LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts

ಕರೋಹಟ್ಟಿ ಗ್ರಾಮದಲ್ಲಿ ಬೃಹತ್ ಉಚಿತ ಕಣ್ಣಿನ ತಪಾಸಣಾ ಶಿಬಿರ

ತಿ.ನರಸೀಪುರ: ದಿ.ಕಾನ್ ಸಿಂಗ್ ರಾಜ್ ಪುರೋಹಿತ್, ಗೌರಿದೇವಿ ರವರ 18ನೇ ವರ್ಷದ ಸ್ಮರಣಾರ್ಥವಾಗಿ ರೋಟರಿ ಸಂಸ್ಥೆ ಮಾಜಿ ಅಧ್ಯಕ್ಷ ಡಾ. ಕೆ.ಮಹೇಂದ್ರ ಸಿಂಗ್ ಕಾಳಪ್ಪ, ಮತ್ತು ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆ, ಕರೋಹಟ್ಟಿ ಗ್ರಾಮಸ್ಥರ ಸಂಯುಕ್ತ ಆಶ್ರಯದಲ್ಲಿ ಬೃಹತ್ ಉಚಿತ ಕಣ್ಣಿನ ತಪಾಸಣಾ ಶಿಬಿರ ನಡೆಯಿತು.
ತಾಲ್ಲೂಕಿನ ಕರೋಹಟ್ಟಿ ಗ್ರಾಮದ ಶ್ರೀ ಗುರುಮಲ್ಲೇಶ್ವರ ಮಠದಲ್ಲಿ ಮಹೇಂದ್ರಸಿಂಗ್ ಕಾಳಪ್ಪ ರವರ ತಂದೆ ಕಾನ್ ಸಿಂಗ್ ತಾಯಿ ಗೌರಿದೇವಿ ರವರ ಸ್ಮರಣಾರ್ಥವಾಗಿ ಆಯೋಜಿಸಿದ್ದ ಬೃಹತ್ ಉಚಿತ ಕಣ್ಣಿನ ತಪಾಸಣಾ ಶಿಬಿರ ಕಾರ್ಯಕ್ರಮ ಕುರಿತು ಮಹೇಂದ್ರ ಸಿಂಗ್ ಕಾಳಪ್ಪ ಮಾತನಾಡಿ ಪ್ರಸ್ತುತ ದಿನದಲ್ಲಿ ಆರೋಗ್ಯ ಚಿಕಿತ್ಸೆ ವೆಚ್ಚ ದುಬಾರಿಯಾಗಿದೆ. ಗ್ರಾಮೀಣ ಪ್ರದೇಶದ ಬಡ ಜನತೆಗೆ ಅನುಕೂಲವಾಗಲಿ ಎಂದು ನಮ್ಮ ತಂದೆ ತಾಯಿ ಹೆಸರಿನಲ್ಲಿ 18 ವರ್ಷಗಳಿಂದ ಕಣ್ಣಿನ ಆರೋಗ್ಯ ತಪಾಸಣಾ ಶಿಬಿರ ಶಿಬಿರವನ್ನು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದ್ದೇನೆ. ಶಿಬಿರದ ಸದುಪಯೋಗವನ್ನು ಅನೇಕ ಜನ ಪಡೆದುಕೊಂಡಿದ್ದಾರೆ. ದಿನಾಂಕ 13 -6- 2026 ಎರಡನೇ ಶನಿವಾರದಂದು ಬನ್ನೂರಿನ ರೋಟರಿ ಶಾಲೆ ಆವರಣದಲ್ಲಿ ಉಚಿತ ಕಣ್ಣಿನ ತಪಾಸಣ ಶಿಬಿರವನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶಿಬಿರದ ಸದುಪಯೋಗ ಪಡೆದುಕೊಳ್ಳಿ ಎಂದರು.ಕೊಯಮತ್ತೂರು ಅರವಿಂದ ಕಣ್ಣಿನ ಆಸ್ಪತ್ರೆ ನುರಿತ ವೈದ್ಯರಿಂದ ತಪಾಸಣೆ ನಡೆಸಿ ಶಸ್ತ್ರ ಚಿಕಿತ್ಸೆಗೆ ಒಳಪಡುವ ರೋಗಿಗಳನ್ನು ನಮ್ಮ ಸಾರಿಗೆ ವ್ಯವಸ್ಥೆಯಲ್ಲಿ ಉಚಿತವಾಗಿ ಕರೆದುಕೊಂಡು ಹೋಗಿ ಶಸ್ತ್ರ ಚಿಕಿತ್ಸೆ ಮುಗಿದ ನಂತರ ರೋಗಿಗಳ ಗ್ರಾಮಕ್ಕೆ ವಾಪಸ್ ತಂದು ಬಿಡಲಾಗುವುದು ಎಂದರು.ವೈದ್ಯರುಗಳಾದ ಡಾ. ಶಿವಾನಿ ನಮಲ, ಡಾ.ಕಾಜೊಲ್ ಪಾಟೀಲ್, ಡಾ.ರೋಷಿಣಿ, ಸಂಯೋಜಕ ಡಾ.ವಿಜಯ್ ಮಾತನಾಡಿದರು.ಈ ಸಂದರ್ಭದಲ್ಲಿ ಕೆ.ಎಂ. ಶಿವಮೂರ್ತಿ, ಕೆ.ಎನ್. ಆನಂದ್, ಗೌಡ್ರು ಮಾದಪ್ಪ, ರಾಜಶೇಖರ್, ನಂಜುಂಡಪ್ಪ, ಚಂದ್ರು ಮೂಗೂರು, ಶಂಕರ್ ನಾಗ್, ರಾಜೇಶ್, ಮಹೇಂದ್ರ, ರಮೇಶ್, ಹರ್ಷವರ್ಧನ್, ಜೀವನ್, ಬಸವರಾಜು, ಪವನ್, ಉಮೇಶ್, ಮಲ್ಲೇಶ್, ಮಲ್ಲಿಕಾರ್ಜುನ ಸ್ವಾಮಿ, ಶಂಭು ನಂಜುAಡಸ್ವಾಮಿ, ಪ್ರಭುಸ್ವಾಮಿ, ಪ್ರಕಾಶ್ ಗ್ರಾನೈಟ್ ಸೇರಿದಂತೆ ಇತರರು ಇದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು