LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban

77ನೇ ಗಣರಾಜ್ಯೋತ್ಸವ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ರಾಜ್ಯಪಾಲ ಥಾವರ್ ಚಂದ್ಗೆಹ್ಲೋಟ್

 

ಬೆಂಗಳೂರು: ರಾಜ್ಯದಲ್ಲಿ 77ನೇ ಗಣರಾಜ್ಯೋತ್ಸವದ ಸಂಭ್ರಮ ಜೋರಾಗಿದ್ದು, ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಧ್ವಜಾರೋಹಣ ನೆರವೇರಿಸಿದ್ದಾರೆ.

ಜನತೆಯನ್ನುದ್ದೇಶಿಸಿ ಮಾತನಾಡಿದ ರಾಜ್ಯಪಾಲರು, 77ನೇ ಗಣರಾಜ್ಯೋತ್ಸವದ ಈ ವಿಶೇಷ ಸಂದರ್ಭದಲ್ಲಿ ಕರ್ನಾಟಕದ ಜನತೆಗೆ ನನ್ನ ಹೃತ್ಪೂರ್ವಕ ಶುಭಾಶಯಗಳನ್ನು ಕೋರುತ್ತೇನೆ. ಜನವರಿ 26ನೇ ತಾರೀಖು ಭಾರತದ ಚರಿತ್ರೆಯಲ್ಲಿ ಒಂದು ಅತ್ಯಂತ ನಿರ್ಣಾಯಕ ದಿನ. ಇದು ಸಾವಿರಾರು ವರ್ಷಗಳಿಂದ ರೂಪುಗೊಂಡಿದ್ದ ರಾಜಪ್ರಭುತ್ವ ಹಾಗೂ 17ನೇ ಶತಮಾನದಿಂದ ಅಸ್ತಿತ್ವಕ್ಕೆ ಬಂದಿದ್ದ ವಸಾಹತುಶಾಹಿ ಆಡಳಿತವನ್ನು ಕೊನೆಗೊಳಿಸಿ ಜನಪ್ರಭುತ್ವವನ್ನು ಪ್ರತಿಷ್ಠಾಪಿಸಿಕೊಂಡ ದಿನ.

ತಾರತಮ್ಯವನ್ನು ಆಧರಿಸಿದ್ದ ವಸಾಹತುಶಾಹಿಯನ್ನು ಹಾಗೂ ಪುರಾತನ ಕಾನೂನುಗಳನ್ನು ಕಿತ್ತೆಸೆದು ಸಾಮಾಜಿಕ, ಆರ್ಥಿಕ, ರಾಜಕೀಯ ನ್ಯಾಯದ ವಿಚಾರದಲ್ಲಿ ಎಲ್ಲರೂ ಸಮಾನರು ಎನ್ನುವ ನವ ಭಾರತದ ಪರಿಕಲ್ಪನೆಯ ಸಂವಿಧಾನವನ್ನು ಜಾರಿಗೊಳಿಸಿದ ದಿನ. ಗಣತಂತ್ರ ವ್ಯವಸ್ಥೆಯನ್ನು ರೂಪುಗೊಳಿಸಿಕೊಳ್ಳುವುದಕ್ಕಾಗಿ ಅಸಂಖ್ಯಾತ ಜನರು ತ್ಯಾಗ-ಬಲಿದಾನಗಳನ್ನು ಮಾಡಿದ್ದಾರೆ. ಅವರೆಲ್ಲರನ್ನೂ ಈ ಅಮೃತ ಗಳಿಗೆಯಲ್ಲಿ ಗೌರವಪೂರ್ವಕವಾಗಿ ಸ್ಮರಿಸೋಣ ಎಂದು ಹೇಳಿದರು.

ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಶತಶತಮಾನಗಳ ಕಾಲ ಹೋರಾಟ ಮಾಡಿ ನ್ಯಾಯ ಹಾಗೂ ಸ್ವಾತಂತ್ರ್ಯವನ್ನು ದಕ್ಕಿಸಿಕೊಟ್ಟಿದ್ದಾರೆ. ನಾವೆಲ್ಲರೂ ನಮ್ಮ ಹಿರಿಯರ ಶ್ರಮ ವ್ಯರ್ಥವಾಗದಂತೆ ಕಾಪಾಡಿಕೊಳ್ಳುವ ಪ್ರತಿಜ್ಞೆ ಮಾಡೋಣ. ಬಾಬಾ ಸಾಹೇಬ್ ಅಂಬೇಡ್ಕರ್‌ ಅವರು ಸ್ವಾತಂತ್ರ್ಯವನ್ನು, ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಸ್ವಾತಂತ್ರ್ಯವೆಂದು ಮೂರು ಮಾದರಿಗಳಲ್ಲಿ ವ್ಯಾಖ್ಯಾನಿಸಿದ್ದಾರೆ. “ನಾವು ಯಾವುದೇ ಕಾರಣಕ್ಕೂ ರಾಜಕೀಯ ಪ್ರಜಾಪ್ರಭುತ್ವದಿಂದ ಸಂತುಷ್ಟಗೊಳ್ಳಬಾರದು. ನಾವು ನಮ್ಮ ರಾಜಕೀಯ ಪ್ರಜಾಪ್ರಭುತ್ವವನ್ನು ಸಾಮಾಜಿಕ ಪ್ರಜಾಪ್ರಭುತ್ವವಾಗಿಸಬೇಕು. ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬದುಕಿನ ಸಿದ್ಧಾಂತವಾಗಿ ಗುರುತಿಸಿಕೊಂಡ ಒಂದು ಜೀವನ ಕ್ರಮವಾಗಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು