LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ನ್ಯೂಝಿಲೆಂಡ್ ಟಿ20 ತಂಡದಿಂದ 8 ಆಟಗಾರರು ಔಟ್!

ಟಿ20 ವಿಶ್ವಕಪ್ ಫೈನಲ್ ಸೋಲಿನ ಬಳಿಕ ನ್ಯೂಝಿಲೆಂಡ್ ತಂಡ ಟಿ20 ಸರಣಿಗಾಗಿ ಸಜ್ಜಾಗಿದೆ. ಸೌತ್ ಆಫ್ರಿಕಾ ವಿರುದ್ಧದ ಸರಣಿಗಾಗಿ ನ್ಯೂಝಿಲೆಂಡ್ ತಂಡವನ್ನು ಪ್ರಕಟಿಸಲಾಗಿದ್ದು, ಈ ತಂಡದಲ್ಲಿ ಪ್ರಮುಖ ಆಟಗಾರರು ಕಾಣಿಸಿಕೊಂಡಿಲ್ಲ ಎಂಬುದು ವಿಶೇಷ. ಅಂದರೆ ವಿಶ್ವಕಪ್?ನಲ್ಲಿ ಕಣಕ್ಕಿಳಿದಿದ್ದ 8 ಆಟಗಾರರು ಈ ಸರಣಿಯಿಂದ ಹೊರಗುಳಿದಿದ್ದಾರೆ.
ಇನ್ನು ನಾಯಕ ಮಿಚೆಲ್ ಸ್ಯಾಂಟ್ನರ್ ಮೂರು ಪಂದ್ಯಗಳಲ್ಲಿ ಮಾತ್ರ ಕಣಕ್ಕಿಳಿಯಲಿದ್ದಾರೆ. ಇನ್ನುಳಿದ ಎರಡು ಮ್ಯಾಚ್‌ಗಳಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಟಾಮ್ ಲ್ಯಾಥಮ್ ತಂಡವನ್ನು ಮುನ್ನಡೆಸಲಿದ್ದಾರೆ. ಹಾಗೆಯೇ ಮೂವರು ಹೊಸ ಆಟಗಾರರಿಗೆ ಅವಕಾಶ ನೀಡಲಾಗಿದೆ. ಅದರಂತೆ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ನ್ಯೂಝಿಲೆಂಡ್ ತಂಡ ಈ ಕೆಳಗಿನಂತಿದೆ
ಮಿಚೆಲ್ ಸ್ಯಾಂಟ್ನರ್ (ನಾಯಕ), ಕ್ಯಾಟೀನ್ ಕ್ಲಾರ್ಕ್, ಜೋಶ್ ಕ್ಲಾರ್ಕ್ಸನ್, ಡೇನ್ ಕ್ಲೀವರ್ (ವಿಕೆಟ್ ಕೀಪರ್), ಡೆವೊನ್ ಕಾನ್ವೇ (ವಿಕೆಟ್ ಕೀಪರ್), ಲಾಕಿ ಫರ್ಗುಸನ್, ಜ್ಯಾಕ್ ಫೌಲ್ಕ್ಸ್, ಬೆವೊನ್ ಜೇಕಬ್ಸ್, ಕೈಲ್ ಜೇಮಿಸನ್, ನಿಕ್ ಕೆಲ್ಲಿ, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಜೇಡೆನ್ ಲೆನಾಕ್ಸ್, ಕೋಲ್ ಮೆಕ್‌ಕೊನಿ, ಜಿಮ್ಮಿ ನೀಶಮ್, ಟಿಮ್ ರಾಬಿನ್ಸನ್, ಬೆನ್ ಸಿಯರ್ಸ್, ನಾಥನ್ ಸ್ಮಿತ್, ಇಶ್ ಸೋಧಿ.
ಅಲಭ್ಯರಾಗಿರುವ ಆಟಗಾರರು: ಫಿನ್ ಅಲೆನ್, ರಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಡೇರಿಲ್ ಮಿಚೆಲ್, ಮಾರ್ಕ್ ಚಾಪ್ಮನ್, ಟಿಮ್ ಸೈಫರ್ಟ್, ಜೇಕಬ್ ಡಫಿ, ಮ್ಯಾಟ್ ಹೆನ್ರಿ
5 ಪಂದ್ಯಗಳ ಸರಣಿ:
ನ್ಯೂಝಿಲೆಂಡ್ ಮತ್ತು ಸೌತ್ ಆಫ್ರಿಕಾ ನಡುವೆ 5 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ನ್ಯೂಝಿಲೆಂಡ್‌ನಲ್ಲಿ ನಡೆಯಲಿರುವ ಈ ಸರಣಿಯು ಮಾರ್ಚ್ 15 ರಿಂದ ಶುರುವಾಗಲಿದೆ. ಇನ್ನು ಈ ಸರಣಿಯ ಕೊನೆಯ ಮ್ಯಾಚ್ ಮಾರ್ಚ್ 25 ರಂದು ನಡೆಯಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು