LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಒಂದು ಸರಳ ಪ್ರೇಮಕಥೆ ಮುಕ್ತಾಯ

ಕನ್ನಡ ಚಿತ್ರರಂಗದಲ್ಲಿ ವಿಭಿನ್ನ ಸಿನಿಮಾಗಳ ಮೂಲಕ ಛಾಪೂ ಮೂಡಿಸಿರುವ ಸಿಂಪಲ್ ಸುನಿ ಹಾಗೂ ವಿನಯ್ ರಾಜ್ ಕುಮಾರ್ ಕಾಂಬಿನೇಷನ್ ನಲ್ಲಿ ಬರ್ತಿರುವ ಬಹುನಿರೀಕ್ಷಿತ ಸಿನಿಮಾ ಒಂದು ಸರಳ ಪ್ರೇಮ ಕಥೆ. ಪೋಸ್ಟರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಈ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದೆ.

ಮೈಸೂರಿನಲ್ಲಿ ಕೊನೆಯ ಹಂತದ ಚಿತ್ರೀಕರಣ ಮುಗಿಸಿ ಚಿತ್ರತಂಡ ಕುಂಬಳಕಾಯಿ ಒಡೆ ದಿದೆ.ವಿಶೇಷ ಅಂದರೆ ವಿನಯ್ ಸಿನಿಮಾದಲ್ಲಿ ಅಪ್ಪ ರಾಘಣ್ಣ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಚಿತ್ರೀಕರಣ ಮುಗಿಸಿ ಮಾಧ್ಯಮದವರೊಂದಿಗೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ನಿರ್ದೇಶಕ ಸುನಿ ಮಾತನಾಡಿ, ಟೈಟಲ್ ಹೇಳುವಂತೆ ಇದೊಂದು ಸರಳ ಪ್ರೇಮಕಥೆ.

ಸಂಗೀತ ನಿರ್ದೇಶಕನ ಪ್ರೇಮಕಥೆಯಾಗಿರುವುದರಿಂದ ಸಂಗೀತಮಯ ಜರ್ನಿ..ಅಂದರೆ ನಮ್ಮ ಆಲ್ಬಂ ತೆಗೆದುಕೊಂಡು ಹಾಕಿಕೊಂಡರೆ ಮೈಸೂರಿನಿಂದ ಬೆಂಗಳೂರು ತಲುಪುತ್ತೀರಾ..ಒಟ್ಟು ಸಿನಿಮಾದಲ್ಲಿ 11 ಸಾಂಗ್ ಗಳು ಇವೆ. ಎಲ್ಲಾ ಪ್ರಕಾರದ ಸಂಗೀತಗಳು ಹಾಡಿನಲ್ಲಿದೆ. ಖುಷಿ ವಿಷಯ ಏನಂದರೆ ಮೊದಲ ದಿನ ವಿನಯ್ ಚಿತ್ರೀಕರಣ ಮಾಡಿದೆ. ಕೊನೆಯ ದಿನ ರಾಘಣ್ಣ ಚಿತ್ರೀಕರಣ ಮಾಡಿದ್ದೇನೆ.

ರಾಘಣ್ಣ ಮಾತನಾಡಿ, ಸಿಂಪಲ್ ಆಗಿ ಒಂದ್ ಲವ್ ಸ್ಟೋರಿ ಸಿನಿಮಾ ನೋಡಿದ್ಮೇಲಿನಿಂದ ಸುನಿ ಅವರ ಸಿನಿಮಾಗಳಲ್ಲಿ ನಟಿಸಬೇಕು ಎನಿಸಿತ್ತು. ನನ್ನ ಮಗ ನಟಿಸುತ್ತಿದ್ದೇನೆ ಎಂದಾಗ ದೊಡ್ಡ ವಿಷಯ ಎನಿಸಿತು. ನನಗೆ ಟೈಟಲ್ ತುಂಬಾ ಇಷ್ಟವಾಯಿತು. ಸಂಗೀತ ಅಂದರೆ ಏಳು ಸ್ವರಗಳು ಇರುತ್ತವೆ. ನನ್ನ ಒಂದು ಸ್ವರವಾಗಿ ಸೇರಿಸಿಕೊಂಡಿದ್ದಾರೆ.

ಅದು ನನಗೆ ಸಂತೋಷ ಕೊಡುತ್ತದೆ.ನಟ ವಿನಯ್ ರಾಜ್ ಕುಮಾರ್ ಮಾತನಾಡಿ, ಒಂದು ಸರಳ ಪ್ರೇಮಕಥೆ..ಈ ಸಿನಿಮಾದಲ್ಲಿ ನಟಿಸಿದ ಅನುಭವ ತುಂಬಾ ಚೆನ್ನಾಗಿತ್ತು. ಶೂಟಿಂಗ್ ಗೆ ಯಾವುದೇ ತೊಂದರೆ ಆಗದಂತೆ ನಿರ್ಮಾಪಕರಾದ ರಮೇಶ್ ಅವರು ಮಾಡಿಕೊಟ್ಟರು. ಸುನಿ ಅವರ ಜೊತೆ ಕೆಲಸ ಮಾಡಲು ಖುಷಿ ಕೊಡ್ತು. ಸುನಿ ಅವರಂತೂ ಒಬ್ಬ ಕಲಾವಿದನಿಗೆ ನಟಿಸಲು ತುಂಬ ಕಂಪರ್ಟ್ ಫೀಲ್ ಕೊಡ್ತಾರೆ ಎಂದರು.

ಸಂಗೀತ ನಿರ್ದೇಶಕ ವೀರ್ ಸಮರ್ಥ್ ಮಾತನಾಡಿ, ನನ್ನ ಸಿನಿಮಾ ಕರಿಯರ್ ನ ಅತ್ಯಂತ ಉತ್ಕೃಷ್ಟ ಮ್ಯೂಸಿಕ್ ಸಂಗೀತ ಸಿನಿಮಾ ಒಂದು ಸರಳ ಪ್ರೇಮ ಕಥೆ. ನನ್ನ ಎರಡನೇ ಸಿನಿಮಾದಲ್ಲಿ 10 ಹಾಡುಗಳಿದ್ದವು. ತುಂಬ ದೊಡ್ಡ ಹೆಸರು ತಂದುಕೊಟ್ಟಿತ್ತು. ಆ ನಂತರ ಯೋಗರಾಜ್ ಭಟ್ ಅವರ ಪ್ರೊಡಕ್ಷನ್ ನಲ್ಲಿ ದೇವ್ರೇ ಅಂತಾ ಮಾಡಿದ್ದೆ. ಅದು ಒಳ್ಳೆ ಹೆಸರು ತಂದುಕೊಟ್ಟಿತ್ತು ಎಂದರು.

ನಿರ್ಮಾಪಕರಾದ ಮೈಸೂರು ರಮೇಶ್ ಮಾತನಾಡಿ, ನಾನು ಪುಣ್ಯವಂತ. ಕನ್ನಡ ಚಿತ್ರರಂಗದಲ್ಲಿ ಯಾರೇ ಏನೇ ಮಾಡಬೇಕು ಎಂದರೆ ದೊಡ್ಮನೆ ಆಶೀರ್ವಾದ ಬೇಕು. ನನ್ನ ಸಿನಿಮಾದಲ್ಲಿ ರಾಘಣ್ಣ ಹಾಗೂ ವಿನಯ್ ಅವರು ನಟಿಸಿರುವುದು ಖುಷಿ ಕೊಟ್ಟಿದೆ. ಈ ಸಿನಿಮಾವನ್ನು ತುಂಬಾ ಪ್ರೀತಿಯಿಂದ ಮಾಡಿದ್ದೇನೆ ಎಂದರು.

ಸ್ವಾತಿಷ್ಠ ಕೃಷ್ಣನ್, ರಾಧಾ ಕೃಷ್ಣ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ಎಂಬ ಇಬ್ಬರು ಚೆಲುವೆಯರ ವಿನಯ್ ರಾಜ್ಕುಮಾರ್ ಗೆ ಜೋಡಿಯಾಗಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದವರು ತಾರಾಬಳಗದಲ್ಲಿದ್ದಾರೆ. ಆದಿ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ನೀಡುತ್ತಿದ್ದು, ಕಾರ್ತಿಕ್ ಕ್ಯಾಮೆರಾ ಹಿಡಿದಿದ್ದಾರೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು