LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಮನಸೂರೆಗೊಂಡ  "Mr ನಟ್ವರ್ ಲಾಲ್" ಚಿತ್ರದ ಯುಗಳಗೀತೆ

ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿ, ನಾಯಕನಾಗಿ ನಟಿಸಿರುವ ಹಾಗೂ ವಿ.ಲವ ನಿರ್ದೇಶನದ "Mrನಟ್ವರ್ ಲಾಲ್" ಚಿತ್ರದ ಯುಗಳಗೀತೆಯೊಂದು ಬಿಡುಗಡೆಯಾಗಿದೆ.

ಈ ಚಿತ್ರಕ್ಕಾಗಿ ಬಹದ್ದೂರ್ ಚೇತನ್ ಕುಮಾರ್ ಬರೆದಿರುವ "ಅಚ್ಚಚ್ಚಚ್ಚು ಅಚ್ಚುಮೆಚ್ಚು" ಎಂಬ ಪ್ರೇಮಗೀತೆ ಆನಂದ್ ಆಡಿಯೋ ಮೂಲಕ ಹೊರಬಂದಿದ್ದು ಎಲ್ಲರ ಮನ ಗೆಲ್ಲುತ್ತಿದೆ. ಧರ್ಮವಿಶ್ ಸಂಗೀತ ಸಂಯೋಜಿಸಿರುವ ಈ ಯುಗಳಗೀತೆ ಗಾಯಕ ಸಾಯಿವಿಘ್ನೇಶ್ ಕಂಠಸಿರಿಯಲ್ಲಿ ಸುಮಧುರವಾಗಿ ಮೂಡಿಬಂದಿದೆ.

ತನುಷ್ ಶಿವಣ್ಣ ಹಾಗೂ ಸೋನಾಲ್ ಮೊಂತೆರೊ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ.ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವಿ.ಲವ ನಿರ್ದೇಶಿಸಿದ್ದಾರೆ. ವಿಲಿಯಂ ಡೇವಿಡ್ ಛಾಯಾಗ್ರಹಣ, ಧರ್ಮವಿಶ್ ಸಂಗೀತ ನಿರ್ದೇಶನ, ಕೆ.ಎಂ.ಪ್ರಕಾಶ್ ಸಂಕಲನ ಹಾಗೂ ಡಿಫರೆಂಟ್ ಡ್ಯಾನಿ, ಥ್ರಿಲ್ಲರ್ ಮಂಜು, ರಾ ಪುಷ್ಪರಾಜು ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ತನುಷ್ ಶಿವಣ್ಣ, ಸೋನಾಲ್ ಮೊಂತೆರೊ, ನಾಗಭೂಷಣ, ಕಾಕ್ರೋಜ್ ಸುಧಿ, ಯಶ್ ಶೆಟ್ಟಿ, ರಾಜೇಶ್ ನಟರಂಗ, ರಘು ರಾಮನಕೊಪ್ಪ, ಹರಿಣಿ ಶ್ರೀಕಾಂತ್, ಸುಂದರರಾಜ್, ಕಾಂತರಾಜು ಕಡ್ಡಿಪುಡಿ ಈ ಚಿತ್ರದ ತಾರಾಬಳಗದಲ್ಲಿದ್ದಾರೆ.ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಜನಪ್ರಿಯವಾಗಿರುವ "Mr ನಟ್ವರ್ ಲಾಲ್" ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST