LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

95 ನಿಮಿಷಗಳ ಥ್ರಿಲ್ಲರ್ `ಪ್ರಕರಣ ತನಿಖಾ ಹಂತದಲ್ಲಿದೆ' ಚಿತ್ರ ಈ ವಾರ ತೆರೆಗೆ..!

ಶೀರ್ಷಿಕೆಯ ಕಾರಣದಿಂದ ಆರಂಭಿಕವಾಗಿ ಗಮನ ಸೆಳೆದಿದ್ದ ಚಿತ್ರ `ಪ್ರಕರಣ ತನಿಖಾ ಹಂತದಲ್ಲಿದೆ'. ಸುಂದರ್ ಎಸ್ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾದ ಟ್ರೈಲರ್ ಪ್ರೇಕ್ಷಕರನ್ನು ಸೆಳೆದುಕೊಂಡಿತ್ತು. ಈ ಮೂಲಕವೇ ಭಿನ್ನ ಕಥಾನಕದ ಸುಳಿವು ಬಿಟ್ಟು ಕೊಟ್ಟಿದ್ದ `ಪ್ರಕರಣ ತನಿಖಾ ಹಂತದಲ್ಲಿದೆ' ಸಿನಿಮಾ ಈ ವಾರ ಅಂದರೆ, ಅಕ್ಟೋಬರ್ 18ರಂದು ರಾಜ್ಯಾದ್ಯಂತ ಬಿಡುಗಡೆಗೊಳ್ಳಲಿದೆ.

ಶೀರ್ಷಿಕೆ ಕೇಳಿದಾಕ್ಷಣವೇ ಒಟ್ಟಾರೆ ಕಥೆಯ ಬಗ್ಗೆ ಒಂದು ಕಲ್ಪನೆ ಮೂಡಿಸಿಕೊಂಡಿದ್ದ ಪ್ರೇಕ್ಷಕರನ್ನೆಲ್ಲ ಟ್ರೈಲರ್ ಅಚ್ಚರಿಗೀಡುಮಾಡಿತ್ತು. ಹಾಗೆ ಮೂಡಿಕೊಂಡಿದ್ದ ನಿರೀಕ್ಷೆಗಳ ನಡುವೆ ಈ 95 ನಿಮಿಷಗಳ ವಿಶಿಷ್ಟ ಥ್ರಿಲ್ಲರ್ ತೆರೆಗಾಣಲು ದಿನಗಣನೆ ಶುರುವಾಗಿದೆ.ವಿಶೇಷವೆಂದರೆ, ರಂಗಭೂಮಿಯಲ್ಲಿ ಹತ್ತಾರು ವರ್ಷಗಳಿಂದ ಪಳಗಿಕೊಂಡಿದ್ದವರೆಲ್ಲ ಸೇರಿ ಈ ಚಿತ್ರವನ್ನು ರೂಪಿಸಿದ್ದಾರೆ.

ರಂಗಭೂಮಿಯ ವಾತಾವರಣದಲ್ಲಿಯೇ ಜೀವ ಪಡೆದಿದ್ದ ಈ ಚಿತ್ರವನ್ನು ಚಿಂತನ್ ಕಂಬಣ್ಣ ನಿರ್ಮಾಣ ಮಾಡಿದ್ದಾರೆ. ಹೊಸತೇನನ್ನೋ ಸೃಷ್ಟಿಸಬೇಕೆಂಬ ತುಡಿತದೊಂದಿಗೆ ತಯಾರಾಗಿರುವ ಈ ಚಿತ್ರ ಈಗಾಗಲೇ ಟೈಟಲ್ ಟ್ರ್ಯಾಕ್, ಪೋಸ್ಟರ್, ಟ್ರೈಲರ್ ಮುಂತಾದವುಗಳ ಮೂಲಕ ಪ್ರೇಕ್ಷಕರನ್ನು ಸೆಳೆದುಕೊಂಡಿದೆ. ಶೀರ್ಷಿಕೆಯೇ ಇದೊಂದು ಕ್ರೈಂ ಜಾನರಿನ ಚಿತ್ರವೆಂಬಂತೆ ಸೂಚಿಸುವುದು ಸತ್ಯ. ಆದರೆ, ಅದೆಲ್ಲದರಾಚೆಗಿನ ಬೆರಗುಗಳನ್ನು 95ನಿಮಿಷಗಳ ಈ ಥ್ರಿಲ್ಲರ್ ಸಿನಿಮಾ ಬಚ್ಚಿಟ್ಟುಕೊಂಡಿದೆ ಎಂಬ ಭರವಸೆ ಚಿತ್ರ ತಂಡದಲ್ಲಿದೆ.

ಕರದಾಯಾಮ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ಈ ಚಿತ್ರ ನಿರ್ಮಾಣಗೊಂಡಿದೆ. ಮಹೀನ್ ಕುಬೇರ್ ಮುಖ್ಯಪಾತ್ರವನ್ನು ನಿರ್ವಹಿಸಿದ್ದಾರೆ. ಇನ್ನುಳಿದಂತೆ, ಮುತ್ತುರಾಜ್.ಟಿ, ರಾಜ್ ಗಗನ್, ಚಿಂತನ್ ಕಂಬಣ್ಣ ಮುಂತಾದವರ ತಾರಾಗಣವಿದೆ. ಮೋಹನ್ ಎಂ.ಎಸ್ ಮತ್ತು ಜಗದೀಶ್ ಆರ್.ಜೆ ಛಾಯಾಗ್ರಹಣ, ಶಿವೋಂ ಸಂಗೀತ ನಿರ್ದೇಶನ ಮತ್ತು ನಾನಿಕೃಷ್ಣ ಸಂಕಲನ ಈ ಚಿತ್ರಕ್ಕಿದೆ. ವಿ ಎಫ್ ಎಕ್ಸ್ ಜವಾಬ್ದಾರಿಯನ್ನು ಲಕ್ಷ್ಮೀಪತಿ ಎಂ.ಕೆ ನಿಭಾಯಿಸಿದ್ದಾರೆ. ಬೆಂಗಳೂರು, ಕನಕಪುರ ಮುಂತಾದೆಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ತನಿಖಾ ಹಂತದಲ್ಲಿರುವ ಪ್ರಕರಣ ಈ ವಾರವೇ ಪ್ರೇಕ್ಷಕರೆದುರು ತೆರೆದುಕೊಳ್ಳಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು