LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Local News

92 ವಸಂತ ತುಂಬಿದ ಸತ್ಯನಾರಾಯಣ ನಾಡಿಗ್ ಅವರಿಗೆ ಕೆಯುಡಬ್ಲೂಜೆ ಅಭಿನಂದನೆ ಸಮಾಜಮುಖಿ ಚಿಂತನೆಯಿಂದ ಪತ್ರಕರ್ತರು ದೂರ: ನಾಡಿಗ್ ವಿಷಾದ

ಬೆಂಗಳೂರು: ಇಂದಿನ ಪತ್ರಕರ್ತರ ಸಮೂಹ ಸಮಾಜಮುಖಿ ಚಿಂತನೆಯಿಂದ ದೂರ ಸರಿಯುತ್ತಿರುವುದರ ಬಗ್ಗೆ 92 ವರ್ಷದ ತುಂಬು ಜೀವನ ನಡೆಸುತ್ತಿರುವ ಹಿರಿಯ ಪತ್ರಕರ್ತ ಸಂತೇಬೆನ್ನೂರಿನ ಸತ್ಯನಾರಾಯಣ ನಾಡಿಗ್ ಕಳವಳ ವ್ಯಕ್ತಪಡಿಸಿದರು.ಹಿರಿಯ ಪತ್ರಕರ್ತರಿಗೆ ಅವರ ಮನೆಯ ಅಂಗಳದಲ್ಲಿ ಮನತುಂಬಿ ನಮನ ಸಲ್ಲಿಸುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ)ದ ಕಾರ್ಯಕ್ರಮದಲ್ಲಿ ತಮಗೆ ನೀಡಿದ ಆತ್ಮೀಯ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡಿದರು.

ಹಿಂದಿನ ತಲೆಮಾರಿನ ಪತ್ರಕರ್ತರು ತಮ್ಮ ಸ್ವಂತ ಹಿತಾಸಕ್ತಿಯನ್ನು ಮರೆತು ಸಮಾಜದ ಉದ್ಧಾರವೇ ಪತ್ರಕರ್ತರ ಕರ್ತವ್ಯ ಎಂದು ಭಾವಿಸಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಇತೀಚೆಗೆ ಬಹುತೇಕ ಕಡೆ ಆಸಕ್ತಿಗಳೇ ಬೇರೆ ಆಗಿದ್ದು, ಸ್ವಯಂ ಉದ್ದಾರವೇ ವಿಜೃಂಭಿಸುತ್ತಿರುವುದು ದುರದೃಷ್ಟಕರ ಬೆಳವಣಿಗೆ. ಈ ಬಗ್ಗೆ ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದರು.
ತಾವು ಜನವಾಣಿ ಪತ್ರಿಕೆಯಿಂದ ಆರಂಭಿಸಿದ ವೃತ್ತಿ ದಿನಗಳನ್ನು ನೆನಪಿಸಿಕೊಂಡರು. ತಾವು ಕೆಲಸ ಮಾಡಿದ ತಾಯಿ ನಾಡು ಪತ್ರಿಕೆಯ ಜನಮುಖಿ ಪತ್ರಿಕೋದ್ಯಮವನ್ನು ಸ್ಮರಿಸಿದರು.

ಗ್ರಾಮೀಣ ಭಾಗದ ಪತ್ರಕರ್ತರು ಅನುಭವಿಸುವ ವೃತ್ತಿ ಸಂಕಷ್ಛಗಳನ್ನು ತೆರೆದಿಟ್ಟು ಆಗಿನ ಕಾಲದಲಲ್ಲಿ ತಾಲ್ಲೂಕ ಮಟ್ಟದಲ್ಲಿ ತಾವು ಕಾರ್ಯ ನಿರತ ಪತ್ರಕರ್ತರ ಸಂಘಟನೆಯನ್ನು ಮಾಡಿದ್ದನ್ನು ನೆನಪಿಸಿಕೊಂಡರು. ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ಕಾರ್ಯನಿರತ ಪತ್ರಕರ್ತರ ಸಂಘ ಪತ್ರಕರ್ತರ ಕಲ್ಯಾಣಕ್ಕಾಗಿ ಕೈಗೊಂಡ ಕ್ರಮಗಳನ್ನು ಶ್ಲಾಘಿಸಿದರು.ಹಿರಿಯ ಪತ್ರಕರ್ತರ ಮಾಸಾಶನ ಸಕಾಲಕ್ಕೆ ಬಿಡುಗಡೆಯಾಗದೆ ಸಂಕಷ್ಟದ ಎದುರಾದಾಗ ಸಂಘ ಸ್ಪಂದಿಸಿ ಮಾಸಾಶನ ಬಿಡುಗಡೆಯಾಗುವಂತೆ ಮಾಡುವಲ್ಲಿ ನೀಡಿದ ಸಹಕಾರವನ್ನು ಸ್ಮರಿಸಿದರು.

ಇದೇ ಸಂದರ್ಭದಲ್ಲಿ ಸಂಘದ ಗೌರವ ಸ್ವೀಕರಿಸಿದ ಸತ್ಯನಾರಾಯಣ ನಾಡಿಗರ ಪುತ್ರ, ಹಿರಿಯ ಪತ್ರಕರ್ತ ಶ್ರೀವತ್ಸ ನಾಡಿಗ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಪತ್ರಕರ್ತರ ಸಂಘ ಸಕ್ರಿಯಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಯಾರು ಗಮನಿಸಿದ ಪತ್ರಕರ್ತರನ್ನು ಸಂಘ ಗುರುತಿಸುತ್ತಿರುವುದು ಹೆಮ್ಮೆಯ ಸಂಗತಿ ಎಂದರು. ಹೊರ ಜಗತ್ತಿಗೆ ಹೆಚ್ಚಾಗಿ ಪರಿಚಯವಾಗದೆ ಡೆಸ್ಕ್‍ನಲ್ಲಿ ಕಾರ್ಯ ನಿರ್ವಹಿಸಿ ಪತ್ರಿಕೋದ್ಯಮಕ್ಕೆ ತಮ್ಮದೆ ಕಾಣಿಕೆ ನೀಡುತ್ತಿರುವ ತೆರೆ ಮರೆಯ ಪತ್ರಕರ್ತರನ್ನು ಸಂಘ ಗುರುತಿಸಲಿ ಎಂದು ಆಶಿಸಿದರು.

ಐದು ದಶಕಗಳ ಸೇವೆ: ಕೆಯುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಮಾತನಾಡಿ, ಹಿರಿಯ ಪತ್ರಕರ್ತರನ್ನು ಸಂಘ ಗುರುತಿಸಿ ಮನೆಯಂಗಳದಲ್ಲೇ ಸನ್ಮಾನಿಸುತ್ತಿದೆ. ನಾಡಿಗ್ ಅವರು, ಜನವಾಣಿ ಮತ್ತು ತಾಯಿನಾಡು ಪತ್ರಿಕೆಯಿಂದ ಮೊದಲಗೊಂಡು, ಸಂಯುಕ್ತ ಕರ್ನಾಟಕ, ಕನ್ನಡಪ್ರಭ, ಪ್ರಜಾವಾಣಿ, ನಗರವಾಣಿ, ನಾವಿಕ ಸೇರಿದಂತೆ ಹಲವು ಪತ್ರಿಕೆಯಲ್ಲಿ ಕೆಲಸ ಮಾಡುವ ಮೂಲಕ ಐದು ದಶಕಗಳ ಕಾಲ ಪತ್ರಿಕೋದ್ಯಮಕ್ಕೆ ಸಲ್ಲಿಸಿರುವ ವಿಶೇಷ ಸೇವೆ ಸ್ಮರಿಸಿ ಕೆಯುಡಬ್ಲೂಜೆ ಅಭಿನಂದಿಸುತ್ತಿದೆ ಎಂದರು.

ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟದ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ ಅವರು ಮಾತನಾಡಿ ತಮ್ಮ ವೃತ್ತಿಜೀವನದಿಂದ ನಿವೃತ್ತರಾಗಿರುವ ಅನೇಕ ಹಿರಿಯ ಪತ್ರಕರ್ತ ರನ್ನು ಗುರುತಿಸಿ ಸನ್ಮಾನಿಸುವ ಕೆಲಸವನ್ನು ಸಂಘ ನಿರಂತರವಾಗಿ ಮಾಡಿಕೊಂಡು ಬರುತ್ತಿದೆ ಎಂದರು. ಜೊತೆಗೆ ಸತ್ಯನಾರಾಯಣ ನಾಡಿಗರ ಜೊತೆಗಿನ ತಮ್ಮ ಒಡನಾಟವನ್ನು ಜ್ಞಾಪಿಸಿಕೊಂಡರಲ್ಲದೆ ನಾಡಿಗರ ಶೈಕ್ಷಣಿಕ ಸೇವೆಯನ್ನು ಸಹ ಕೊಂಡಾಡಿದರು.ಕೆಯುಡಬ್ಲೂಜೆ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ್ ಸ್ವಾಗತಿಸಿದರು. ಖಜಾಂಚಿ ವಾಸುದೇವ ಹೊಳ್ಳ ವಂದಿಸಿದರು. ಕರ್ನಾಟಕ ರಾಜ್ಯ ಪತ್ರಿಕಾ ಛಾಯಾಗ್ರಾಹಕರ ಸಂಘದ ಪ್ರಧಾನ ಕಾರ್ಯದರ್ಶಿ ಶರಣು ಬಸಪ್ಪ, ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಅಧ್ಯಕ್ಷ ಕೆ.ಶಂಭುಲಿಂಗ ಮತ್ತಿತರರು ಹಾಜರಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು