LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Districts Kolar

ರೈತರ ನೆರವಿಗೆ ಧಾವಿಸಲು ನಿರ್ಲಕ್ಷ್ಯ ತೋರುತ್ತಿರುವ ಸರ್ಕಾರಗಳ ವಿರುದ್ಧ ಪ್ರತಿಭಟನೆ

ಕೋಲಾರ: ಹಣ್ಣಿನ ರಾಜ ಮಾವಿಗೆ ಬೆಂಬಲ ಬೆಲೆ ಘೋಷಣೆ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾ ಬಂದ್‌ಗೆ ಕೋಲಾರದಲ್ಲಿ ವಿವಿಧ ಸಂಸAಸ್ಥೆಗಳು ಮುಖಂಡರು ಬೆಂಬಲ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.
ನಗರ ಬಸ್ ನಿಲ್ದಾಣದ ವೃತ್ತದಲ್ಲಿ ಬೆಳಗ್ಗೆ ಜಮಾಯಿಸಿದ್ದ ರೈತ ಸಂಘ ಜೆಡಿಎಸ್ ಮುಖಂಡರು ರಸ್ತೆಗೆ ಮಾವಿನ ಕಾಯಿ ಸುರಿದು ಸುಮಾರು ಮೂರು ತಾಸಿಗೂ ಅಧಿಕ ಕಾಲ ರಸ್ತೆ ತಡೆದು ಪ್ರತಿಭಟಿಸಿದರು. ರೈತರ ನೆರವಿಗೆ ಧಾವಿಸಲು ನಿರ್ಲಕ್ಷ್ಯ ತೋರುತ್ತಿರುವ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಗ್ರೋಶ ವ್ಯಕ್ತಪಡಿಸಿದರು.
ರಸ್ತೆ ತಡೆ ಸಮಯದಲ್ಲಿ ಕೆಲ ವಾಹನ ಚಾಲಕರು ಮುಂದೆ ಹೋಗಲು ಪ್ರತಿಭಟನಾಕಾರರನ್ನು ಮನವಿ ಮಾಡಿದರು. ಇದಕ್ಕೆ ಒಪ್ಪದ ಹಿನ್ನಲೆಯಲ್ಲಿ ಚಾಲಕರು ಮಾತಿಕನ ಚಕಮಕಿ ಬೆಳೆಸಿಕೊಂಡರು. ಆಗ ಪೊಲೀಸರು ಮಧ್ಯ ಪ್ರವೇಶಿಸಿ ವಾಹನ ಸವಾರರ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಮನವೊಲಿಸಿದರು.
ಸಂಸದ ಎಂ.ಮಲ್ಲೇಶ್ ಬಾಬು ಮಾತನಾಡಿ, ಮಾವು ಬೆಳೆಗಾರರು ಎದುರಿಸುತ್ತಿರುವ ಬೆಲೆ ಕುಸಿತದ ಬಗ್ಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ನಾನು ತೋಟಗಾರಿಗೆ ಸಚಿವರಿಗೆ ಪತ್ರ ಬರೆದು, ಮನವರಿಕೆ ಮಾಡಿಕೊಟ್ಟಿದ್ದೇವೆ. ಅವರು ಇದೀಗ ಭೂಪಾಲ್‌ನಲ್ಲಿ ಇದ್ದು, ದೆಹಲಿಗೆ ಬಂದ ಕೂಡಲೇ ಬೆಲೆ ಘೋಷಣೆ ಮಾಡುವ ಭರವಸೆ ನೀಡಿದ್ದಾರೆ ಎಂದು ಹೇಳಿದರು.
ಈ ವಿಚಾರದಲ್ಲಿ ರಾಜ್ಯ ಸರ್ಕಾರದ ಪಾತ್ರವಿದ್ದು, ರ್ನಿಧಿಷ್ಟ ತೀರ್ಮಾನ ತೆಗೆದುಕೊಂಡು ಕೇಂದ್ರಕ್ಕೆ ತಿಳಿಸಿದಾಗ, ಇದಕ್ಕೆ ಪೂರಕವಾಗಿ ಕೇಂದ್ರ ಸರ್ಕಾರವು ತೀರ್ಮಾನ ತೆಗೆದುಕೊಳ್ಳುತ್ತದೆ. ರಾಜ್ಯ ಮುಖ್ಯಮಂತ್ರಿ ಈ ಸಮಸ್ಯೆಯನ್ನು ಗಂಭೀರವಾಗಿ ತೆಗೆದುಕೊಂಡು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಜೆಡಿಎಸ್ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ವರ್ಷಕ್ಕೊಮ್ಮೆ ಬರುವ ಮಾವು ಬೆಳೆಯನ್ನೇ ನಂಬಿ ಜಿಲ್ಲೆಯಲ್ಲಿ ಲಾಂತರ ಮಂದಿ ರೈತರು ಬದುಕು ಕಟ್ಟಿಕೊಂಡಿದ್ದಾರೆ. ನಾನಾಕಾರಣಗಳಿಂದ ಎರಡು ವರ್ಷಗಳಿಂದ ಬೆಲೆ ಕುಸಿದಿದ್ದು, ಇದಕ್ಕೆ ಕಾರಣ ಕಂಡು ಹಿಡಿದು ಸರ್ಕಾರ ಪರಿಹಾರ ಕಲ್ಪಿಸುವಲ್ಲಿ ವಿಲವಾಗಿದೆ ಎಂದು ಆರೋಪಿಸಿದರು.
ಇದು ನೆನ್ನೆ ಮೊನ್ನೆಯ ಸಮಸ್ಯೆಯಲ್ಲ, ಸತತ ಎರಡನೇ ವರ್ಷ ಮಾವು ಬೆಳೆಗಾರರು ಸಮಸ್ಯೆಗೆ ಸಿಲುಕಿದ್ದಾರೆ. ಈ ಬಗ್ಗೆ ಗಮನಕ್ಕೆ ಇದ್ದರು ಸಹ ರಾಜ್ಯ ಸರ್ಕಾರ ಬೆಂಬಲ ಬೆಲೆ ಘೋಷಣೆಗೆ ಮೀನಾಮೇಷ ಎಣಿಸುತ್ತಿದೆ ಎಂದು ದೂರಿದರು.
ರೈತ ಸಂದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ಈಗಾಗಲೇ ಆಂದ್ರದಲ್ಲಿ ತೋತಾಪುರ ಒಂದು ಕೆಜಿಗೆ 4 ರೂ. ಬೆಲೆ ಘೋಷಣೆ ಸರ್ಕಾರ ರೈತರ ನೆರವಿಗೆ ಧಾವಿಸಿದೆ. ಅಲ್ಲಿನ ಸಕ್ಕಾರ ರೈತರ ಬಗ್ಗೆ ಇರುವ ಕಾಳಜಿ, ಕಾಂಗ್ರೆಸ್ ರಾಜ್ಯ ಸರ್ಕಾರಕ್ಕಿಲ್ಲದಂತೆ ಕಾಣುತ್ತಿದೆ. ರೈತರ ಪಾಲಿಗೆ ಕರ್ನಾಟಕದಲ್ಲಿ ಸರ್ಕಾರವು ಸತ್ತು ಹೋಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.
ಮುಂದಿನ 24 ಗಂಟೆಗಳಲ್ಲಿ ಸರ್ಕಾರವು ಬೆಂಬಲ ಬೆಲೆ ಘೋಷಣೆ ಮಾಡಿ ಕ್ರಮತೆಗೆದುಕೊಳ್ಳಬೇಕು, ಯಾವುದೇ ರೀತಿ ಕ್ರಮಕ್ಕೆ ಒಂದಾಗದಿದ್ದರೆ ಜಿಲ್ಲೆಯಲ್ಲಿನ ಎಲ್ಲ ಶಾಸಕರ ಮನೆಗಳ ಮುಂದೆ ಮಾವು ಸುರಿದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕೋಮುಲ್ ನಿರ್ದೇಶಕ ಡಿ.ವಿ.ಹರೀಶ್, ವಿವಿಧ ಸಂಟನೆಗಳ ಮುಖಡರಾದ ನರೇಶ್ ಬಾಬು, ನಟರಾಜ್, ಲೋಕೇಶ್, ಗೋವಿಂದಪ್ಪ, ಶ್ರೀನಿವಾಸ್, ಪುಟ್ಟರಾಜು ಮತಿತರರು ಪಾಲ್ಗೊಂಡಿದ್ದರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು