LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಬಿರುಸಿನ ಮತದಾನ 10 ರಾಜ್ಯಗಳ 96 ಲೋಕಸಭೆ ಕ್ಷೇತ್ರ ಆಂಧ್ರ, ಒಡಿಸ್ಸಾ ವಿಧಾನಸಭೆ ಚುನಾವಣೆ

ನವದೆಹಲಿ: ಲೋಕಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನ ಪ್ರಕ್ರಿಯೆ ಮುಂದುವರೆದಿದ್ದು, ಸೋಮವಾರ 12 ಗಂಟೆ ವೇಳೆಗೆ ಸರಾಸರಿ ಶೇ. 30ರಷ್ಟು ಮತದಾನವಾಗಿದೆ.10 ರಾಜ್ಯಗಳ 96 ಲೋಕಸಭಾ ಕ್ಷೇತ್ರ, ಆಂಧ್ರಪ್ರದೇಶ ವಿಧಾನಸಭೆಯ ಎಲ್ಲಾ 175 ಕ್ಷೇತ್ರ ಮತ್ತು ಒಡಿಶಾ ವಿಧಾನಸಭೆಯ 28 ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಮಹಾರಾಷ್ಟ್ರ, ಒಡಿಶಾ, ತೆಲಂಗಾಣ, ಉತ್ತರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ಪ್ರಕ್ರಿಯೆ ಪ್ರಗತಿಯಲ್ಲಿದೆ.ಇದರೊಂದಿಗೆ ಅತೀ ಹೆಚ್ಚು ಮತದಾನ ಪಶ್ಚಿಮ ಬಂಗಾಳದಲ್ಲಿ (ಶೇ.15.24) ನಡೆದಿದ್ದು, ಕಡಿಮೆ ಮತದಾನ ಶೇ.5.07ರೊಂದಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ದಾಖಲಾಗಿದೆ.

ಈ ನಡುವೆ ಪ್ರಧಾನಮತ್ರಿ ನರೇಂದ್ರ ಮೋದಿ ಅವರು ಮತದಾನ  ಪ್ರೋತ್ಸಾಹಿಸಿ ಎಕ್ಸ್ ಪೋಸ್ಟ್ ಹಾಕಿದ್ದು, ಮತ ಚಲಾಯಿಸಿ, ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿ ಎದು ಹೇಳಿದ್ದಾರೆ.ಲೋಕಸಭಾ ಚುನಾವಣೆಯ ಇಂದಿನ 4ನೇ ಹಂತದಲ್ಲಿ, 10 ರಾಜ್ಯಗಳು ಮತ್ತು ಯುಟಿಗಳಲ್ಲಿ 96 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ.

ಈ ಕ್ಷೇತ್ರಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸುತ್ತಾರೆ; ಯುವ ಮತದಾರರು ಹಾಗೂ ಮಹಿಳಾ ಮತದಾರರು ಮತದಾನಕ್ಕೆ ಶಕ್ತಿ ತುಂಬಲಿದ್ದಾರೆ ಎಂದು ನನಗೆ ಖಾತ್ರಿಯಿದೆ. ಬನ್ನಿ, ನಾವೆಲ್ಲರೂ ನಮ್ಮ ಕರ್ತವ್ಯವನ್ನು ಮಾಡೋಣ ಮತ್ತು ನಮ್ಮ ಪ್ರಜಾಪ್ರಭುತ್ವವನ್ನು ಬಲಪಡಿಸೋಣ ಎಂದಿದ್ದಾರೆ.
ಚಿತ್ತೂರು ಜಿಲ್ಲೆಯಲ್ಲಿ ಅಪಹರಣಕ್ಕೊಳಗಾಗಿದ್ದ ಟಿಡಿಪಿಯ ಮೂವರು ಮತಗಟ್ಟೆ ಏಜೆಂಟರನ್ನು ಪತ್ತೆ ಹಚ್ಚಿ, ರಕ್ಷಿಸಲಾಗಿದೆ ಎಂದು ಆಂಧ್ರಪ್ರದೇಶದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಮುಖೇಶ್ ಕುಮಾರ್ ಮೀನಾ ಅವರು ತಿಳಿಸಿದ್ದಾರೆ.

ಪುಂಗನೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಚಿತ್ತೂರು ಜಿಲ್ಲೆಯ ಸೇಡಂ ಮಂಡಲದ ಬೋಕರಮಂಡ ಗ್ರಾಮದಿಂದ ಟಿಡಿಪಿ ಏಜೆಂಟರನ್ನು ಅಪಹರಣ ಮಾಡಲಾಗಿದ್ದು, `ಮತಗಟ್ಟೆ 188, 189 ಮತ್ತು 199ಕ್ಕೆ ಸೇರಿದ ಟಿಡಿಪಿ ಏಜೆಂಟರನ್ನು ವೈಎಸ್‍ಆರ್‍ಸಿಪಿ ಮುಖಂಡರು ಮತಗಟ್ಟೆಗೆ ಹೋಗುವಾಗ ಅಪಹರಿಸಿದ್ದಾರೆ ಎಂದು ಟಿಡಿಪಿ ಜಿಲ್ಲಾ ಉಸ್ತುವಾರಿ ಜಗನ್ ಮೋಹನ್ ರಾಜು ದೂರು ನೀಡಿದ್ದರು ಎಂದು ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರದ ಒಂದು ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದ್ದು, ಪ್ರತಿ ಬೂತ್‍ನಲ್ಲಿ ಬಿಗಿ ಭಧ್ರತೆ ಕಲ್ಪಿಸಲಾಗಿದೆ. ಪುಲ್ವಾಮ, ಬುದ್ಗಾವ್‍ನಲ್ಲಿ ಮತದಾನ ನಡೆಯುತ್ತಿದ್ದು, ಭದ್ರತಾ ಪಡೆಗಳು ಬಿಗಿ ಬಂದೊಬಸ್ತ್ ಕಲ್ಪಿಸಿವೆ.ಈ ನಡುವೆ ಓಮರ್ ಅಬ್ದುಲ್ಲಾ ಅವರೊಂದಿಗೆ ಮತ ಚಲಾಯಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿರುವ ಫಾರೂಕ್ ಅಬ್ದುಲ್ಲಾ ಅವರು, ಯಾವುದೇ ಹಿಂಸಾಚಾರವಿಲ್ಲ. ಎಲ್ಲವೂ ಸುಗಮವಾಗಿದೆ ಎಂದು ಹೇಳಲಾಗುತ್ತಿದೆ. ಆದರೆ, ನಮ್ಮ ಕಾರ್ಯಕರ್ತರನ್ನು ಕಳೆದ 2 ದಿನಗಳಿಂದ ಗೃಹ ಬಂಧನದಲ್ಲಿಟ್ಟಿದ್ದಾರೆ. ಆದರೂ ಮುಕ್ತ ವಾತಾವರಣದಲ್ಲಿ ಚುನಾವಣೆ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆಂದು ಆರೋಪಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು