LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
State News

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ

ಬ್ರಿಜ್‌ಭೂಷಣ್ ಶರಣ್ ಸಿಂಗ್ ಖುಲಾಸೆ


ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಹಾಗೂ ಉತ್ತರ ಪ್ರದೇಶದ ಮಾಜಿ ಸಂಸದ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಆರು ಮಂದಿ ಮಹಿಳಾ ಕುಸ್ತಿಪಟುಗಳು ಹೊರಿಸಿದ್ದ ಲೈಂಗಿಕ ಕಿರುಕುಳ ಆರೋಪದ ಪ್ರಕರಣದಲ್ಲಿ ಬ್ರಿಜ್‌ಭೂಷಣ್ ಹಾಗೂ ಡಬ್ಲೂಎಫ್‌ಐ ಮಾಜಿ ಕರ‍್ಯರ‍್ಶಿ ವಿನೋದ್ ತೋಮರ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.ಸುಮಾರು ಎರಡು ರ‍್ಷಗಳ ಕಾಲ ನಡೆದ ಸುದರ‍್ಘ ವಿಚಾರಣೆ ಮತ್ತು ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ನ್ಯಾಯಪೀಠವು ಈ ನರ‍್ಣಾಯಕ ತರ‍್ಪನ್ನು ಪ್ರಕಟಿಸಿದೆ. ಖುಲಾಸೆಗೊಂಡ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಬ್ರಿಜ್‌ಭೂಷಣ್, ನನಗೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ಸಂಪರ‍್ಣ ನಂಬಿಕೆಯಿತ್ತು, ನ್ಯಾಯಾಲಯದ ತರ‍್ಪಿಗೆ ನಾನು ತಲೆಬಾಗುತ್ತೇನೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
2023 ರಲ್ಲಿ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಸೇರಿದಂತೆ ಪ್ರಮುಖ ಜಾಗತಿಕ ಪದಕ ವಿಜೇತ ಕುಸ್ತಿಪಟುಗಳು ಬ್ರಿಜ್‌ಭೂಷಣ್ ವಿರುದ್ಧ ಲೈಂಗಿಕ ಶೋಷಣೆ ಆರೋಪ ಹೊರಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ತಿಂಗಳುಗಳ ಕಾಲ ಬೃಹತ್ ಪ್ರತಿಭಟನೆ ನಡೆಸಿದ್ದರು. ಕುಸ್ತಿಪಟುಗಳ ಧರಣಿಯ ನಂತರ ಸುಪ್ರೀಂ ಕರ‍್ಟ್ ಸೂಚನೆಯಂತೆ ದೆಹಲಿ ಪೊಲೀಸರು ಬ್ರಿಜ್‌ಭೂಷಣ್ ವಿರುದ್ಧ ಪೋಕ್ಸೋ ಮತ್ತು ಲೈಂಗಿಕ ಕಿರುಕುಳ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST