LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Urban | Politics News

ಸರ್ಕಾರದ ಮುಂದೆ ಸವಾಲ್

ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಪರಮೇಶ್ವರ್ ಹೇಳಿಕೆ



ಬೆಂಗಳೂರು: ರಾಜ್ಯ ಸರ್ಕಾರದ ಮುಂದೆ ಸಾಕಷ್ಟು ಸವಾಲುಗಳಿವೆ. ಈಗಾಗಲೇ ಎದುರಾಗಿದ್ದ ಸವಾಲುಗಳನ್ನು ಸಮರ್ಥವಾಗಿ ಎದುರಿಸಿದ್ದೇವೆ ಎಂದು ಕಂದಾಯ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸರ್ಕಾರ 3 ವರ್ಷಗಳಿಗೂ ಹೆಚ್ಚು ಕಾಲ ಪೂರೈಸಿದ್ದು, ನಿನ್ನೆ ಡಿ.ಕೆ.ಶಿವಕುಮಾರ್ ನೇತೃತ್ವದ ಸರ್ಕಾರ 100 ದಿನಗಳನ್ನು ಆಚರಿಸಲಾಗಿದೆ. ಮುಂದಿನ ದಿನಗಳಲ್ಲಿ ಚುನಾವಣೆ ವರ್ಷ ಎದುರಾಗುವುದರಿಂದ ಸವಾಲುಗಳು ಹೆಚ್ಚಾಗುತ್ತಾ ಹೋಗುತ್ತವೆ. ಅವರುಗಳನ್ನು ಸಮರ್ಪಕವಾಗಿ ಎದುರಿಸುವ ಶಕ್ತಿ ಈ ಸರ್ಕಾರಕ್ಕೆ ಇದೆ ಎಂದು ತಿಳಿಸಿದ್ದಾರೆ. ಅಪೆಕ್ಸ್ ಬ್ಯಾಂಕ್ ಚುನಾವಣೆ ಸಂಬAಧ ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರಿಗೆ ಯಾವುದೇ ಅಸಮಾಧಾನ ಇಲ್ಲ ಎಂದು ಇದೇ ಸಂದರ್ಭದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಅವರು ನಾನು ಸೇರಿದಂತೆ ಮುಖ್ಯಮಂತ್ರಿಯವರು ಸಹಕಾರ ಸಚಿವ ಲಕ್ಷö್ಮಣ ಸವದಿ ಬ್ಯಾಂಕ್ ನಿರ್ದೇಶಕರೊಂದಿಗೆ ಸಮಾಲೋಚನೆ ನಡೆಸಿಯೇ ಐವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಈ ವಿಷಯವನ್ನು ರಾಜಣ್ಣ ಅವರಿಗೂ ತಿಳಿಸಿದ್ದೇವೆ. ನಮ್ಮದೇ ಸರ್ಕಾರ ಇರುವುದರಿಂದ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ಬೇಡ ಎಂದು ತೀರ್ಮಾನಿಸಿಯೇ ಒಮ್ಮತವಾಗಿ ಆಯ್ಕೆ ಮಾಡಲಾಗಿದೆ ಎಂದು ವಿವರಿಸಿದರು. ಮುಖ್ಯಮಂತ್ರಿ ಸ್ಥಾನ ಬದಲಾಗಿರುವ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಯಾವುದೇ ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದ ಅವರು, ರಾಹುಲ್‌ಗಾಂಧಿ ಅವರ ಸೂಚನೆ ಮೇರೆಗೆ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರವೇ ಹೊಸ ಮುಖ್ಯಮಂತ್ರಿ ಆಯ್ಕೆ ಮಾಡಲಾಗಿದೆ. ಬೇರೆ ಕಾರಣಕ್ಕಾಗಿ ಇಂದು ಅವರು ದೆಹಲಿಗೆ ಹೋಗಿದ್ದಾರೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಪಕ್ಷದಲ್ಲಿ ಸದ್ಯಕ್ಕೆ ನಡೆಯುತ್ತಿರುವ ಬೆಳವಣಿಗೆ ಹೊರತುಪಡಿಸಿ ಯಾವುದೇ ಹೊಸ ಬೆಳವಣಿಗೆ ನಡೆದಿಲ್ಲ. ಪಾವಗಡದಲ್ಲಿ ನಕ್ಸಲ್ ಪೋಸ್ಟರ್ ಅಂಟಿಸಿರುವ ಬಗ್ಗೆ ನನ್ನ ಗಮನಕ್ಕೆ ಬಂದಿದೆ ಅದರ ಬಗ್ಗೆ ತುಮಕೂರಿಗೆ ಹೋದ ನಂತರ ಎಸ್‌ಪಿ ಅವರೊಂದಿಗೆ ಮಾತನಾಡಿ ಮಾಹಿತಿ ಪಡೆಯುತ್ತೇನೆ. ಆತರ ಏನಾದರೂ ನಡೆದಿದ್ದಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡುತ್ತೇವೆ. ಈಗಾಗಲೇ ನಕ್ಸಲ್ ನಿಗ್ರಹ ಪಡೆಯನ್ನು ವಾಪಸ್ ಪಡೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು ನಕ್ಸಲ್ ನಿಗ್ರಹ ಪಡೆಯನ್ನು ಸಂಪೂರ್ಣವಾಗಿ ವಾಪಸ್ ಪಡೆದಿಲ್ಲ. ಇನ್ನು ಒಂದು ತುಕಡಿಯನ್ನು ಅಲ್ಲಿಯೇ ಬಿಟ್ಟಿದ್ದೇವೆ ಎಂದು ತಿಳಿಸಿದ್ದಾರೆ. 
ಈ ಬಗ್ಗೆ ಪೊಲೀಸ್ ಮುಖ್ಯ ಅಧಿಕಾರಿಯೊಂದಿಗೆ ಚರ್ಚಿಸುತ್ತೇನ ಎಂದು ಸಹ ಹೇಳಿದ್ದಾರೆ. 

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST