LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Entertainment News

ತೆರೆಗೆ ಬರಲು ರೆಡಿಯಾದ ಸಿಂಪಲ್ ಸುನಿ `ಮೋಡ ಕವಿದ ವಾತಾವರಣ'

ಸಿನಿಮಾ ಮೋಡ ಕವಿದ ವಾತಾವರಣ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ ಜೂನ್ 26ಕ್ಕೆ ಸಿಂಪಲ್ ಸುನಿ ಚಿತ್ರ ರಿಲೀಸ್
ನಿರ್ದೇಶಕ ಸಿಂಪಲ್ ಸುನಿ ತಮ್ಮ ಶಿಷ್ಯನಿಗಾಗಿ ಮೋಡ ಕವಿದ ವಾತಾವರಣ ಸೃಷ್ಟಿಸಿದ್ದಾರೆ. ಅರ್ಥಾತ್ ಸುನಿ ಅವರ ಗರಡಿಯಲ್ಲಿ ಪಳಗಿರುವ ಯುವ ಪ್ರತಿಭೆ ಶೀಲಮ್ ಗಾಗಿ ಹೊಸ ಸಿನಿಮಾ ಮಾಡಿದ್ದಾರೆ. ಅದುವೇ ಮೋಡ ಕವಿದ ವಾತಾವರಣ. ಟೈಟಲ್ ನಿಂದ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಜೂನ್ 26ರಂದು ಮೋಡ ಕವಿದ ವಾತಾವರಣ ಸಿನಿಮಾ ತೆರೆಗೆ ಬರ್ತಿದೆ. ಅಶ್ವಿನ್ ಡಿಸೈನ್ ಮಾಡಿರುವ ಚೆಂದದ ಪೋಸ್ಟರ್ ಮೂಲಕ ರಿಲೀಸ್ ಡೇಟ್ ರಿವೀಲ್ ಮಾಡಲಾಗಿದೆ. ಶೀಲಮ್ ಅವರು ಈ ಹಿಂದೆ ಹಲವು ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಆದರೆ ಈಗ `ಮೋಡ ಕವಿದ ವಾತಾವರಣ'ದ ಮೂಲಕ ಪೂರ್ಣ ಪ್ರಮಾಣದ ನಾಯಕನಾಗಿ ಅದೃಷ್ಟ ಪರೀಕ್ಷೆಗೆ ಇಳಿಯುತ್ತಿದ್ದಾರೆ. ಸೈಂಟಿಫಿಕ್ ಫಿಕ್ಷನ್ ಲವ್ ಸ್ಟೋರಿ ಹೊಂದಿರುವ ಮೋಡ ಕವಿದ ವಾತಾವರಣ ಚಿತ್ರದಲ್ಲಿ ಶೀಲಮ್ ಗೆ ಜೋಡಿಯಾಗಿ ಸಾತ್ವಿಕಾ ಹಾಗೂ ಮೋಕ್ಷಾ ಕುಶಾಲ್ ನಟಿಸಿದ್ದಾರೆ.
`ಒಂದು ಸರಳ ಪ್ರೇಮಕಥೆ' ಸಿನಿಮಾ ನಿರ್ಮಾಣ ಮಾಡಿದ್ದ ರಾಮ್ ಮೂವೀಸ್ ಅವರೆ ಈ ಸಿನಿಮಾ ನಿರ್ಮಾಣ ಮಾಡಿದೆ. ಮೈಸೂರು ರಮೇಶ್, ಶ್ರೀರಂಗರಾಜು, ಲೋಕೇಶ್ ಬೆಳವಾಡಿ ಹಾಗೂ ಗೋವಾ ರಮೇಶ್ ನಿರ್ಮಾಣ ಮಾಡಿದ್ದಾರೆ. ಮೋಡ ಕವಿದ ವಾತಾವರಣ ಸಿನಿಮಾಗೆ ಸಂತೋಷ್ ರೈ ಪಾತಾಜೆ ಕ್ಯಾಮೆರಾ ಹಿಡಿದಿದ್ದು, ಜೂಡಾ ಸ್ಯಾಂಡಿ ಸಂಗೀತ ನಿರ್ದೇಶನ ಹಾಗೂ ಆದಿತ್ಯ ಕಶ್ಯಪ್ ಸಂಕಲನ ಸಿನಿಮಾಗಿದೆ. ಈಗಾಗಲೇ ಸಂಜಿತ್ ಹೆಗಡೆ ಹಾಡಿರುವ `ನನ್ನೆದೆಯ ಹಾಡೊಂದನು' ಜನಮನ್ನಣೆ ಗಳಿಸಿದೆ. ಸರೆಗಮ ಒಳ್ಳೆ ಮೊತ್ತಕ್ಕೆ ಆಡಿಯೋ ಹಕ್ಕನ್ನು ತನ್ನದಾಗಿಸಿಕೊಂಡಿದೆ.

Author
Indu Sanje
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭಾರತೀಯ ಮೂಲದ ಆಪ್ತ ಕಾಶ್ ಪಟೇಲ್ ರನ್ನು FBI ಮುಖ್ಯಸ್ಥರಾಗಿ ನೇಮಿಸಿದ Donald Trumpಇಂದು ಸಂಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ.ಪದ್ಮ ನಾಗರಾಜು ಅವರಿಗೆ ಕನ್ನಡ ಜಾನಪದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನತಮಿಳುನಾಡಿಗೆ ನೀರು ಬಿಡಬಾರದೆಂದು ಆಗ್ರಹಿಸಿ ಕನಕಪುರದಲ್ಲಿ ಖಾಲಿ ಕೊಡ ಹಿಡಿದು ರಸ್ತೆ ತಡೆದು ಪ್ರತಿಭಟನೆಡ್ರಗ್ಸ್ ಬೇಡ ಬ್ರೋ-ಜಾಗೃತಿ ಅಭಿಯಾನ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ: ಸಚಿವ ಕೆ.ಹೆಚ್.ಮುನಿಯಪ್ಪಕಾಂಗ್ರೆಸ್ ಹೈಕಮಾಂಡ್‌ನ ದೂರದೃಷ್ಟಿಯ ನಾಯಕತ್ವಕ್ಕೆ ಐಎನ್‌ಟಿಯುಸಿ ಮನವಿಪಾಲನಹಳ್ಳಿ ಮಠದಲ್ಲಿ ಗುರು ಪೂರ್ಣಿಮಾ ಮಹೋತ್ಸವ: “ಗುರು ಮಾರ್ಗವೇ ಜೀವನದ ಸನ್ಮಾರ್ಗ” ಪೂಜ್ಯ ಶ್ರೀ ಸಿದ್ದರಾಜು ಸ್ವಾಮೀಜಿಸರ್ಕಾರಿ ಸೇವೆಗೆ ಸೇರಿದ ಪ್ರತಿಯೊಬ್ಬ ಅಧಿಕಾರಿಯಾಗಲಿ ನೌಕರರಾಗಲಿ ವರ್ಗಾವಣೆ ಹಾಗೂ ನಿವೃತ್ತಿ ಸಹಜ ಪ್ರಕ್ರಿಯೆಯಾಗಿದೆ: ಸಿಪಿ ಅಶ್ವಥ್ ನಾರಾಯಣ್ಹಾರ್ದಿಕ್ ಪಾಂಡ್ಯರ ಮೇಲೆ ಕಣ್ಣಿಟ್ಟ ಡೆಲ್ಲಿ ಕ್ಯಾಪಿಟಲ್ಸ್ಏಕದಿನ ವಿಶ್ವಕಪ್ ಗೆ 10 ತಂಡಗಳು ಆಯ್ಕೆರೆಕ್ಕೆ ಮುರಿದ ಹಕ್ಕಿಯು ಹಾರುತಿದೆ ನೋವಿನಿಂದ ನವಜಾಗೃತಿಯತ್ತ... ಬದಲಾವಣೆಯ ಪರ್ವದತ್ತ" ಡಾ.ಜಿ.ವೈ. ಪದ್ಮನಾಗರಾಜು