LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯಿಂದ ಸಂವಾದ

ಸಿನಿಮಾಟೋಗ್ರಾಫ್ ಆ್ಯಕ್ಟ್ ಸಾಕಷ್ಟು ಬದಲಾ ವಣೆಗಳೊಂದಿಗೆ ಈಗ ಜಾರಿಗೊಂಡಿದೆ. ಶಾಸನಬದ್ಧವಾಗಿ ಜಾರಿಗೊಂಡಿರುವ ಎಲ್ಲ ಕಾನೂನುಗಳನ್ನು ಪಾಲಿಸುವದರೊಂದಿಗೆ ಕನ್ನಡ ಚಿತ್ರರಂಗದ ಉತ್ತೇಜನಕ್ಕೆ ಬೇಕಾದ ಸದ್ಯದ ತುರ್ತು ಕ್ರಮಗಳೇನು ಎಂಬುದನ್ನು ಅವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಹಿರಿಯ ಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ ಅಭಿಪ್ರಾಯ ಪಟ್ಟಿದ್ದಾರೆ.ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ(ಸಿಬಿಎಫ್‌ಸಿ) ಪ್ರಾದೇಶಿಕ ಕಚೇರಿ ಆಯೋಜಿಸಿದ್ದ ಕನ್ನಡ ಚಿತ್ರೋದ್ಯಮಿಗಳೊ ಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾಮಾಜಿಕ ಜಾಲತಾಣಗಳು, ಮಾಧ್ಯಮಗಳ ಸವಾಲನ್ನು ಚಿತ್ರರಂಗ ಹೇಗೆ ಎದುರಿಸಬೇಕು. ಈ ಎಲ್ಲ ಸವಾಲುಗಳ ಮಧ್ಯೆ ಸಾರ್ವಜನಿಕವಾಗಿ ಪ್ರದರ್ಶನಗೊಳ್ಳುವ ಚಲನಚಿತ್ರಗಳಿಗೆ ಇರುವ ಜವಾಬ್ದಾರಿಗಳನ್ನು ಸೃಜನಶೀಲ ಸಿನೆಮಾ ನಿರ್ಮಾತೃಗಳು ಅರಿಯಬೇಕು. ಮೂಕ ಮತ್ತು ಕಿವುಡರಿಗೆ ಅನೇಕ ಸೌಕರ್ಯಗಳನ್ನು ಸಿನೆಮಾ ಹಾಗೂ ಸಿನೆಮಾ ಮಂದಿರಗಳು ಅಳವಡಿಸಿಕೊಳ್ಳಬೇಕು. ದೃಷ್ಟಿ ವಿಕಲಚೇತನರಿಗಾಗಿ ಬ್ರೈಲ್ ಬಳಕೆ ಬಗ್ಗೆ ನ್ಯಾಯಾಲಯದ ನಿರ್ದೇಶನಗಳು ಬಂದಿವೆ.ಅAತಹ ಸಮುದಾಯಗಳನ್ನು ಒಳಗೊಳ್ಳಲು ನಾವೆಲ್ಲ ಒಟ್ಟಾಗಿ ಹೆಜ್ಜೆ ಇರಿಸಬೇಕು ಎಂದರು.
ಸಂವಾದ: ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿ (ಸಿಬಿಎಫ್‌ಸಿ) ಅಧ್ಯಕ್ಷ ಶಶಿಶೇಖರ್ ವೇಂಪಾಟಿ ಅವರು ಮಾತನಾಡಿ, ಕನ್ನಡ ಚಿತ್ರರಂಗದ ಸಮಸ್ಯೆಗಳನ್ನು ಅರಿಯಲು ಇಂದು ಸಂವಾದ ಕಾರ್ಯಕ್ರಮ ಆಯೋಜಿಸಲಾಗಿದೆ ಚಿತ್ರೋದ್ಯ ಮದಲ್ಲಿ ಸಕ್ರಿಯವಾಗಿ ತೊಡ ಗಿಸಿಕೊಂಡಿರುವ ನಿರ್ಮಾಪಕರು, ನಿರ್ದೇಶಕರು, ಕಲಾವಿದರು, ತಂತ್ರಜ್ಞರಿAದ ಅರ್ಥಪೂರ್ಣ ಸಲಹೆಗಳನ್ನು ಪಡೆದು ಉನ್ನತ ಮಟ್ಟದಲ್ಲಿ ಚರ್ಚಿಸಲಾಗುವುದು ಎಂದರು.
ಚಿತ್ರೋದ್ಯಮದ ಸಂಕಷ್ಟಗಳ ಕುರಿತು ನಿರ್ಮಾಪಕ ಕೃಷ್ಣೇಗೌಡ, ಹಿರಿಯ ನಟ ಎಂ.ಕೆ.ಸುಂದರರಾಜನ್, ಚಿತ್ರ ನಿರ್ದೇಶಕ ಪಿ.ಶೇಷಾದ್ರಿ, ನಟ, ನಿರ್ಮಾಪಕ ಡಾಲಿ ಧನಂಜಯ್, ತರುಣ್ ಸುಧೀರ್, ಪ್ರಮೀಳಾ ಕುಲಕರ್ಣಿ, ವಿಶ್ವನಾಥ ಎನ್.ಆರ್.ಕೆ ಮತ್ತಿತರರು ಸಂವಾದದಲ್ಲಿ ಮಾತನಾಡಿ, ಗ್ರಾಮೀಣ ಪರಿಸರದ ಚಿತ್ರವೊಂದನ್ನು ಚಿತ್ರೀಕರಣ ಮಾಡುವಾಗ ದನ-ಕರುಗಳು, ಅವುಗಳ ಹಾಲು ಕರೆಯುವುದು ಸಹಜವಾಗಿ ದೃಶ್ಯಗಳಲ್ಲಿ ಬರುತ್ತದೆ.ಇಂತಹ ನೀತಿಗಳನ್ನು ಜಾರಿಗೊಳಿಸುವ ಮುನ್ನ ಸಂಬಂಧಿಸಿದ ಕ್ಷೇತ್ರದ ಜನರೊಂದಿಗೆ ಚರ್ಚಿಸಿ,ಸಲಹೆ ಪಡೆಯಬೇಕಾಗಿತ್ತು. ಪ್ರಾಣಿ, ಪಕ್ಷಿಗಳನ್ನು ಉದ್ದೇಶಪೂರ್ವಕವಾಗಿ ಬಳಸಿಕೊಳ್ಳದಿದ್ದರೆ ಕತೆಯಲ್ಲಿ ಮುಖ್ಯವಾಗಿ ಕಂಡು ಬರದಿದ್ದರೆ ಅಂತಹ ಚಿತ್ರಗಳಿಗೆ ಪ್ರಾಣಿ ಕಲ್ಯಾಣ ಮಂಡಳಿಯ ಅನುಮತಿ ಪಡೆಯುವದರಿಂದ ವಿನಾಯಿತಿ ನೀಡಬೇಕು, ಎಲ್ಲ ಚಲನಚಿತ್ರಗಳಿಗೆ ಎಡಿಸಿಸಿ ಪಡೆಯುವುದನ್ನು ಕಡ್ಡಾಯಗೊಳಿಸಿರುವುದು ಚಿತ್ರ ನಿರ್ಮಾಪಕರಿಗೆ ಹೊರೆಯಾಗಿದೆ ಎಂದು ಹಲವರು ಒತ್ತಾಯಿಸಿದರು.ಸಿನೆಮಾ ಪ್ರಮಾಣೀಕರಣಕ್ಕೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯು ಯಾವ ಹಂತದಲ್ಲಿ ತಿಳಿಯುವ ಸೌಕರ್ಯ ಒದಗಿಸಬೇಕು ಎಂಬ ಅಭಿಪ್ರಾಯಗಳನ್ನು ಸಿಬಿಎಫ್‌ಸಿ ಅಧ್ಯಕ್ಷರಿಗೆ ತಿಳಿಸಿದರು.ಆದ್ಯತೆಯ ಮೇಲೆ ಚಲನಚಿತ್ರಗಳಿಗೆ ಪ್ರಮಾಣೀಕರಣ ನೀಡುವ ಅಗತ್ಯತೆ ಕುರಿತು ಸಭೆಯಲ್ಲಿ ವಿಸ್ತöÈತ ಚರ್ಚೆಗಳಾದವು. ಸಿಬಿಎಫ್‌ಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಜೇಂದ್ರಸಿಂಗ್, ಬೆಂಗಳೂರು ಪ್ರಾದೇಶಿಕ ಅಧಿಕಾರಿ ಯಶವಂತ್ ಶಹನಾಯ್ ಮತ್ತಿತರರು ವೇದಿಕೆಯಲ್ಲಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು