LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Sports News

ಹಾರ್ದಿಕ್ ಪಾಂಡ್ಯ ಮತ್ತು ಅವರ ಅಣ್ಣ ಕೃನಾಲ್ ಪಾಂಡ್ಯ ನಡುವೆ ಬಿರುಕು

ಭಾರತದ ಸ್ಟಾರ್ ಆಟಗಾರ ಹಾರ್ದಿಕ್ ಪಾಂಡ್ಯ ಮತ್ತು ಅವರ ಅಣ್ಣ ಕೃನಾಲ್ ಪಾಂಡ್ಯ ನಡುವೆ ಬಿರುಕು ಮೂಡಿದೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಬೆಳವಣಿಗೆಗೆ ಹಾರ್ದಿಕ್ ಅವರ ಹೊಸ ಗರ್ಲ್ ಫ್ರೆಂಡ್ ಮಾಡೆಲ್ ಮಹಿಕಾ ಶರ್ಮಾ ಕಾರಣ ಎನ್ನಲಾಗುತ್ತಿದೆ. ಭಾರತ ತಂಡವು 2026ರ ಟಿ20 ವಿಶ್ವಕಪ್ ಗೆದ್ದಾಗ ಅಹಮದಾಬಾದ್‌ನಲ್ಲಿ ನಡೆದ ಭರ್ಜರಿ ಸಂಭ್ರಮಾಚರಣೆಯಲ್ಲಿ ಕೃನಾಲ್ ಪಾಂಡ್ಯ ಮತ್ತು ಅವರ ಪತ್ನಿ ಪಂಖುರಿ ಶರ್ಮಾ ಎಲ್ಲಿಯೂ ಕಾಣಿಸಿಕೊಂಡಿರಲಿಲ್ಲ.
ಅತ್ತ ಹಾರ್ದಿಕ್ ಪಾಂಡ್ಯ ಅವರ ಸಾಧನೆಯನ್ನು
ಅಭಿನಂದಿಸಿ ಕೃನಾಲ್ ಸಹ ಒಂದೇ ಒಂದು ಸೋಷಿ
ಯಲ್ ಮೀಡಿಯಾ ಪೋಸ್ಟ್ ಹಂಚಿಕೊAಡಿಲ್ಲ. ಇವೆಲ್ಲವೂ ಇದೀಗ ಅಣ್ಣ-ತಮ್ಮ ದೂರವಾಗಿದ್ದಾರೆ ಎಂಬ ವದಂತಿಗೆ ವದಂತಿಗೆ ಪುಷ್ಟಿ ನೀಡಿದೆ.
ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್ ಪಾಂಡ್ಯ ದೂರವಾಗಲು ಮಹಿಕಾ ಶರ್ಮಾ ಕಾರಣ ಎನ್ನಲಾಗುತ್ತಿದೆ. ಮಹಿಕಾ ಹಾರ್ದಿಕ್ ಲೈಫ್‌ಗೆ ಎಂಟ್ರಿ ಕೊಟ್ಟ ಬಳಿಕವಷ್ಟೇ ಅಣ್ತಂಮ್ಮದಿರುವ ಎಲ್ಲೂ ಜೊತೆಯಾಗಿ ಕಾಣಿಸಿಕೊಂಡಿಲ್ಲ. ಹೀಗಾಗಿಯೇ ಪಾಂಡ್ಯ ಬ್ರದರ್ಸ್ ದೂರವಾಗಲು ಮಹಿಕಾ ಶರ್ಮಾ ಕಾರಣ ಎನ್ನಲಾಗುತ್ತಿದೆ.ಹಾರ್ದಿಕ್ ಪಾಂಡ್ಯ ಅವರು ಮಾಜಿ ಪತ್ನಿ ನತಾಶಾ ಅವರಿಂದ ದೂರಾದ ನಂತರ, ಮಾಡೆಲ್ ಮತ್ತು ನಟಿ ಮಹಿಕಾ ಶರ್ಮಾ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ. 2025ರ ಅಕ್ಟೋಬರ್‌ನಲ್ಲಿ ಹಾರ್ದಿಕ್ ಈ ಸಂಬಂಧವನ್ನು ಅಧಿಕೃತಗೊಳಿಸಿದ್ದರು.
ವಿಶ್ವಕಪ್ ಪಂದ್ಯಗಳ ಸಮಯದಲ್ಲಿ ಮಹಿಕಾ ಮೈದಾನದಲ್ಲಿ ಹಾರ್ದಿಕ್ ಅವರಿಗೆ ಬೆಂಬಲವಾಗಿ ನಿಂತಿದ್ದರು. ಕುಟುಂಬದ ಆಪ್ತ ಮೂಲಗಳ ಪ್ರಕಾರ, ಹಾರ್ದಿಕ್ ಅವರ ಈ ಹೊಸ ಜೀವನದ ಆಯ್ಕೆಯು ಕುಟುಂಬದ ಸದಸ್ಯರಲ್ಲಿ, ವಿಶೇಷವಾಗಿ ಕೃನಾಲ್ ಮತ್ತು ಪಂಖುರಿ ಅವರಲ್ಲಿ ಅಸಮಾಧಾನ ಮೂಡಿಸಿರುವ ಸಾಧ್ಯತೆಯಿದೆ.
ಅತ್ತ ಹಾರ್ದಿಕ್ ಅವರ ಮಾಜಿ ಪತ್ನಿ ನತಾಶಾ ಸ್ಟಾಂಕೋವಿಚ್ ಮತ್ತು ಅವರ ಮಗ ಅಗಸ್ತ್ಯ ಅವರೊಂದಿಗೆ ಕೃನಾಲ್ ದಂಪತಿ ಈಗಲೂ ಆತ್ಮೀಯವಾಗಿದ್ದಾರೆ. ಇದು ಹಾರ್ದಿಕ್ ಮತ್ತು ಕೃನಾಲ್ ನಡುವೆ ಅಂತರ ಉಂಟುಮಾಡಿರಬಹುದು ಎಂದು ಹೇಳಲಾಗುತ್ತಿದೆ.
ಇದಾಗ್ಯೂ ಅಣ್ಣನ ನಡುವಿನ ಸಂಬAಧದ ಬಗ್ಗೆ ಹಾರ್ದಿಕ್ ಇದುವರೆಗೆ ಯಾವುದೇ ನೇರ ಪ್ರತಿಕ್ರಿಯೆ ನೀಡಿಲ್ಲ. ಆದರೆ ಪ್ರಸ್ತುತ ಸನ್ನಿವೇಶಗಳನ್ನು ಗಮನಿಸಿದರೆ ಪಾಂಡ್ಯ ಬ್ರದರ್ಸ್ ದೂರವಾಗಿರುವುದು ಖಚಿತ. ಏಕೆಂದರೆ ಜೀವದಂತಿದ್ದ ತಮ್ಮ ಎರಡನೇ ಬಾರಿ ಟಿ20 ವಿಶ್ವಕಪ್ ಗೆದ್ದರೂ ಕೃನಾಲ್ ಪಾಂಡ್ಯ ಸೋಷಿಯಲ್ ಮೀಡಿಯಾ ಮೂಲಕ ಒಂದೇ ಒಂದು ಪೋಸ್ಟ್ ಹಂಚಿಕೊAಡಿಲ್ಲ ಎಂಬುದೇ ಇದಕ್ಕೆ ಸಾಕ್ಷಿ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು