LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

80ರ ದಶಕದ ಫೋಟೋ ಎಡಿಟಿಂಗ್

ಟ್ರೆಂಡ್ ಗೀಳಿಗೆ ಬೀಳದಂತೆ ಪೊಲೀಸರಿಂದ ಎಚ್ಚರಿಕೆ



ನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ಟ್ರೆಂಡ್ ಆಗುತ್ತಿರುವ 80ರ ದಶಕದ ಫೋಟೋ ಎಡಿಟಿಂಗ್ ಕುರಿತು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಮಾದನಾಯಕನಹಳ್ಳಿ ಪೊಲೀಸರು ಸೂಚಿಸಿದ್ದಾರೆ.ಫೋಟೋ ಎಡಿಟಿಂಗ್ ಹೆಸರಿನಲ್ಲಿ ಸೈಬರ್ ವಂಚಕರು ಸಾರ್ವಜನಿಕರನ್ನ ವಂಚಿಸುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದ ಇರುವಂತೆ ಪೊಲೀಸರು ಜನಜಾಗೃತಿ ಮೂಡಿಸಿದ್ದಾರೆ. 80ರ ದಶಕದ ಫೋಟೋಗಳ ಮಾದರಿಯಲ್ಲಿ ತಮ್ಮ ಫೋಟೋಗಳನ್ನ ಎಡಿಟ್ ಮಾಡಿಸಿಕೊಳ್ಳಲು ಸಾರ್ವಜನಿಕರು ವಿವಿಧ ಆ್ಯಪ್‌ಗಳು ಹಾಗೂ ಆನ್‌ಲೈನ್ ಲಿಂಕ್‌ಗಳನ್ನು ಬಳಸುತ್ತಿದ್ದಾರೆ. ಆದರೆ, ಇಂತಹ ಸಂದರ್ಭದಲ್ಲಿ ಅಪರಿಚಿತ ಆ್ಯಪ್‌ಗಳನ್ನು ಡೌನ್‌ಲೋಡ್ ಮಾಡುವುದು ಅಥವಾ ಅನುಮಾನಾಸ್ಪದ ಲಿಂಕ್‌ಗಳನ್ನು ತೆರೆಯುವುದರಿಂದ ಸೈಬರ್ ವಂಚನೆಗೆ ಒಳಗಾಗುವ ಸಾಧ್ಯತೆ ಇದೆ ಎಂದು ಪೊಲೀಸರು ಎಚ್ಚರಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST