LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Crime News

ಪ್ರತ್ಯೇಕ ಅಪಘಾತ: ಐವರು ಸಾವು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಿನ್ನೆ ರಾತ್ರಿ 5 ಕಡೆ ಅಪಘಾತ ಸಂಭವಿಸಿ ಐದು ಜನ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಹೊಸಕೋಟೆ, ನೆಲಮಂಗಲ ಮತ್ತು ದೊಡ್ಡಬಳ್ಳಾಪುರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಈ ಘಟನೆ ಜರುಗಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಚಗುಂಡನಹಳ್ಳಿ ಬಳಿ ಟಿಪ್ಪರ್ ಲಾರಿ ಮೋಟರ್ ಬೈಕ್ ಸವಾರ ನಿಗೆ ಡಿಕ್ಕಿ ಹೊಡೆದ ಪರಿಣಾಮ
ಧರ್ಮೇಂದ್ರ ಕುಮಾರ್(38) ಎಂಬ ವ್ಯಕ್ತಿ ಮೃತಪಟ್ಟಿರುತ್ತಾರೆ.ಕೆಲಸ ಮುಗಿಸಿ ಮನೆಗೆ ಹಿಂತಿರುಗುವ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿರುತ್ತದೆ. ದೊಡ್ಡಬಳ್ಳಾಪುರ ಟೌನ್  ಪೊಲೀಸ್ ಠಾಣದ ವ್ಯಾಪ್ತಿಯ ಐಬಿ ಸರ್ಕಲ್ ಬಳಿ ಅನಿತಾ(23) ಎಂಬುವವರು ರಸ್ತೆ ದಾಟುವ ಸಮಯದಲ್ಲಿ ಮೋಟರ್ ಬೈಕ್ ಸವಾರ ಅತಿ ವೇಗವಾಗಿ ಬಂದು ಈ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ತೀವ್ರತರವಾದ ತಲೆಗೆ ಗಾಯ ಸಂಭವಿಸಿ ಮೃತಪಟ್ಟಿರುತ್ತಾರೆ.

ನೆಲಮಂಗಲ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಯಣ್ಣ ನಗರದಲ್ಲಿರುವ ಆಂಜನೇಯ ದೇವಸ್ಥಾನದ ಬಳಿ ಮೋಟರ್ ಬೈಕ್ ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮುನಿ ನರಸಪ್ಪ(60) ಮೃತಪಟ್ಟಿರುತ್ತಾರೆ.ಅಂಗಡಿಗೆ ಹೋಗಿ ಹಿಂತಿರುಗ ಸಮಯದಲ್ಲಿ ರಸ್ತೆ ದಾಟುತ್ತಿರುವಾಗ ಘಟನೆ ಸಂಭವಿಸಿರುತ್ತದೆ.
ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಅಟ್ಟೂರ್ ಗೇಟ್ ಬಳಿ ಸುಮಾರು 50 ವರ್ಷದ ಗಂಡಸಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿರುವುದರಿಂದ ವ್ಯಕ್ತಿ ಮೃತಪಟ್ಟಿರುತ್ತಾನೆ.ಮತ್ತೊಂದು ಪ್ರಕರಣದಲ್ಲಿ ಚಿಮಸಂದ್ರ ಗೇಟ್ ಬಳಿ ಪಾದ ಚಾರಿಗೆ ಟಾಟಾ ಇಂಡಿಕಾ ಕಾರ್ ಡಿಕ್ಕಿ ಹೊಡೆದ ಪರಿಣಾಮ ರಾಜಶೇಖರ್(52) ಮೃತಪಟ್ಟಿರುತ್ತಾನೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು