LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಅಯ್ಯಪ್ಪ ದರ್ಶನಕ್ಕೆ ನಿಂತಿದ್ದ ಬಾಲಕಿ ಸಾವು

ಪಟ್ಟಣಂತಿಟ್ಟ: ಕೇರಳದ ಶಬರಿಮಲೆ ದೇಗುಲದಲ್ಲಿ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ತಮಿಳುನಾಡಿನ 12 ವರ್ಷದ ಬಾಲಕಿಯೊಬ್ಬಳು ಇದ್ದಕ್ಕಿದ್ದಂತೆ ಕುಸಿದುಬಿದ್ದು ಸಾವನ್ಪನ್ನಪ್ಪಿದ ಘಟನೆ ನಡೆದಿದೆ.

ತಮಿಳುನಾಡು ಮೂಲದ ಪದ್ಮಶ್ರೀ (12) ಮೃತಪಟ್ಟ ಬಾಲಕಿಯಾಗಿದ್ದಾಳೆ. ದೇವಸ್ಥಾನದ ಅಪ್ಪಾಚಿಮೇಡು ಪ್ರದೇಶದಲ್ಲಿ ಬಾಲಕಿ ಕುಸಿದು ಬಿದ್ದಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೂ ಆಕೆಯನ್ನು ಉಳಿಸಲಾಗಲಿಲ್ಲ. ಮೃತದೇಹವನ್ನು ಪಂಬಾ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು ಎಂದು ವರದಿಗಳು ತಿಳಿಸಿವೆ.

ಬಾಲಕಿಗೆ ಈ ಹಿಂದೆಯೇ ಉಸಿರಾಟ ಸಮಸ್ಯೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳಿತ್ತು ಎಂದು ಪೊಲೀಸ್ ಮೂಲಗಳು ಮಾಹಿತಿ ನೀಡಿವೆ.ಬಾಲಕಿ ಮೂರು ವರ್ಷದಿಂದ ಹೃದ್ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದಳು, ಡಯಾಲಿಸಿಸ್ ಮಾಡಿಸಿಕೊಳ್ಳುತ್ತಲೇ ಶಬರಿಮಲೆ ಏರಲು ನಿರ್ಧರಿಸಿದ್ದಳು ಎನ್ನಲಾಗಿದೆ.

ಈ ನಡುವೆ ಶುಕ್ರವಾರ ರಾತ್ರಿಯಿಂದಲೇ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಯಾತ್ರಾರ್ಥಿಗಳ ನೂಕುನುಗ್ಗಲು ಕಂಡು ಬರುತ್ತಿದ್ದು, ಜನಸಂದಣಿಯನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಅನೇಕ ಯಾತ್ರಾರ್ಥಿಗಳು ಬೇಲಿಗಳನ್ನು ಮುರಿದು ಅರಣ್ಯ ಮಾರ್ಗಗಳ ಮೂಲಕ ದೇವಾಲಯವನ್ನು ಪ್ರವೇಶಿಸಲು ಶಾಟ್ರ್ಕಟ್ಗಳನ್ನು ತೆಗೆದುಕೊಳ್ಳಲು ಪ್ರಾರಂಭಿಸಿದ್ದರಿಂದ ದೇವಾಲಯದಲ್ಲಿ ಪ್ರಯತ್ನಿಸಲಾಗಿದ್ದ ತಿರುಪತಿ ಮಾದರಿ ಸರತಿ ವ್ಯವಸ್ಥೆಯು ಸಂಪೂರ್ಣ ವಿಫಲವಾಗಿದೆ ಎಂದು ವರದಿಗಳು ತಿಳಿಸಿವೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು