LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಅಭಿವೃದ್ಧಿಗೆ ಸುವರ್ಣಾವಕಾಶ

ಕೋಲಾರ: ಆತ್ಮ ನಿರ್ಭರ ಭಾರತ ಅಭಿಯಾನ - ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ಔಪಚಾರೀಕರಣ (Pಒಈಒಇ) ಯೋಜನೆಯಡಿ ಸಿರಿಧಾನ್ಯಗಳು ಮತ್ತು ಇತರೆ ಧಾನ್ಯಗಳ ಸಂಸ್ಕರಣೆ, ಬೆಲ್ಲ ನಿಂಬೆ ಉತ್ಪನ್ನಗಳು, ಬೇಕರಿ ಉತ್ಪನ್ನಗಳು, ಕೋಲ್ಡ್ ಪ್ರೆಸ್ಡ್ ಆಯಿಲ್, ಮೆಣಸಿನ ಪುಡಿ ಘಟಕಗಳು, ಶುಂಠಿ ಸಂಸ್ಕರಣಾ ಘಟಕಗಳು, ಅನಾನಸ್ ಸಂಸ್ಕರಣಾ ಘಟಕಗಳು, ಮಸಾಲಾ ಉತ್ಪನ್ನಗಳ ಘಟಕಗಳು, ತೆಂಗಿನ ಉತ್ಪನ್ನಗಳು, ಕುಕ್ಕುಟ ಉತ್ಪನ್ನಗಳು, ಸಾಗರ ಉತ್ಪನ್ನಗಳು, ವಿವಿಧ ಹಣ್ಣು ತರಕಾರಿ ಉತ್ಪನ್ನಗಳು ಹಾಗೂ ಇತರೆ ಆಹಾರ ಸಂಸ್ಕರಣಾ ಉದ್ದಿಮೆಗಳನ್ನು ಹೊಸದಾಗಿ ಪ್ರಾರಂಭಿಸಲು ಮತ್ತು ಚಾಲ್ತಿಯಲ್ಲಿರುವ ಉದ್ದಿಮೆಗಳನ್ನು ವಿಸ್ತರಿಸಲು ವೈಯಕ್ತಿಕ ಉದ್ದಿಮೆಗಳಿಗೆ ಮಾಲೀಕತ್ವದ ಸಂಸ್ಥೆಗಳಿಗೆ, ಪಾಲುದಾರಿಕೆ ಸಂಸ್ಥೆಗಳಿಗೆ ಖಾಸಗಿ ಸಂಸ್ಥೆಗಳಿಗೆ, ರೈತ ಉತ್ಪಾದಕ ಸಂಸ್ಥೆಗಳಿಗೆ, ಸಕಾರೇತರ ಸಂಸ್ಥೆಗಳಿಗೆ ಮತ್ತು ಸ್ವ-ಸಹಾಯ ಸಂಘಗಳಿಗೆ ಸಾಲ ಸಂಪರ್ಕಿತ ಶೇ.೫೦ ರಷ್ಟು ಅಥವಾ ಗರಿಷ್ಠ ೧೫.೦೦ ಲಕ್ಷಗಳ ಸಹಾಯಧನವನ್ನು ನೀಡಲಾಗುವುದು. ಯೋಜನೆಯಡಿ ಒದಗಿಸುವ ಸಾಲಕ್ಕೆ ಅಉಖಿಒSಇ ಸಂಸ್ಥೆಯಿಂದ ಕ್ರೆಡಿಟ್ ಗ್ಯಾರಂಟಿಯನ್ನು ಒದಗಿಸಲಾಗುತ್ತಿದೆ.
ಅರ್ಜಿಯನ್ನು ಕನಿಷ್ಠ ೧೮ ವರ್ಷ ಮೇಲ್ಪಟ್ಟವರು ರಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಬೇಕಾದ ಪ್ಯಾನ್‌ಕಾರ್ಡ್. ಆಧಾರ್ ಪ್ರತಿ. ವಿಳಾಸ ದೃಢೀಕರಣ ದಾಖಲೆ. ಬ್ಯಾಂಕ್ ಪಾಸ್ ಪುಸ್ತಕ. ಜಿ.ಎಸ್.ಟಿ ಹೊಂದಿರುವ ಯಂತ್ರೋಪಕರಣಗಳ ಧರಪಟ್ಟಿಯನ್ನುಸಲ್ಲಿಸಬೇಕು.
ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಂದ ಉಚಿತವಾಗಿ ಯೋಜನಾ ಪ್ರಸ್ತಾವನೆ ಸಿದ್ಧತೆ ಮತ್ತು ಅರ್ಜಿ ಸಲ್ಲಿಕೆಗೆ ಸಹಾಯವನ್ನು ಮಾಡಲಾಗುವುದು.
ಜಿಲ್ಲೆಯ ಉದ್ದಿಮೆದಾರರು ಮತ್ತು ಆಸಕ್ತರು ಯೋಜನೆಯ ಸದುಪಯೋಗ ಪಡೆದುಕೊಳ್ಳಬಹುದು ಮತ್ತು ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರನ್ನು ಅಥವಾ ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಾದ ಸೋಮಶೇಖರ್-೯೭೪೦೮೨೬೩೩೯, ವೆಂಕಟಶಿವಾರೆಡ್ಡಿ-೯೪೮೧೧೦೭೫೨೪ ಯನ್ನು ಸಂಪರ್ಕಿಸಬಹುದೆAದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು