LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ಒಂದು ಸರಳ ಪ್ರೇಮಕಥೆ ಪ್ರೀ ರಿಲೀಸ್ ಇವೆಂಟ್ ಸಂಭ್ರಮ

ವಿನಯ್ ರಾಜ್ ಕುಮಾರ್ ನಟನೆಯ ಒಂದು ಸರಳ ಪ್ರೇಮಕಥೆ ಸಿನಿಮಾದ ಅದ್ಧೂರಿ ಪ್ರಚಾರ ನಡೆಸಿರುವ ಚಿತ್ರತಂಡ ಖಾಸಗಿ ಹೋಟೆಲ್ ನಲ್ಲಿ ಪ್ರೀ-ರಿಲೀಸ್ ಕಾರ್ಯಕ್ರಮ ಏರ್ಪಡಿಸಿತ್ತು.ಕಾರ್ಯಕ್ರಮಕ್ಕೆ ಹಲವು ಅತಿಥಿಗಳು ಆಗಮಿಸಿದ್ದರು. ಅಶ್ವಿನಿ ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಹಾಗೂ ಅವರ ಪತ್ನಿ. ವಿನಯ್ ರಾಜ್ಕುಮಾರ್ ಸಹೋದರ ಯುವ ರಾಜ್ ಕುಮಾರ್, ಶ್ರೀಮುರಳಿ, ಧಿರೇನ್ ರಾಮ್ ಕುಮಾರ್ ಆಗಮಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

ಶ್ರೀಮುರಳಿ ಮಾತನಾಡಿ, ಒಂದು ಸರಳ ಪ್ರೇಮಕಥೆಯಲ್ಲಿ ವಿನಯ್ ಬಹಳ ಚೆನ್ನಾಗಿ ಕಾಣಿಸಿದ ಎನಿಸುತ್ತಿದೆ. ವಿನಯ್ ಕ್ಯಾರೆಕ್ಟರ್ ಬಿಟ್ಟು ಕಿಂಚಿತ್ತು ಅಲ್ಲಾಡದೆ, ಪಾತ್ರವನ್ನು ಬಹಳ ತೂಕದಿಂದ, ಜವಾಬ್ದಾರಿಯಿಂದ ನಿಭಾಯಿಸಿದ್ದಾರೆ ಎಂಬ ನಂಬಿಕೆ ಇದೆ. ಈ ಬಗ್ಗೆ ಹೆಮ್ಮೆ ಇದೆ. ಈ ಚಿತ್ರದಲ್ಲಿ ಪ್ರತಿಯೊಂದು ಕ್ಯಾರೆಕ್ಟರ್ಸ್, ಆಕ್ಟರ್ಸ್ ತುಂಬಾ ಅಚ್ಚುಕಟ್ಟಾಗಿ ಕಾಣಿಸಿದ್ರಿ.

ಇಬ್ಬರು ಹೀರೋಯಿನ್ ಇಬ್ಬರು ಮುದ್ದಾಗಿ ಕಾಣಿಸ್ತಾರೆ. ಸುನಿ ಅವರ ಮೇಕಿಂಗ್ ಸ್ಟೈಲ್ ಸೂಪರ್. ಅವರು ಚೆನ್ನಾಗಿ ಪ್ರಿಪೇರ್ ಆಗ್ತಾರೆ. ಅವರು ಹೀರೋನಾ ಪ್ರೀತಿಸ್ತಾರೆ. ಸಿನಿಮಾ ಚೆನ್ನಾಗಿ ಮೂಡಿ ಬರುತ್ತದೆ. ಇಡೀ ಸರಳ ಪ್ರೇಮಕಥೆ ತಂಡಕ್ಕೆ ಒಳ್ಳೆಯದಾಗಲಿ ಎಂದರು.
ವಿನಯ್ ರಾಜ್ ಕುಮಾರ್ ಮಾತನಾಡಿ, ಕಳೆದೊಂದು ವಾರದಿಂದ ಸಾಕಷ್ಟು ಪ್ರಚಾರ ಮಾಡಿದ್ದೇವೆ. ತುಂಬಾ ಒಳ್ಳೆ ಪ್ರತಿಕ್ರಿಯೆ ಬಂತು. ಸಾಕಷ್ಟು ಪ್ರೀತಿ ಬಂತು. ಶೂಟಿಂಗ್ ನಂತರ ಎಲ್ಲರನ್ನೂ ನೋಡುತ್ತಿದ್ದೇನೆ.

ಖುಷಿಯಾಗುತ್ತಿದೆ. ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ಎಂದರೆ ನನಗೆ ತುಂಬಾ ಇಷ್ಟ. ಮನಸಿಗೆ ಸಾಕಷ್ಟು ಸಮಾಧಾನ ಕೊಡುತ್ತದೆ. ಖುಷಿ, ತೃಪ್ತಿ ಸಿಗುತ್ತದೆ. ಅತಿಶಯ ಪಾತ್ರ ಪ್ಲೇ ಮಾಡಲು ತುಂಬಾ ಖುಷಿಕೊಡ್ತು ಎಂದರು.ನಿರ್ದೇಶಕ ಸಿಂಪಲ್ ಸುನಿ ಮಾತನಾಡಿ, ನಮ್ಮ ಸಿನಿಮಾಗೆ ಹಾರೈಸಲು ಬಂದಿರುವ ಪ್ರತಿಯೊಬ್ಬರಿಗೂ ಧನ್ಯವಾದಗಳು. ಅಶ್ವಿನಿಮೇಡಂ ಸಿನಿಮಾ ಸೆಟ್ ಗೆ ಬಂದಿದ್ರಿ, ಸಾಂಗ್ ರಿಲೀಸ್ ಮಾಡಿಕೊಟ್ರಿ. ಪ್ರತಿಯೊಂದು ಹೆಜ್ಜೆಯಲ್ಲಿ ನಮ್ಮ ಜೊತೆಗೆ ಇರೋದಿಕ್ಕೆ ಧನ್ಯವಾದ. ಒಂದು ಸರಳ ಪ್ರೇಮಕಥೆ ನಾನು ಅಸಿಸ್ಟೆಂಟ್ ಡೈರೆಕ್ಟರ್ ಆಗಿದ್ದಾಗ ರಿಜಿಸ್ಟ್ರಾರ್ ಮಾಡಿದ ಟೈಟಲ್. ನಿಮ್ಮ ಬೆಂಬಲ ಹಾರೈಕೆ ಇರಲಿ ಎಂದರು.

ನಾಯಕಿ ಸ್ವಾತಿಷ್ಠ ಕೃಷ್ಣನ್ ಮಾತನಾಡಿ, ಒಂದು ಸರಳ ಪ್ರೇಮ ಕಥೆ ನನ್ನ ಮೊದಲ ಕನ್ನಡ ಸಿನಿಮಾ. ತುಂಬಾ ಖುಷಿಯಾಗುತ್ತಿದೆ. ನಾನು ಜರ್ನಲಿಸ್ಟ್ ಪಾತ್ರ ಮಾಡಿದ್ದೇನೆ. ರಿಯಲ್ ಲೈಫ್ ನಲ್ಲಿ ನಾನು ಜರ್ನಲಿಸಂ ಸ್ಟೂಡೆಂಟ್. ಸುನಿ ಸರ್, ವಿನಯ್ ಅವರ ಜೊತೆ ಕೆಲಸ ಮಾಡಿದ್ದು ಖುಷಿ ಕೊಟ್ಟಿದೆ. ಇಡೀ ತಂಡಕ್ಕೆ ತುಂಬಾ ಧನ್ಯವಾದಗಳು. ಇದೊಂದು ಪಕ್ಕ ಫ್ಯಾಮಿಲಿ ಎಂಟರ್ ಟೈನರ್. ನಿಮ್ಮ ಕುಟುಂಬದ ಜೊತೆ ನೋಡಿ ನಿಮಗೆ ಇಷ್ಟವಾಗುತ್ತದೆ ಎಂದುಕೊಳ್ಳುತ್ತೇನೆ. ಕನ್ನಡ ಹುಡುಗಿಯನ್ನು ಬಿಟ್ಟುಕೊಂಡುವುದಿಲ್ಲ ಅಂತಾ ಗೊತ್ತು. ನಿಮ್ಮ ಬೆಂಬಲ ಬೇಕು ಎಂದರು.

ಸಿಂಪಲ್ ಸುನಿ ನಿರ್ದೇಶನದ ಒಂದು ಸರಳ ಪ್ರೇಮಕಥೆ ಸಿನಿಮಾದಲ್ಲಿ ವಿನಯ್ ರಾಜ್ ಕುಮಾರ್ ನಾಯಕನಾಗಿ, ರಾಧಾ ಕೃಷ್ಣ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ , ಸ್ವಾತಿಷ್ಠ ಕೃಷ್ಣನ್ ನಾಯಕಿಯರಾಗಿ ನಟಿಸಿದ್ದಾರೆ. ರಾಘವೇಂದ್ರ ರಾಜ್ಕುಮಾರ್ ಅವರು ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದ ತಾರಾಬಳಗ ಚಿತ್ರದಲ್ಲಿದೆ. ಆದಿ ಅವರ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ಹಾಗೂ ಕಾರ್ತಿಕ್ ಅವರ ಕ್ಯಾಮರಾ ಶ್ರಮವಿದೆ. ಮೈಸೂರು ರಮೇಶ ಚಿತ್ರದ ನಿರ್ಮಾಪಕರು.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು