LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಸುಧಾಕರ್‍ಗೆ ಭರ್ಜರಿ ಗೆಲುವು: ಸಿಹಿ ಹಂಚಿ ವಿಜಯೋತ್ಸವ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಭರ್ಜರಿ ಗೆಲುವು ಸಾಧಿಸಿದ್ದು ಗುರುವಾರ ನಗರದ ಬಿ.ಬಿ.ರಸ್ತೆಯಲ್ಲಿರುವ ನೂತನ ಜೆಡಿಎಸ್ ಜಿಲ್ಲಾ ಕಚೇರಿಯ ಮುಂದೆ ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಜೆಡಿಎಸ್ ಮುಖಂಡರು ಪಟಾಕಿ ಸಿಡಿಸಿ ಸಿಹಿ ಹಂಚಿ ವಿಜಯೋತ್ಸವ ಆಚರಿಸಿದರು.

ಈ ಸಂದರ್ಭದಲ್ಲಿ ಸುಧಾಕರ್ ರವರ ಗೆಲುವಿಗೆ ಶ್ರಮಿಸಿದ ಎರಡು ಪಕ್ಷಗಳ ಮುಖಂಡರಿಗೆ ಧನ್ಯವಾದ ತಿಳಿಸಿದ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ ಚುನಾವಣೆ ಸಂದರ್ಭದಲ್ಲಿ ಎರಡು ಪಕ್ಷಗಳ ಮುಖಂಡರು ಒಟ್ಟಾಗಿ ಸೇರಿ ಇಡೀ ಕ್ಷೇತ್ರದ್ಯಾಂತ ಸಂಚರಿಸಿ ಮೈತ್ರಿ ಅಭ್ಯರ್ಥಿ ಪರ ಪ್ರಚಾರ ನಡೆಸಿ ಅವರ ಗೆಲುವಿಗೆ ಶ್ರಮಿಸಿದ್ದು ಅದರ ಪ್ರತಿಫಲ ಇಂದು ಸಿಕ್ಕಿದೆ ಎಂದು ತಿಳಿಸಿದರು.

ಒಂದು ಲಕ್ಷ ಅರವತ್ತು ಸಾವಿರಕ್ಕೂ ಹೆಚ್ಚುಮತಗಳಿಂದ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಗೆ ಗೆಲುವಾಗಿದ್ದು ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಪ್ರತಿ ಸ್ಪರ್ಧಿಯ ಮುಖಂಡರು ಏನೆಲ್ಲಾ ಉಡಾಫೆ ಮಾತುಗಳು ಹೇಳುತ್ತಿದ್ದರು ಅವರಿಗೆ ಸೊಕ್ತ ರೀತಿಯ ಉತ್ತರ ಸಿಕ್ಕಿದೆ ಇನ್ನು ಡಾ.ಕೆ.ಸುಧಾಕರ್ ಅವರು ತಮ್ಮ ಶಾಸಕರ ಅವಧಿಯಲ್ಲಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಮಾಡುವ ಮೂಲಕ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದರು.

ಆದರೆ ಹಿಂದಿನ ಚುನಾವಣೆಯಲ್ಲಿ ಅವರು ಅನಿರೀಕ್ಷಿತ ಸೋಲು ಅನುಭವಿಸಿದ್ದರು ಲೋಕಸಭಾ ಚುನಾವಣೆಯಲ್ಲಿ ಅತಿ ಹೆಚ್ಚು ಲೀಡ್ ಪಡೆದು ಜಯಭೇರಿ ಸಾಧಿಸಿದ್ದು ಅಭಿವೃದ್ಧಿ ಮಾಡಿದವರಿಗೆ ಜನರ ಅನುಕೂಲಕ್ಕಾಗಿ ಯೋಜನೆಗಳನ್ನು ತಂದವರಿಗೆ ಯಾವತ್ತೂ ಜನರು ಮರೆಯಲ್ಲ ಎಂದು ಸುಧಾಕರ್ ರವರ ಗೆಲುವಿನೊಂದಿಗೆ ಸಾಬೀತಾಗಿದೆ ಎಂದರು.

ಜೆಡಿಎಸ್ ಕಾರ್ಯದಕ್ಷ ಕೆ.ಆರ್. ರೆಡ್ಡಿ ಮಾತನಾಡಿ ಚುನಾವಣೆ ಸಂದರ್ಭದಲ್ಲಿ ಎರಡು ಪಕ್ಷಗಳ ಮುಖಂಡರ ಸುಧಾಕರ್ ಗೆಲುವಿಗೆ ಶ್ರಮವಹಿಸಿದ್ದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಇಪ್ಪತ್ತು ಸಾವಿರಕ್ಕೂ ಹೆಚ್ಚು ಮತ ಲೀಡ್ ಸಿಕ್ಕಿದೆ.ನೋತನ ಸಂಸದರು ಡಾ. ಕೆ.ಸುಧಾಕರ್ ಈ ಹಿಂದೆ ಏನು ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ್ದರು ಮುಂದಿನ ದಿನಗಳಲ್ಲಿ ಲೋಕಸಭಾ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದರಲ್ಲಿ ಯಾವುದೇ ಸಂಶಯವಿಲ್ಲ,ಇನ್ನೂ ಮುಂದೆ ಬರುವಂತಹ ಚುನಾವಣೆಗಳಲ್ಲಿ ಎರಡು ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಿ ಜಯಗಳಿಸುವ ವಿಶ್ವಾಸವಿದೆ. ಮಾಜಿ ಮುಖ್ಯಮಂತ್ರಿ ಸಂಸದರಾದ ಹೆಚ್.ಡಿ. ಕುಮಾರಸ್ವಾಮಿ ಈ ಬಾರಿ ಕೇಂದ್ರ ಸಚಿವ ಸಂಪುಟ ಸ್ಥಾನ ಪಡೆಯಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಸಂಸದ ಡಾ.ಕೆ. ಸುಧಾಕರ್ ರವರ ತಂದೆ ಹಾಗೂ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೇಶವರೆಡ್ಡಿ, ಬಿಜೆಪಿ ಹಿರಿಯ ಮುಖಂಡರಾದ ಲಕ್ಷ್ಮೀ ನಾರಾಯಣ ಗುಪ್ತ,ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಕೊಳವನಹಳ್ಲಿ ಮುನಿರಾಜು, ಮಟಮಪ್ಪ ಆರ್, ಜೆಡಿಎಸ್ ಮಹಿಳಾ ವಿಭಾಗದ ಜಿಲ್ಲಾ ಅಧ್ಯಕ್ಷೆ ಪ್ರಭಾ ನಾರಾಯಣಗೌಡ, ಅಖಿಲ್ ರೆಡ್ಡಿ, ಪಾರಿಜಾತ ಕೂಡ ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು