LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Bangalore Rural

ಅನೈತಿಕ ಸಂಬಂಧ ಶಂಕೆ, ಚಾಕುವಿನಿಂದ ಇರಿದು ಪ್ರಿಯತಮೆಯನ್ನು ಕೊಲೆಗೈದ ಪ್ರಿಯಕರ

ಹೊಸಕೋಟೆ: ಅನೈತಿಕ ಸಂಬಂಧ ಹಿನ್ನೆಲೆ ಪ್ರಿಯತಮೆಯನ್ನು ಪ್ರಿಯಕರನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಗರದ ಕುವೆಂಪುನಗರದಲ್ಲಿ ನಡೆದಿದೆ.ಆಂಧ್ರಪ್ರದೇಶ ಮೂಲದ ಹೇಮಾವತಿ (32) ಕೊಲೆಯಾದ ಮಹಿಳೆಯಾಗಿದ್ದು, ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ನಗರದ ವೇಣುಗೋಪಾಲ್ (35) ಕೊಲೆಗೈದ ಪ್ರಿಯಕರನಾಗಿದ್ದಾನೆ.

ಕೊಲೆಯಾದ ಹೇಮಾವತಿ ಹಾಗೂ ಕೊಲೆ ಮಾಡಿದ ವೇಣುಗೋಪಾಲ್ ಇಬ್ಬರೂ ಸಹ ಬೇರೆ ವಿವಾಹಿತರಾಗಿದ್ದರು. ಅನೈತಿಕ ಸಂಬಂಧ ಹೊಂದಿದ್ದ ಇಬ್ಬರೂ ಸಹ ನಗರದ ಕುವೆಂಪುನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇದರ ನಡುವೆ ಹೇಮಾವತಿ ಬೇರೊಬ್ಬ ಪುರುಷನೊಂದಿಗೆ ಅನೈತಿಕ ಸಂಬಂದ ಇಟ್ಟುಕೊಂಡಿದ್ದಾಳೆ ಎಂದು ಶಂಕಿಸಿದ ವೇಣುಗೋಪಾಲ್ ಭಾನುವಾರ ರಾತ್ರಿ ಇಬ್ಬರ ನಡುವೆ ಜಗಳ ನಡೆದಿದ್ದು ಈ ಸಂದರ್ಭದಲ್ಲಿ ಚಾಕುವಿನಿಂದ ಹೊಟ್ಟೆಯ ಕೆಳಭಾಗಕ್ಕೆ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಕೊಲೆ ಮಾಡಿ ಪರಾರಿಯಾಗಿದ್ದ ವೇಣುಗೋಪಾಲ್ ಸೋಮವಾರ ಬೆಳಿಗ್ಗೆ ಚಿಕ್ಕಬಳ್ಳಾಪುರದಲ್ಲಿವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು ಚಿಕ್ಕಬಳ್ಳಾ
ಪುರ ಸರಕಾರಿ ದಾಖಲಾಗಿದ್ದಾನೆ. ಬಳಿಕ ಚಿಕ್ಕಬಳ್ಳಾಪುರ ನಗರ ಪೊಲೀಸರಿಗೆ ಹೇಮಾವತಿಯನ್ನು ಕೊಲೆ ಮಾಡಿರುವ ಬಗ್ಗೆ ವಿಷಯ ತಿಳಿಸಿದ್ದಾನೆ. ನಂತರ ಚಿಕ್ಕಬಳ್ಳಾಪುರ ಪೊಲೀಸರು ಹೊಸಕೋಟೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಗರದ ಡಿವೈಎಸ್ಪಿ ಅಣ್ಣಾಸಾಹೇಬ್ ಪಾಟೀಲ್, ಇನ್ಸ್‍ಪೆಕ್ಟರ್ ಅಶೋಕ್ ಸೇರಿದಂತೆ ಬೆರಳಚ್ಚು ತಜ್ಷರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು