಗೆ ಸೇರಿದ ಸಿಬ್ಬಂದಿ ಮತ್ತು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ) 45ನೇ ಬೆಟಾಲಿಯನ್ ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಎನ್ ಕೌಂಟರ್ ನಂತರ, ಸಮವಸ್ತ್ರದಲ್ಲಿದ್ದ ಏಳು ನಕ್ಸಲರ ದೇಹಗಳು ಮತ್ತು ಕೆಲವು ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಗುಂಡಿನ ಕಾಳಗದಲ್ಲಿ ಮೂವರು ಯೋಧರು ಗಾಯಗೊಂಡಿದ್ದು, ಈ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. ಹತ್ಯೆಯಾದ ನಕ್ಸಲೀಯರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಅಧಿಕಾರಿ ಮಾಹಿತಿ ನೀಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು