LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಹಜ್ ಯಾತ್ರೆಯಲ್ಲಿ 90 ಭಾರತೀಯರು ಸಾವು

ಬೆಂಗಳೂರು / ಜೆರುಸಲೇಂ: ಮುಸ್ಲಿಮರ ಪವಿತ್ರ ಹಜ್ ಯಾತ್ರೆ ವೇಳೆ ಮೆಕ್ಕಾದಲ್ಲಿ ದಾಖಲಾದ 51.8 ಡಿಗ್ರಿ ಸೆಲ್ಸಿಯಸ್ ತಾಪಮಾನದಿಂದ ಮೃತಪಟ್ಟ 645 ಹಜ್ ಯಾತ್ರಾರ್ತಿಗಳ ಪೈಕಿ 90 ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ.

ಇದರಲ್ಲಿ ಬೆಂಗಳೂರಿನ ಇಬ್ಬರು ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಮೃತರು ಬಕ್ರೀದ್ ಹಬ್ಬದ ಹಿನ್ನೆಲೆ ಹಜ್ ಯಾತ್ರೆ ಕೈಗೊಂಡಿದ್ದರು.
ಮೆಕ್ಕಾಗಿಂತ 8 ಕಿಲೋಮೀಟರ್ ದೂರದ ಮೀನಾ ನಗರದಲ್ಲಿ ಬೆಂಗಳೂರಿನ ಇಬ್ಬರು ಯಾತ್ರಿಕರು ಸಾವನ್ನಪ್ಪಿದ್ದಾರೆ. ಮೃತರನ್ನು ಆರ್.ಟಿ ನಗರದ ಕೌಸರ್ ರುಕ್ಸಾನ (69) ಮತ್ತು ಫ್ರೆಝರ್ ಟೌನ್‍ನ ಮೊಹಮ್ಮದ್ ಇಲಿಯಾಸ್ (50) ಎಂದು ಗುರುತಿಸಲಾಗಿದೆ.

ಮೆಕ್ಕಾದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿದ್ದು, ಕರ್ನಾಟಕದ ಉಳಿದ ಯಾತ್ರಿಕರು ಸುರಕ್ಷಿತವಾಗಿದ್ದಾರೆ ಎಂದು ಹಜ್ ಕಮಿಟಿ ಕಾರ್ಯನಿರ್ವಾಹಕ ಅಧಿಕಾರಿ ಸರ್ಫರಾಜ್ ಖಾನ್ ಮಾಹಿತಿ ನೀಡಿದ್ದಾರೆ.ಈ ಬಾರಿ ಕರ್ನಾಟಕದಿಂದ 10,300 ಮಂದಿ ಹಜ್ ಯಾತ್ರೆಗೆ ತೆರಳಿದ್ದರು. ಇವರೊಂದಿಗೆ ರುಕ್ಸಾನ ಸಹ ತಮ್ಮ ಕುಟುಂಬದ ಜೊತೆಗೆ ಹಜ್ ಯಾತ್ರೆಗೆ ತೆರಳಿದ್ದರು ಎಂದು ಸರ್ಫರಾಜ್ ಖಾನ್ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು