LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಫಾಲೋಆನ್ ಹೇರಿದ ಟೀಮ್ ಇಂಡಿಯಾ: ಗೆಲುವು ಖಚಿತ..!

ಮುಲ್ಲನ್‌ಪುರ್‌ನ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಪ್ರಥಮ ಇನಿಂಗ್ಸ್ನಲ್ಲಿ ಅಫ್ಘಾನಿಸ್ತಾನ್ ತಂಡ ಕೇವಲ 152 ರನ್‌ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್‌ಮನ್ ಗಿಲ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100), ಶುಭ್‌ಮನ್ ಗಿಲ್ (126) ಶತಕ ಬಾರಿಸಿದರೆ, ಸಾಯಿ ಸುದರ್ಶನ್, ವಾಷಿಂಗ್ಟನ್ ಸುಂದರ್ ಹಾಗೂ ರಿಷಭ್ ಪಂತ್ ಅರ್ಧಶತಕ ಸಿಡಿಸಿದ್ದರು. ಈ ಮೂಲಕ ಟೀಮ್ ಇಂಡಿಯಾ 8 ವಿಕೆಟ್ ನಷ್ಟಕ್ಕೆ 564 ರನ್‌ಗಳಿಸಿ ಡಿಕ್ಲೇರ್ ಘೋಷಿಸಿತ್ತು. ಇದಕ್ಕುತ್ತರವಾಇಗ ಮೊದಲ ಇನಿಂಗ್ಸ್ ಆಡಿದ ಅಫ್ಘಾನಿಸ್ತಾನ್ ತಂಡವು ಯುವ ಸ್ಪಿನ್ನರ್ ಮಾನವ್ ಸುತಾರ್ ಸ್ಪಿನ್ ದಾಳಿಗೆ ನಲುಗಿ ಹೋಗಿದೆ. ಪರಿಣಾಮ ಕೇವಲ 152 ರನ್‌ಗಳಿಗೆ ಆಲೌಟ್ ಆಗಿ ಮೊದಲ ಇನಿಂಗ್ಸ್ನಲ್ಲಿ 412 ರನ್‌ಗಳ ಹಿನ್ನಡೆ ಅನುಭವಿಸಿದೆ.
ಫಾಲೋಆನ್ ಹೇರಿದ ಟೀಮ್ ಇಂಡಿಯಾ: ಅಫ್ಘಾನಿಸ್ತಾನ್ ತಂಡವು 412 ರನ್‌ಗಳ ಹಿನ್ನಡೆ ಅನುಭವಿಸಿರುವ ಕಾರಣ ಟೀಮ್ ಇಂಡಿಯಾ ಫಾಲೋಆನ್ ಹೇರಿದೆ. ಅದರಂತೆ ಇದೀಗ ಅಫ್ಘಾನ್ ತಂಡ ಮತ್ತೆ ಬ್ಯಾಟ್ ಮಾಡುತ್ತಿದೆ. ಅಂದರೆ ಅಫ್ಘಾನಿಸ್ತಾನ್ ತಂಡವು ದ್ವಿತೀಯ ಇನಿಂಗ್ಸ್ ಆರಂಭಿಸಿದೆ.ದ್ವಿತೀಯ ಇನಿಂಗ್ಸ್ನಲ್ಲಿ 412 ರನ್‌ಗಳಿಸಿದ ಬಳಿಕವಷ್ಟೇ ರನ್ ಲೆಕ್ಕಾಚಾರ ಶುರುವಾಗಲಿದೆ. ಅಂದರೆ ಫಾಲೋಆನ್ ಹೇರಿದ ಬಳಿಕ ಹಿನ್ನಡೆ ರನ್‌ಗಳನ್ನು ಪೂರೈಸಿದ ಬಳಿಕವಷ್ಟೇ ಎದುರಾಳಿ ತಂಡಕ್ಕೆ ಗುರಿ ನೀಡಬಹುದು.ಟೀಮ್ ಇಂಡಿಯಾ ಗೆಲುವು ಖಚಿತ: ಮೊದಲ ಇನಿಂಗ್ಸ್ನಲ್ಲಿ ಕೇವಲ 152 ರನ್‌ಗಳಿಗೆ ಆಲೌಟ್ ಆಗಿರುವ ಕಾರಣ ಅಫ್ಘಾನಿಸ್ತಾನ್ ತಂಡವು 412 ರನ್‌ಗಳನ್ನು ಪೂರೈಸಿ ಟೀಮ್ ಇಂಡಿಯಾಗೆ ಗುರಿ ನೀಡುವ ಸಾಧ್ಯತೆಯಿಲ್ಲ. ಅದರೊಳಗೆ ಟೀಮ್ ಇಂಡಿಯಾ ಅಫ್ಘಾನಿಸ್ತಾನ್ ತಂಡವನ್ನು ಆಲೌಟ್ ಆಗುವ ಸಾಧ್ಯತೆಯೇ ಹೆಚ್ಚು. ಹೀಗಾಗಿ ಈ ಮ್ಯಾಚ್‌ನಲ್ಲಿ ಭಾರತ ತಂಡದ ಗೆಲ್ಲುವುದು ಖಚಿತ ಎಂದೇ ಹೇಳಬಹುದು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು