LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

ವಿಜಯ್ ಫೌಂಡೇಷನ್‌ನಿಂದ 71ನೇ ಕರ್ನಾಟಕ ರಾಜ್ಯೋತ್ಸವ ಆಚರಣೆ

ಬೆಂಗಳೂರು: ವಿಜಯ್ ಫೌಂಡೇಷನ್ ವತಿಯಿಂದ 71ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅಗ್ರಹಾರ ದಾಸರಹಳ್ಳಿಯ ಡಾ. ರಾಜಕುಮಾರ್ ವಾರ್ಡಿನ ಡಾ. ಬಿ. ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅದ್ದೂರಿ ಹಾಗೂ ಅರ್ಥಪೂರ್ಣ ಸಮಾರಂಭವನ್ನು ಆಯೋಜಿಸಲಾಗಿತ್ತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ವಿದ್ಯಾಭವನದ ಆಚಾರ್ಯ ಪದವೀಧರರಾದ ರೋಟರಿಯನ್ ಎ.ಸಿ.ಎನ್ ಮೂರ್ತಿ ಅವರು ವಹಿಸಿದ್ದರು. ಆರಂಭದಲ್ಲಿ ತಾಯಿ ಕನ್ನಡಾಂಬೆ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಲಾಯಿತು.ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಎ.ಸಿ.ಎನ್ ಮೂರ್ತಿ ಅವರು, ಕರ್ನಾಟಕ ಏಕೀಕರಣದ ಮಹತ್ವ ಹಾಗೂ ನಾಡು-ನುಡಿಗಾಗಿ ಹಿರಿಯರು ನಡೆಸಿದ ತ್ಯಾಗ ಮತ್ತು ಹೋರಾಟದ ಹಾದಿಯನ್ನು ಸ್ಮರಿಸಿದರು. ಎರಡು ಸಾವಿರ ವರ್ಷಗಳಿಗೂ ಅಧಿಕ ಭವ್ಯ ಇತಿಹಾಸ ಹೊಂದಿರುವ ಕನ್ನಡ ಭಾಷೆಗೆ ಎಂಟು ಜ್ಞಾನಪೀಠ ಪ್ರಶಸ್ತಿಗಳು ಲಭಿಸಿರುವುದು ನಮ್ಮೆಲ್ಲರ ಹೆಮ್ಮೆ ಎಂದು ಬಣ್ಣಿಸಿದರು.ಪ್ರಸ್ತುತ ಸಂದರ್ಭದಲ್ಲಿ ಕನ್ನಡಿಗರ ಸ್ಥಿತಿಗತಿಗಳ ಬಗ್ಗೆ ವಿಶ್ಲೇಷಿಸಿದ ಅವರು, “ಕೇವಲ ಭಾರಿ ಪ್ರಮಾಣದಲ್ಲಿ ರಾಜ್ಯೋತ್ಸವ ಆಚರಿಸುವುದರಿಂದ ಅಥವಾ ವೇದಿಕೆ ಭಾಷಣಗಳಿಂದ ಮಾತ್ರ ಕನ್ನಡ ಉದ್ಧಾರವಾಗುವುದಿಲ್ಲ. ಕನ್ನಡ ಕೇವಲ ನವೆಂಬರ್ ತಿಂಗಳ ಆಚರಣೆಗೆ ಸೀಮಿತವಾಗದೆ, ನಮ್ಮ ಉಸಿರಾಗಬೇಕು. ಮನೆಯಲ್ಲಿ ಮಕ್ಕಳಿಗೆ ಕನ್ನಡದ ಸೊಗಡು ಮತ್ತು ಸಾಹಿತ್ಯವನ್ನು ಪರಿಚಯಿಸುವುದರ ಜೊತೆಗೆ, ನಿತ್ಯ ಜೀವನದಲ್ಲಿ ಕನ್ನಡವನ್ನೇ ಬಳಸುವ ಮೂಲಕ ನಾವೆಲ್ಲರೂ ಒಗ್ಗೂಡಿ ಕನ್ನಡದ ಏಳಿಗೆಗಾಗಿ ಶ್ರಮಿಸಬೇಕಿದೆ” ಎಂದು ಕರೆ ನೀಡಿದರು.ಇದೇ ಸಂದರ್ಭದಲ್ಲಿ ಪರಭಾಷಿಕರಿಗೆ ವಿಶೇಷ ಮನವಿ ಮಾಡಿದ ಅವರು, “ಕನ್ನಡಿಗರು ವಿಶಾಲ ಹೃದಯಿಗಳು, ಎಲ್ಲರನ್ನೂ ಪ್ರೀತಿಯಿಂದ ಬರಮಾಡಿಕೊಳ್ಳುತ್ತಾರೆ. ರಾಜ್ಯದಲ್ಲಿ, ವಿಶೇಷವಾಗಿ ರಾಜಧಾನಿ ಬೆಂಗಳೂರಿನಲ್ಲಿ ಬದುಕು ಕಟ್ಟಿಕೊಳ್ಳಲು ಬೇರೆ ಬೇರೆ ರಾಜ್ಯಗಳಿಂದ ಬಂದು ನೆಲೆಸಿರುವ ಪರಭಾಷಿಕರು ಇಲ್ಲಿನ ನೆಲ, ಜಲ ಮತ್ತು ಸಂಸ್ಕೃತಿಗೆ ಗೌರವ ನೀಡಬೇಕು. ಅವರು ಕಡ್ಡಾಯವಾಗಿ ಕನ್ನಡ ಭಾಷೆಯನ್ನು ಕಲಿತು, ದೈನಂದಿನ ಜೀವನದಲ್ಲಿ ಕನ್ನಡದಲ್ಲೇ ವ್ಯವಹರಿಸುವ ಮೂಲಕ ನಾಡಿನ ಏಳಿಗೆಯಲ್ಲಿ ಕೈಜೋಡಿಸಬೇಕು” ಎಂದು ಆಶಯ ವ್ಯಕ್ತಪಡಿಸಿದರು.ಸಮಾರಂಭಕ್ಕೂ ಮುನ್ನ ಜಾನಪದ ಕಲಾ ತಂಡಗಳು ಹಾಗೂ ವಿಜಯ್ ಫೌಂಡೇಷನ್ ಪದಾಧಿಕಾರಿಗಳು ಮುಖ್ಯ ಅತಿಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು. ವಿಶೇಷವಾಗಿ ಅಲಂಕೃತಗೊAಡಿದ್ದ ತೆರೆದ ಜೀಪ್‌ನಲ್ಲಿ ಮುಖ್ಯ ಅತಿಥಿಗಳನ್ನು ಕೂರಿಸಿ, ಅಂಬೇಡ್ಕರ್ ಕ್ರೀಡಾಂಗಣದ ಸುತ್ತ ಭವ್ಯ ಮೆರವಣಿಗೆ ನಡೆಸಲಾಯಿತು. ಈ ಮೆರವಣಿಗೆಯಲ್ಲಿ ಜಾನಪದ ಕಲಾವಿದರು, ಫೌಂಡೇಷನ್ ಪದಾಧಿಕಾರಿಗಳು, ಕ್ರೀಡಾಪಟುಗಳು, ವಿದ್ಯಾರ್ಥಿಗಳು ಹಾಗೂ ವಾಯುವಿಹಾರಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.ಸಾಂಸ್ಕೃ ತಿಕ ಕಾರ್ಯಕ್ರಮದ ಭಾಗವಾಗಿ ಪದಾಧಿಕಾರಿಗಳು ದೇಶಭಕ್ತಿ ಗೀತೆಗಳು ಮತ್ತು ನಾಡಗೀತೆಗಳನ್ನು ಹಾಡಿ ನೆರೆದಿದ್ದವರಲ್ಲಿ ಕನ್ನಡಾಭಿಮಾನ ಬಡಿದೆಬ್ಬಿಸಿದರು. ಯುನಿಟಿ ಡ್ಯಾನ್ಸ್ ಕಂಪನಿ ಮಕ್ಕಳ ಆಕರ್ಷಕ ನೃತ್ಯ ಪ್ರದರ್ಶನ ಹಾಗೂ ಕಂಸಾಳೆ ಮಂಜು ಮತ್ತು ತಂಡ, ಗೊರವ ಶಶಿ ಮತ್ತು ತಂಡ, ಯಕ್ಷಗಾನ ಜಾನಪದ ಕಲಾ ತಂಡಗಳ ಪ್ರದರ್ಶನಗಳು ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿದವು.ಕಾರ್ಯಕ್ರಮದಲ್ಲಿ ವಿಜಯ್ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷರಾದ ವಿಜಯಕುಮಾರ್, ಕನ್ನಡ ಜಾನಪದ ಪರಿಷತ್ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಧ್ಯಕ್ಷರಾದ ರ. ನರಸಿಂಹಮೂರ್ತಿ, ಕನ್ನಡ ಜಾನಪದ ಪರಿಷತ್ ವಿಜಯನಗರ ವಿಧಾನಸಭಾ ಕ್ಷೇತ್ರದ ಮಹಿಳಾ ಘಟಕದ ಅಧ್ಯಕ್ಷೆ ಸೌಮ್ಯ ಜಯಪ್ರಕಾಶ್, ವಿಜಯ್ ಫೌಂಡೇಷನ್ ಪ್ರಧಾನ ಕಾರ್ಯದರ್ಶಿ ತಿರುಮಲೇ ಗೌಡರು, ಸ್ಕಂದ ಸ್ಪೆಷಾಲಿಟಿ ಆಸ್ಪತ್ರೆಯ ವೈದ್ಯರಾದ ಡಾ. ದೀಪಕ್, ಮಹಾರಾಜ ಟೆಂಟ್ ಹೌಸ್ ಮಾಲೀಕರಾದ ಪುಷ್ಪ ಬಾಯಿ, ರಂಜಿತ್, ಡಾ. ಸತ್ಯವತಿ ಸೇರಿದಂತೆ ಹಲವು ಗಣ್ಯರು, ವಿಜಯ್ ಫೌಂಡೇಷನ್ ಪದಾಧಿಕಾರಿಗಳು ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ಎಲ್ಲಾ ಅತಿಥಿಗಳಿಗೆ, ಕಲಾತಂಡಗಳ ಕಲಾವಿದರಿಗೆ, ಯುನಿಟಿ ಡ್ಯಾನ್ಸ್ ಕಂಪೆನಿ ಮಕ್ಕಳಿಗೆ ಹಾಗೂ ಸ್ಕೇಟಿಂಗ್ ಕ್ರೀಡೆಯಲ್ಲಿ ಅಪ್ರತಿಮ ಸಾಧನೆ ಮಾಡಿದ ಕ್ರೀಡಾ ಪ್ರತಿಭೆಗಳಿಗೆ ಸನ್ಮಾನಿಸಿ ಗೌರವಿಸಲಾಯಿತು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST